More

  ಈ ಒಂದು ಗಿಫ್ಟ್​ ಕೊಟ್ಟರೆ ನಾನು ನಿಮ್ಮವಳು! ಅಭಿಮಾನಿಗಳಿಗೆ ಬಂಪರ್​ ಆಫರ್​ ಕೊಟ್ಟ ಅನುಪಮಾ

  ಹೈದರಾಬಾದ್​​: ಬಹುಭಾಷಾ ನಟಿ ಅನುಪಮಾ ಪರಮೇಶ್ವರನ್​ ಕೆಲವು ದಿನಗಳಿಂದ ಬಹಳ ಸುದ್ದಿಯಲ್ಲಿದ್ದಾರೆ. ಟಾಲಿವುಡ್​ನಲ್ಲಿ ಟಿಲ್ಲು ಸ್ಕ್ವೇರ್​ ಸಿನಿಮಾದ ಟ್ರೈಲರ್​ ಬಿಡುಗಡೆಯಾದಾಗಿನಿಂದ ಅನುಪಮಾ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದ್ದಾರೆ. ಅದಕ್ಕೆ ಕಾರಣವೂ ಇದೆ. ಅದೇನೆಂದರೆ, ಇದುವರೆಗೂ ಸಾಂಪ್ರದಾಯಿಕ ಪಾತ್ರಗಳಲ್ಲಿ ನಟಿಸುತ್ತಿದ್ದ ಅನುಪಮಾ, ದಿಢೀರನೇ ಬೋಲ್ಡ್​ ಪಾತ್ರದಲ್ಲಿ ನಟಿಸಿದ್ದು, ಅವರ ಕಟ್ಟಾ ಅಭಿಮಾನಿಗಳಿಗೆ ಬಹಳ ಬೇಸರವಾಗಿದೆ.

  ತಾಜಾ ಸಂಗತಿ ಏನೆಂದರೆ, ಅಭಿಮಾನಿಗಳ ಅಸಮಾಧಾನದ ನಡುವೆ ಅನುಪಮಾ ಅವರು ಒಂದು ಬಂಪರ್​ ಆಫರ್​ ನೀಡಿದ್ದಾರೆ. ಬೋನಿನ ಒಳಗಡೆ ಇರುವ ಖಡ್ಗಮೃಗ ಮರಿಯೊಂದರ ವಿಡಿಯೋವೊಂದನ್ನು ತಮ್ಮ ಇನ್​​ಸ್ಟಾಗ್ರಾಂ ಸ್ಟೋರಿಯಲ್ಲಿ ಶೇರ್​ ಮಾಡಿಕೊಂಡಿರುವ ಅನುಪಮಾ, “ಈತನನ್ನು ಉಡುಗೊರೆಯಾಗಿ ನೀಡಿದರೆ ನಾನು ನಿಮ್ಮವಳೇ” ಎಂದು ಬರೆದುಕೊಂಡಿದ್ದಾರೆ. ಖಡ್ಗಮೃಗ ಮರಿ ಗಿಫ್ಟ್​ ನೀಡಿದರೆ ಡೇಟಿಂಗ್​ ಅಥವಾ ಮದುವೆಯಾಗುತ್ತೇನೆ ಎನ್ನುವ ಮೂಲಕ ಅನುಪಮಾ ಹಾಸ್ಯ ಚಟಾಕಿ ಹಾರಿಸಿದ್ದಾರೆ. ಈ ಸ್ಟೋರಿಗೆ ಅಭಿಮಾನಿಗಳು ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ. ಈ ಸ್ಟೋರಿ ನೋಡಿ ನಿಮಗೆ ಏನು ಅನಿಸಿತು ಎಂಬುದನ್ನು ಕಾಮೆಂಟ್​ ಮೂಲಕ ತಿಳಿಸಿ.

  Anuopama Parameshwaran

  ಅಂದಹಾಗೆ ಆಲ್ಫೋನ್ಸ್​ ಪುತ್ರೆನ್​ ನಿರ್ದೇಶನದ ಪ್ರೇಮಂ ಸಿನಿಮಾದಲ್ಲಿ ಅನುಪಮಾ ಹೆಸರು ಮೊದಲು ಕೇಳಿಬಂದಿತು. ಮೊದಲ ಚಿತ್ರವೇ ಬ್ಲಾಕ್​ಬಸ್ಟರ್​ ಹಿಟ್​ ಆದರೂ ಕೂಡ ಅವರ ಸಿನಿ ಜರ್ನಿಯಲ್ಲಿ ಅಷ್ಟೊಂದು ಯಶಸ್ಸು ಸಿಗಲಿಲ್ಲ. ಸಾಕಷ್ಟು ಸಿನಿಮಾಗಳು ಫ್ಲಾಪ್​ ಆದವು. ತಮಿಳು, ತೆಲುಗು ಮತ್ತು ಮಲಯಾಳಂ ಸಿನಿಮಾಗಳಲ್ಲಿ ಮಿಂಚಿರುವ ಅನುಪಮಾ, ಪುನೀತ್​ ರಾಜ್​ಕುಮಾರ್​ ಅಭಿನಯದ ನಟಸಾರ್ವಭೌಮ ಸಿನಿಮಾದಲ್ಲೂ ನಟಿಸುವ ಮೂಲಕ ಅನುಪಮಾ ಕನ್ನಡಿಗರಿಗೂ ಪರಿಚಿತರಾಗಿದ್ದಾರೆ.

  ತಮ್ಮ ಸಹಜ ಸೌಂದರ್ಯದಿಂದಲೇ ಅನುಪಮಾ ಸಾಕಷ್ಟು ಅಭಿಮಾನಿಗಳ ಬಳಗವನ್ನು ಹೊಂದಿದ್ದಾರೆ. ಇದುವರೆಗೂ ಹೆಚ್ಚೇನು ಬೋಲ್ಡ್​ ಪಾತ್ರಗಳಲ್ಲಿ ನಟಿಸದ ಅನುಪಮಾ ಇದೇ ಮೊದಲ ಬಾರಿಗೆ ತುಂಬಾ ಬೋಲ್ಡ್​ ಆಗಿ ನಟಿಸುವ ಮೂಲಕ ಹೊಸ ಅವತಾರದೊಂದಿಗೆ ರೀಎಂಟ್ರಿ ಕೊಟ್ಟಿದ್ದಾರೆ. ದೀರ್ಘ ಕಾಲದ ಲಿಪ್​ಲಾಕ್ ದೃಶ್ಯ​, ತುಂಡುಡುಗೆ ಹಾಗೂ ಸೆಕ್ಸ್ ಡೈಲಾಗ್​ ಸೇರಿದಂತೆ ಹೊಸ ಪ್ರಯತ್ನಕ್ಕೆ ಅನುಪಮಾ ಕೈಹಾಕಿದ್ದು, ಈ ಬಾರಿ ಯಶಸ್ಸಿನ ನಿರೀಕ್ಷೆಯಲ್ಲಿದ್ದಾರೆ.

  ಅಂದಹಾಗೆ ಟಿಲ್ಲು ಸ್ಕ್ವೇರ್​ ಸಿನಿಮಾ ಮಾರ್ಚ್​ 29ರಂದು ಬಿಡುಗಡೆಯಾಗಲಿದೆ. ಈ ಸಿನಿಮಾವನ್ನು ಮಲಿಕ್​ ರಾಮ್​ ನಿರ್ದೇಶನ ಮಾಡಿದ್ದಾರೆ. ಅನುಪಮಾ ಅವರು ಜಯಂ ರವಿ ನಟನೆಯ ಸೈರೆನ್​ ಸಿನಿಮಾದಲ್ಲಿಯೂ ನಟಿಸಿದ್ದು, ಈ ಚಿತ್ರವು ಸಹ ಬಿಡುಗಡೆಗೆ ಸಜ್ಜಾಗಿದೆ. (ಏಜೆನ್ಸೀಸ್​)​

  ಮಳೆಯಲ್ಲಿ ಸಾಂಗ್​ ಶೂಟಿಂಗ್​ ವೇಳೆ ಒಳ ಉಡುಪು ಧರಿಸಿರಲಿಲ್ಲ: ಮೇಲಕ್ಕೆತ್ತಿದಾಗ ರಜನಿಕಾಂತ್ ಗಲಿಬಿಲಿಗೊಂಡಿದ್ದರು!

  ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕೆ ಥ್ಯಾಂಕ್ಸ್​​ ಅಪ್ಪ… ಯುಕೆ ಕಾಲೇಜಿನಲ್ಲಿ ಪದವಿ ಪಡೆದ ಸೆಕ್ಯುರಿಟಿ ಗಾರ್ಡ್​ ಮಗಳು!

  ನಿಮ್ಮ ಫೋಟೋ ನನ್ನ ಆಟೋದಲ್ಲಿ ಏಕಿದೆ ಗೊತ್ತಾ? ಅನುಪಮಾ ವಿರುದ್ಧ ರೊಚ್ಚಿಗೆದ್ದ ಅಭಿಮಾನಿ!

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts