More

  ಸದ್ಯಕ್ಕಿನ್ನು ಆರೋಪಿಯಷ್ಟೆ ಅಪರಾಧಿಯಾಗಿಲ್ಲ.. ದಾನ, ಧರ್ಮಗಳೇ ದರ್ಶನ್​ ಅವರನ್ನ ಕಾಪಾಡುತ್ತದೆ: ನಟಿ ಅನುಷಾ ರೈ

  ಬೆಂಗಳೂರು: ರೇಣುಕಸ್ವಾಮಿ ಎನ್ನುವ ವ್ಯಕ್ತಿಯೊರ್ವನ  ಹತ್ಯೆ ಮಾಡಿದ ಆರೋಪ ನಟ ದರ್ಶನ್ ಮತ್ತು ಅವರ ಗ್ಯಾಂಗ್ ಮೇಲಿದೆ. ಸದ್ಯ  ಪೊಲೀಸ್​ ಕಸ್ಟಡಿಗೆ ಒಪ್ಪಿಸಲಾಗಿದೆ. ಬೆಂಗಳೂರಿನ ಅನ್ನಪೂರ್ಣೇಶ್ವರಿನಗರ ಪೊಲೀಸ್​ ಠಾಣೆಯಲ್ಲಿ ದರ್ಶನ್  ಹಾಗೂ ಅವರ ಸಹಚರರು ಇದ್ದಾರೆ.  ಈ ಕುರಿತಾಗಿ ನಟಿ ನಟಿ ಅನುಷಾ ರೈ ಇನ್​ಸ್ಟಾಗ್ರಾಮ್​​ನಲ್ಲಿ ಬರೆದುಕೊಳ್ಳುವ ಮೂಲಕವಾಗಿ ಬೇಸರ ಹೊರಹಾಕಿದ್ದಾರೆ.

  ನಟಿ ಅನುಷಾ ರೈ ಇನ್‌ಸ್ಟಾದಲ್ಲಿ, ʻʻಅಭಿಮಾನಿಗಳು ನನಗೆ ವರ್ಷದ 365 ದಿನವೂ ಊಟ ಹಾಕ್ತಾರೆ. ಆದ್ರೆ ನಾನು ಹುಟ್ಟುಹಬ್ಬದ ಒಂದು ದಿನ‌ ಮಾತ್ರ ಅವರಿಗೆ ಊಟ ಹಾಕ್ತೀನಿ ಎಂದವರು ದರ್ಶನ್.. ಮೈಮೇಲೆ ನನ್ನ ಹೆಸರನ್ನು ಹಚ್ಚೆ ಹಾಕಿಸಿಕೊಳ್ಳಬೇಡಿ ಸಿನಿಮಾ ನೋಡಿ ಸಾಕು, ನಿಮ್ಮ ಅಪ್ಪ ಅಮ್ಮನ‌ ಹೆಸರು ಹಾಕಿಸಿಕೊಳ್ಳಿ ಎನ್ನುತ್ತಾ ತಾವೇ ಎದೆಯ ಮೇಲೆ ನನ್ನ‌ ಸೆಲೆಬ್ರಿಟೀಸ್ ಎಂದು ಹಚ್ಚೆ ಹಾಕಿಸಿಕೊಂಡ ಅಭಿಮಾನಿಗಳ ದಾಸ. .ನಾನು ಕಾರಲ್ಲಿ ಸ್ಪೀಡಾಗಿ ಹೋಗೊವಾಗ ಹಿಂದೆ ಬರಬೇಡಿ, ಅಕಸ್ಮಾತ್ ಆಕ್ಸಿಡೆಂಟ್ ಆಗಿ ಹೆಚ್ಚು ಕಮ್ಮಿ ಆದ್ರೆ ನಿಮ್ಮ ಕುಟುಂಬದ ಗತಿ ಏನು?? ಎಂದು ಅಭಿಮಾನಿಗಳಿಗೆ ಪ್ರೀತಿಯಿಂದ ಕಾಳಜಿಯಿಂದ ಬುದ್ಧಿವಾದ ಹೇಳಿದ್ದ ಈ ಮೈಸೂರಿನ ಆರಡಿಯ ತೂಗುದೀಪʼʼಎಂದು ಹೇಳಿದ್ದಾರೆ.

  ʻʻಇಂತಹ ವ್ಯಕ್ತಿಯಿಂದ ಇಂತಹ ತಪ್ಪಾಯಿತೆಂದರೆ ನಂಬಲಸಾಧ್ಯ. ಅದೇನೆ ಆದರೂ ಕಾನೂನು ಇದೆ ನೋಡಿಕೊಳ್ಳುತ್ತೆ. ತಪ್ಪು ಮಾಡಿಲ್ಲವಾದರೆ ಅವರ ದಾನಧರ್ಮಗಳೇ ಅವರನ್ನ ಕಾಪಾಡುತ್ತೆ. ಕಾನೂನಿನ ಮುಂದೆ ನಾವೆಲ್ಲರೂ ಚಿಕ್ಕವರೆ. ಸದ್ಯಕ್ಕಿನ್ನು ಆರೋಪಿಯಷ್ಟೆ ಅಪರಾಧಿಯಾಗಿಲ್ಲ…ಮುಂದೆ ಕಾದು ನೋಡೋಣ. ಇನ್ನು ಈ ಅನಾಹುತಕ್ಕೆ ಬಲಿಯಾದ ರೇಣುಕಾಸ್ವಾಮಿಗೂ ಅವರ ಕುಟುಂಬಕ್ಕೂ ಆ ದೇವರು ದುಃಖವನ್ನು ಭರಿಸುವ ಶಕ್ತಿ ನೀಡಲಿ. ಅವರು ಮಾಡಿದ್ದು ಸಹ ತಪ್ಪೇ ಆದರೂ ಈರೀತಿಯ ಶಿಕ್ಷೆ ಸರಿಯಲ್ಲ. ಕಾನೂನಿನ ಪ್ರಕಾರವೇ ರೇಣುಕಾಸ್ವಾಮಿಗೆ ಶಿಕ್ಷೆ ಕೊಡಿಸುವ ಬದಲು ಯಾರೋ ಜೀವ ತೆಗೆದಿದ್ದು ಅಕ್ಷಮ್ಯ ಅಪರಾಧ. ತಂದೆಯಾಗುವ ಮೊದಲೇ ಕಣ್ ಮುಚ್ಚಿದ ರೇಣುಕಾಸ್ವಾಮಿ ಮತ್ತೆ ಮಗುವಾಗಿ ಹೆಂಡತಿಯ ಹೊಟ್ಟೆಯಲ್ಲಿ ಹುಟ್ಟಲಿ ಅನ್ನೋದೆ ನಮ್ಮ ಹಾರೈಕೆ….ಕ್ಷಮಿಸಿ

  See also  ನೋಡಲ್ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

  ಈ ಪ್ರಕರಣದಲ್ಲಿ ದರ್ಶನ್ ಕುಟುಂಬಕ್ಕೆ ಶಾಪ ಹಾಕಿದರೆ ಪ್ರಯೋಜನವೇನು ?? ನನ್ನ ತಂದೆ ಒಬ್ಬ ದೊಡ್ಡ ಸ್ಟಾರ್ ಅನ್ನೋದು ಸಹ ಗೊತ್ತಿಲ್ಲದ ಆ ಹಾಲುಗಲ್ಲದ ಮುದ್ದು ಹುಡುಗ ವಿನೀಶ್ ನೋಡಿದರೆ ಸಂಕಟವಾಗದಿರುವುದೆ? ಫಾದರ್ಸ್ ಡೇ ದಿನ ತಂದೆಯನ್ನು ನೆನೆದು ವಿನೀಶ್ ಹಾಕಿದ ಪೋಸ್ಟ್ ಗೆ ಮನಕಲಕದೆ ಇರುವುದೇ ? ಜೊತೆಗೆ ದರ್ಶನ್ ಜೀವನಕ್ಕೆ 22 ವರ್ಷದಿಂದ ವಿಜಯವೂ ಆಗಿ ಲಕ್ಷ್ಮಿಯೂ ಆಗಿರುವ ವಿಜಯಲಕ್ಷ್ಮಿ ಯವರನ್ನು ತಪ್ಪಿತಸ್ಥರಂತೆ ಕಾಣೋದು ಸರಿಯೇ?? ಇಂತಹ ಸಂದರ್ಭದಲ್ಲಿ ಅವರಿಬ್ಬರಿಗೂ ಧೈರ್ಯ ಹೇಳಬೇಕೇ ಹೊರತು ಹೀಯಾಳಿಸುವುದು ಬೇಡʼʼಎಂದು ಬರೆದುಕೊಂಡಿದ್ದಾರೆ. ಇದೀಗ ನಟಿಯ ಈ ಪೋಸ್ಟ್‌ ವೈರಲ್​​ ಆಗಿದೆ.

  ನಟಿ ಅನುಷಾ ರೈ ಅವರು ‘ನಾಗಕನ್ನಿಕೆ’ ಹಾಗೂ ‘ರಾಜಕುಮಾರಿ’ ಧಾರಾವಾಹಿಗಳ ಮೂಲಕ ಕನ್ನಡ ಕಿರುತೆರೆ ವೀಕ್ಷಕರಿಗೆ ಚಿರಪರಿಚಿತರಾಗಿದ್ದಾರೆ. ಕನ್ನಡ, ತಮಿಳು ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ನಟಿಸಿ ಮಿಂಚಿದ್ದಾರೆ. ದಮಯಂತಿ, BMW, ಮಹಾನುಬಾವರು, ಧೈರ್ಯಂ ಸರ್ವತ್ರ ಸಾಧನಂ, ಖಡಕ್ ಮತ್ತು ಇನ್ನಿತರ ಸಿನಿಮಾಗಳಲ್ಲಿ ನಟಿಸಿದ್ದಾರೆ.

  ಏನಿದು ಪ್ರಕರಣ?: ಫೆಬ್ರವರಿ 27ರಿಂದ ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲವಾಗಿ ಮೆಸೇಜ್ ಶುರು ಮಾಡಿದ್ದರು. ಅಕೌಂಟ್‌ ಬ್ಲಾಕ್‌ ಮಾಡಿದ್ದರೂ ಹೊಸ ಅಕೌಂಟ್‌ನಿಂದ ಮತ್ತದೇ ಮಸೇಜ್ ಕಳುಹಿಸುತ್ತಿದ್ದ. ಕಳೆದ ಶುಕ್ರವಾರ ಮರ್ಮಾಂಗದ ಫೋಟೋ ಕಳುಹಿಸಿ ‘ದರ್ಶನ್​ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿದ್ದ. ಈ ರೀತಿಯ ಟಾರ್ಚರ್‌ ಸಹಿಸಿಕೊಳ್ಳಲಾಗದೇ ಪವಿತ್ರಾ ಅವರು ತಮ್ಮ ಮನೆಗೆಲಸದವ ಪವನ್​ಗೆ ಹೇಳಿದ್ದರು. ಈ ವಿಚಾರ ದರ್ಶನ್​ಗೆ ತಿಳಿದಿದೆ.

  ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್​ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್​, ಹಲ್ಲೆಯಿಂದ ರೇಣುಕಾ ಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.

  See also  ಕಾರು ಚಲಿಸಲು ಸ್ಥಳ ಕೇಳಿದಕ್ಕೆ ನಟಿ ಶೋಭಿತಾ ಜತೆ ಜಗಳ ಮಾಡಿದ ಅಪರಿಚಿತರು

  ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ. ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಬಯಲಾಗಿದೆ.

  ಹಣ ಪಡೆದು ಶವ ವಿಲೇವಾರಿ ಜವಾಬ್ದಾರಿ ಹೊತ್ತಿದ್ದ ಗ್ಯಾಂಗ್, ದರ್ಶನ್​ರ ಆಪ್ತನೊಟ್ಟಿಗೆ ಸಂಪರ್ಕದಲ್ಲಿತ್ತಂತೆ. ಶವ ವಿಲೇವಾರಿ ಹಾಗೂ ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರಿಂದ ಈ ಗ್ಯಾಂಗ್ ಪಡೆದಿತ್ತು ಎನ್ನಲಾಗಿದೆ.

  ‘ನನ್ನ ಬದುಕಿನಲ್ಲಿ ಎಲ್ಲವೂ ನೀನೆ’ ತಾಯಿ ಪವಿತ್ರಾ ಗೌಡಗಾಗಿ ಭಾವನಾತ್ಮಕವಾಗಿ​ ಬರೆದ ಮಗಳು ಖುಷಿ

  ‘ವಿಜಿ ದರ್ಶನ್’ ಎಂದೇ ಇನ್​ಸ್ಟಾಗ್ರಾಮ್​ಗೆ ಕಮ್​​ಬ್ಯಾಕ್​​ ಮಾಡಿದ ಡಿ ಬಾಸ್​​ ಪತ್ನಿ ವಿಜಯಲಕ್ಷ್ಮಿ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts