

ಬೆಂಗಳೂರು: ಸ್ಯಾಂಡಲ್ವುಡ್ ನಟಿ ಹರ್ಷಿಕಾ ಪೂಣಚ್ಚ- ಭುವನ್ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ಕೊಡವ ಶೈಲಿಯಲ್ಲಿ ಮಿಂಚಿದ ಕ್ಯೂಟ್ ಜೋಡಿ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ಕೊಡಗಿನ ವಿರಾಜ್‌ಪೇಟೆಯ ಅಮ್ಮತ್ತಿ ಕೊಡವ ಸಮಾಜದಲ್ಲಿ ಮದುವೆ ನಡೆದಿದೆ. ಆಗಸ್ಟ್ 23-24ರಂದು ಎರಡು ದಿನ ಕೊಡವ ಶೈಲಿಯಂತೆ ವಿವಾಹ ನಡೆದಿದೆ. ಇದೀಗ ಹರ್ಷಿಕಾ ಮದುವೆಗೆ ಜೈ ಜಗದೀಶ್ ದಂಪತಿ, ಅನುಪ್ರಭಾಕರ್ ದಂಪತಿ ಗೋಲ್ಡನ್ ಸ್ಟಾರ್ ಗಣೇಶ್, ದೊಡ್ಡಣ್ಣ, ತಬಲಾ ನಾಣಿ, ಮಾಜಿ ಸಿಎಂ ಬಿಎಸ್ ವೈ, ಮುರುಗೇಶ್ ನಿರಾಣಿ, ಪೂಜಾ ಗಾಂಧಿ ಸೇರಿದಂತೆ ಹಲವರು ಭಾಗಿಯಾಗಿ ಶುಭ ಹಾರೈಸಿದ್ದರು.
ಕೊಡಗಿನ ವಿರಾಟ್‌ಪೇಟೆಯಲ್ಲಿ ಅಮ್ಮತ್ತಿ ಕೊಡವ ಸಮಾಜದಲ್ಲಿ ಮದುವೆ ಜರುಗಿದೆ. ಕೊಡವ ಲುಕ್‌ನಲ್ಲಿ ನವಜೋಡಿ ಮಿಂಚಿದ್ದಾರೆ. ಮದುವೆಯೂ ಮುನ್ನವೇ ಜೋಡಿಯಾಗಿ ಹರ್ಷಿಕಾ-ಭುವನ್ ಗೃಹಪ್ರವೇಶ ನೆರವೇರಿತ್ತು. ಆಗಸ್ಟ್ 23ರಂದು ಊರ್ಕುಡುವ ಶಾಸ್ತ್ರ ನಡೆದಿತ್ತು.
ಎರಡೂ ಕುಟುಂಬಗಳ ಆಪ್ತರು, ಸ್ನೇಹಿತರು, ಸಿನಿಮಾ ಮಂದಿಯ ಸಮ್ಮುಖದಲ್ಲಿ ಕೊಡಗಿನ ವಿರಾಜಪೇಟೆಯ ಅಮ್ಮತ್ತಿಯ ಕೊಡವ ಸಮಾಜದಲ್ಲಿ ಕೊಡವ ಸಂಪ್ರದಾಯದಂತೆ ವಿವಾಹ ಕಾರ್ಯ ನೆರವೇರಿದೆ.
ಎರಡು ದಿನ ನಡೆದ ಕೊಡವ ಶೈಲಿಯ ಅದ್ದೂರಿ ವಿವಾಹ. ಮೊದಲ ದಿನ ಊರು ಕೂಡುವ ಶಾಸ್ತ್ರ. ಊರು ಕೂಡುವ ಶಾಸ್ತ್ರದ ದಿವನೇ ತಾಯಿಯಿಂದ ಹರ್ಷಿಕಾಗೆ ಮಾಂಗಲ್ಯಧಾರಣೆ ನಡೆದಿದೆ.
ಫ್ಯಾಶನ್ ಶೋವೊಂದರಲ್ಲಿ ಭುವನ್- ಹರ್ಷಿಕಾ ಭೇಟಿಯಾಗಿದ್ದು, ಆ ಪರಿಚಯವೇ ಪ್ರೀತಿಗೆ ತಿರುಗಿತ್ತು. ಭುವನ್, ಹರ್ಷಿಕಾಗೆ ಮೊದಲು ಪ್ರಪೋಸ್ ಮಾಡಿ ಒಂದೇ ದಿನದಲ್ಲಿ ಉತ್ತರ ಹೇಳಬೇಕು ಅಂತಾ ಟೈಂ ಫಿಕ್ಸ್ ಮಾಡಿದ್ರಂತೆ. ಫಸ್ಟ್ ಇಂಪ್ರೆಶನ್‌ನಲ್ಲೇ ಭುವನ್ ಇಷ್ಟವಾದ ಕಾರಣ ಒಂದೇ ದಿನದಲ್ಲಿ ಭುವನ್ ಪ್ರಪೋಸಲ್‌ಗೆ ಹರ್ಷಿಕಾ ಸಮ್ಮತಿ ನೀಡಿದ್ರಂತೆ. ಕುಟುಂಬದವರಿಗೂ ಕೂಡ ಭುವನ್ ಬಗ್ಗೆ ಒಳ್ಳೆಯ ಅಭಿಪ್ರಾಯವಿದ್ದ ಕಾರಣ ಪ್ರೀತಿಗೆ ಗ್ರೀನ್ ಸಿಗ್ನಲ್ ನೀಡಿದ್ರಂತೆ ಎಂದು ಹರ್ಷಿಕಾ ಹೇಳಿದ್ದಾರೆ.