ಬಿಗ್​ಬಾಸ್ ಖ್ಯಾತಿಯ ನಟಿ ಜಯಶ್ರೀ ಆತ್ಮಹತ್ಯೆ

ಬೆಂಗಳೂರು: ಬಿಗ್​ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾದನಾಯಕಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ವೃದ್ಧಾಶ್ರಮವೊಂದರಲ್ಲಿ ನೇಣುಬಿಗಿದುಕೊಂಡು ಸೋಮವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಬಿಗ್​ಬಾಸ್​ ಸೀಸನ್​ 3ರ ಸ್ಪರ್ಧಿಯಾಗಿದ್ದ ಜಯಶ್ರೀ, ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದರು. ಉಪ್ಪು ಹುಳಿ ಖಾರ ಮತ್ತು ಶಿರಾಡಿ ಘಾಟ್ ಚಿತ್ರದಲ್ಲಿ ಜಯಶ್ರೀ ನಟಿಸಿದ್ದರು. 2020ರ ಜುಲೈ ತಿಂಗಳಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದ ಜಯಶ್ರೀ, 2019ರ ಸೆಪ್ಟೆಂಬರ್​ನಲ್ಲಿ ತನ್ನ ಸೋದರ ಮಾವನ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದರು. ‘ಮೊದಲಿನಿಂದಲೂ ನನಗೆ ನಮ್ಮ ಮಾವ ಕಿರುಕುಳ ಕೊಡುತ್ತಿದ್ದರು. … Continue reading ಬಿಗ್​ಬಾಸ್ ಖ್ಯಾತಿಯ ನಟಿ ಜಯಶ್ರೀ ಆತ್ಮಹತ್ಯೆ