

ಚೆನ್ನೈ: ಬಹುಭಾಷಾ ನಟಿ, ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ನಟಿ ಖುಷ್ಬೂ ಟೇಲ್ ಬೋನ್ ಚಿಕಿತ್ಸೆ ಸಲುವಾಗಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿಸಿದ್ಧಾರೆ.
ನನ್ನ ಕೋಕ್ಸಿಕ್ಸ್ ಮೂಳೆಯ ಚಿಕಿತ್ಸೆಗಾಗಿ ನಾನು ಮತ್ತೊಮ್ಮೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಆದಷ್ಟು ಬೇಗ ಗುಣಮುಖಳಾಗುವ ವಿಶ್ವಾಸವಿದೆ ಎಂದು ಟ್ವೀಟ್ ಮಾಡಿ ತಿಳಿಸಿದ್ದಾರೆ. ನಟಿಯ ಟ್ವೀಟ್ ಹೊರಬಿದ್ದ ಬೆನ್ನಲ್ಲೇ ಅಭಿಮಾನಿಗಳು ಹಾಗೂ ನೆಟ್ಟಿಗರು ಶೀಘ್ರ ಗುಣಮುಖರಾಗಲೀ ಎಂದು ಆಶಿಸುತ್ತಿದ್ದಾರೆ.