More

    ನೋಡು ಶಿವ.. ಎನ್ನುತ್ತಿದ್ದಾರೆ ‘ಜೊತೆ ಜೊತೆಯಲಿ’ ಧಾರಾವಾಹಿ ಖ್ಯಾತಿಯ ಮೇಘಾ ಶೆಟ್ಟಿ

    ಬೆಂಗಳೂರು: ಮೋನಿಕಾ ಕಲ್ಲೂರಿ ಆರ್ಟ್ಸ್​ ಪ್ರೊಡಕ್ಷನ್​ ಬ್ಯಾನರ್​ನಲ್ಲಿ ಇದೀಗ ಆಲ್ಬಂ ಸಾಂಗ್​ವೊಂದು ಸಿದ್ಧವಾಗುತ್ತಿದೆ. ‘ನೋಡು ಶಿವ..’ ಶೀರ್ಷಿಕೆಯ ಈ ಹಾಡಿಗೆ ಚಂದನ್ ಶೆಟ್ಟಿ ಸಂಗೀತ ನೀಡಿ ಅವರೇ ಹಾಡನ್ನೂ ಹಾಡಿದ್ದಾರೆ. ಸುಮೀತ್ ಎಂ.ಕೆ ಈ ಹಾಡಿಗೆ ಸಾಹಿತ್ಯ ಬರೆದಿದ್ದು, ಪರಿಕಲ್ಪನೆ ಮತ್ತು ನಿರ್ದೇಶನ ಮಾಡುವುದರ ಜತೆಗೆ ಹಾಡಿನಲ್ಲಿಯೂ ಲೀಡ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ವಿಶೇಷ ಏನೆಂದರೆ, ಈ ಹಾಡಿನಲ್ಲಿ ಜೊತೆ ಜೊತೆಯಲಿ ಧಾರಾವಾಹಿ ಖ್ಯಾತಿಯ ಮೇಘಾ ಶೆಟ್ಟಿ ಗ್ಲಾಮರಸ್​​ ಆಗಿ ಹೆಜ್ಜೆ ಹಾಕಲಿದ್ದಾರೆ. ಸ್ಪೇಷಲ್ ಅಪೀಯರೆನ್ಸ್ ಆಗಿ ಚಂದನ್ ಶೆಟ್ಟಿ ಸಹ ಇರಲಿದ್ದಾರೆ.

    ಇದನ್ನೂ ಓದಿ: ಶಿಲ್ಪಾ ಶೆಟ್ಟಿ ಈಗ ಮಾರ್ಗಿ; ರಾಮಾಚಾರಿಗೆ ಸಿಕ್ಕ ನಾಯಕಿ

    ಈ ಹಾಡಿನ ಬಗ್ಗೆ ಮಾಹಿತಿ ನೀಡುವ ಮೋನಿಕಾ, ‘ನೋಡು ಶಿವ ಎಂದೇ ಹಾಡು ಶುರುವಾಗಲಿದೆ. ಎಷ್ಟೋ ಜನ ಜೀವನದಲ್ಲಿ ಅಂದುಕೊಂಡಿದ್ದು ಏನೂ ಆಗಿಲ್ಲವಲ್ಲ ಎಂದು ತಮ್ಮನ್ನೇ ತಾವೇ ಶಪಿಸಿಕೊಳ್ಳುತ್ತಿರುತ್ತಾರೆ. ಎಷ್ಟೇ ಶ್ರಮ ಪಟ್ಟರೂ ಅದು ಈಡೇರುವುದಿಲ್ಲ. ಅಂದುಕೊಂಡ ಯಶಸ್ಸು ಸಿಕ್ಕಿರುವುದಿಲ್ಲ. ಈ ಥರದ ಹುಡುಗ ದೇವರ ಹತ್ತಿರ ಹೇಗೆ ಸಂಭಾಷಣೆ ಮಾಡ್ತಾನೆ.. ತನ್ನ ಗೋಳನ್ನು ಹೇಗೆ ಹೇಳಿಕೊಳ್ಳುತ್ತಾನೆ ಎಂಬುದನ್ನು ಫನ್ನಿಯಾಗಿ ಹಾಡಿನಲ್ಲಿ ತೋರಿಸಲಿದ್ದೇವೆ’ ಎನ್ನುತ್ತಾರೆ.

    ಈ ಹಾಡಿನ ನಿರ್ಮಾಣದ ಮುಖ್ಯ ಉದ್ದೇಶವನ್ನೂ ನಿರ್ಮಾಪಕಿ ಮೋನಿಕಾ ವಿವರಿಸಿದ್ದಾರೆ. ‘ಕನ್ನಡದಲ್ಲಿ ಇಲ್ಲಿಯವರೆಗೂ ಯಾರೂ ಮಾಡದ ಅದ್ಧೂರಿಯಾದ ಹಾಡನ್ನು ನಾವು ಚಿತ್ರೀಕರಿಸಲಿದ್ದೇವೆ. ಆಲ್ಬಂ ಹಾಡಿನ ವಿಚಾರದಲ್ಲಿ ಕನ್ನಡದಲ್ಲಿ ಈ ಹಿಂದೆಂದೂ ಆಗದ ಒಂದು ಹೊಸತನವನ್ನು ಈ ಹಾಡಿನಲ್ಲಿ ತೋರಿಸಲಿದ್ದೇವೆ. ಅದ್ಧೂರಿ ವೆಚ್ಚದಲ್ಲಿ ಸಿದ್ಧವಾಗಲಿರುವ ಈ ಹಾಡು, ಪರಭಾಷಿಕರಿಗೂ ವಿಶೇಷ ಎನಿಸಲಿದೆ. ಸರಿಸುಮಾರು 30ಲಕ್ಷ ಬಜೆಟ್ ನಲ್ಲಿ ಈ ಹಾಡು ಸಿದ್ದವಾಗಲಿದೆ.’ ಎಂಬುದು ಮೋನಿಕಾ ಮಾತು.

    ಇದನ್ನೂ ಓದಿ: ಬಾಲಿವುಡ್​ನಲ್ಲಿ ರಿಮೇಕ್ ಆಗ್ತಿದೆ ಪ್ರಭಾಸ್ ‘ಛತ್ರಪತಿ’; ಬೆಲಂಕೊಂಡ ಶ್ರೀನಿವಾಸ್ ಹಿಂದಿಗೆ ಪದಾರ್ಪಣೆ

    ಹಾಡಿನ ಸಾಹಿತ್ಯ ಕೇಳಿ ಇಷ್ಟಪಟ್ಟು ಕೇವಲ ಎರಡೇ ತಾಸಿನಲ್ಲಿ ಚಂದನ್​ ಶೆಟ್ಟಿ ಕಂಪೋಸ್ ಮಾಡಿ, ಧ್ವನಿಯನ್ನೂ ನೀಡಿದ್ದಾರೆ. ಕಳೆದೊಂದು ತಿಂಗಳಿಂದ ಈ ಹಾಡಿನ ತಯಾರಿ ಕೆಲಸ ಶುರುವಾಗಿದ್ದು, 200 ಜನ ಈ ಹಾಡಿಗೆ ಕೆಲಸ ಮಾಡುತ್ತಿದ್ದಾರೆ. 60 ವೃತ್ತಿಪರ ಡಾನ್ಸರ್​ಗಳು ಹೆಜ್ಜೆ ಹಾಕಲಿದ್ದಾರೆ. ಮೂರು ದಿನಗಳಲ್ಲಿ ಎಎಂಸಿ ಕಾಲೇಜು ಕ್ಯಾಂಪಸ್​ನಲ್ಲಿಯೇ ಶೂಟಿಂಗ್​ ಮುಗಿಸಿಕೊಳ್ಳುವ ಪ್ಲಾನ್​ ತಂಡದ್ದಾಗಿದ್ದು, ಮೋಹನ್ ಮಾಸ್ಟರ್ ನೃತ್ಯ ನಿರ್ದೇಶನ ಮಾಡಲಿದ್ದಾರೆ.

    ಅನಿರೀಕ್ಷಿತ ತಿರುವುಗಳ ಅರಿಷಡ್ವರ್ಗ!: ಸಿನಿಮಾ ವಿಮರ್ಶೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts