ಮಂಗಳೂರಿನ ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ನಟಿ ರಚಿತಾ ರಾಮ್..!

rachitaram
Published on

ಮಂಗಳೂರು: ಸ್ಯಾಂಡಲ್​ವುಡ್​ ನಟಿ ರಚಿತಾ ರಾಮ್​​ ಅವರು ಇಂದು ಮಂಗಳೂರಿನ ಸಮೀಪದ ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಸ್ನೇಹಿತರಲ್ಲಿ ಅನೇಕರು ಕೊರಗಜ್ಜ ದೈವದ ಕಾರಣೀಕದ ಬಗ್ಗೆ ತಿಳಿಸಿದ್ದರು. ​​ಹೀಗಾಗಿ ಕೊರಗಜ್ಜನ ಕ್ಷೇತ್ರಕ್ಕೆ ಬರಬೇಕು ಅನ್ನಿಸಿತು, ಬಂದ್ಬಿಟ್ಟೆ. ಮುಂದಿನ ತಿಂಗಳು ಮ್ಯಾಟ್ನಿ, ಬ್ಯಾಡ್ ಮ್ಯಾನರ್ಸ್ ರಿಲೀಸ್ ಆಗಲಿವೆ. ಈ ಸಿನಿಮಾಗಳ ಯಶಸ್ಸಿಗೆ ಪ್ರಾರ್ಥನೆ ಮಾಡಿದ್ದೇನೆ ಎಂದಿದ್ದಾರೆ.

ಬುಲ್ ಬುಲ್’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ನಟಿ ರಚಿತಾ ರಾಮ್, ಕನ್ನಡದ ಟಾಪ್ ನಟರ ಜೊತೆ ನಟಿಸಿದ್ದಾರೆ. ತೆಲುಗಿನ ಸಿನಿಮಾದಲ್ಲೂ ನಟಿಸಿ ಬಂದಿದ್ದಾರೆ. ‘ಮ್ಯಾಟ್ನಿ’, ‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ರಿಲೀಸ್‌ಗೆ ರೆಡಿಯಾಗಿರುವ ಬೆನ್ನಲ್ಲೇ ನಟಿ ರಚಿತಾ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net