More

  ಅವರೆಲ್ಲ ನನ್ನನ್ನು ಟ್ರೋಲ್​ ಮಾಡಿದ್ದರು… ದರ್ಶನ್​ ಕೇಸ್​ ಬಗ್ಗೆ ನಟಿ ರಮ್ಯಾ ಖಡಕ್​ ಮಾತು

  ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್​ ಸೇರಿದಂತೆ 13ಕ್ಕೂ ಹೆಚ್ಚು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪೊಲೀಸರು ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸುತ್ತಿದ್ದಾರೆ. ಇತ್ತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಮಾತನಾಡಿರುವ ನಟಿ ರಮ್ಯಾ ರೇಣುಕಾಸ್ವಾಮಿ ಹತ್ಯೆ ಕುರಿತಂತೆ ನಟ ದರ್ಶನ್​ ಹಾಗೂ ಗ್ಯಾಂಗ್​ ನಡೆದುಕೊಂಡ ರೀತಿಗೆ ಕಿಡಿಕಾರಿದ್ದಾರೆ.

  ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿರುವ ಅವರು, ಸೋಶಿಯಲ್​ ಮೀಡಿಯಾದಲ್ಲಿ ಯಾವುದೇ ವ್ಯಕ್ತಿಯನ್ನು ಬ್ಲಾಕ್​ ಮಾಡುವ ಆಯ್ಕೆ ಇದೆ. ಒಂದು ವೇಳೆ ಟ್ರೋಲ್​ ಮುಂದುವರಿದರೆ ನೀವು ದೂರು ನೀಡಬಹುದು. ನನ್ನನ್ನು ಕೂಡ ಕೆಟ್ಟ ಪದಗಳಿಂದ ಟ್ರೋಲ್​ ಮಾಡಿದ್ದರು. ನನ್ನನ್ನು ಮಾತ್ರವಲ್ಲದೇ ಅನೇಕ ನಟ-ನಟಿಯರನ್ನು ಟ್ರೋಲ್​ ಮಾಡಿದ್ದಾರೆ. ಅದಲ್ಲದೆ ಅವರ ಹೆಂಡತಿ, ಮಕ್ಕಳನ್ನೂ ಟ್ರೋಲ್ ಮಾಡಿದ್ದಾರೆ. ಎಂತಹ ಕೆಟ್ಟ ಸಮಾಜದಲ್ಲಿ ನಾವು ಬದುಕುತ್ತಿದ್ದೇವೆ.

  Ramya Post

  ಇದನ್ನೂ ಓದಿ: ಚಿತ್ರರಂಗದಿಂದ ನಟ ದರ್ಶನ್​ ಬ್ಯಾನ್?​; ಫಿಲ್ಮ್​​ ಚೇಂಬರ್​ ಅಧ್ಯಕ್ಷರು ಹೇಳಿದ್ದಿಷ್ಟು

  ಕಾನೂನು ಪಾಲಿಸುವ ಯಾವುದೇ ಪ್ರಜೆಯ ರೀತಿ ನಾನು ಕೂಡ ದೂರು ನೀಡಿದ್ದೇನೆ. ಅಂಥವರಿಗೆ ಪೊಲೀಸರು ಎಚ್ಚರಿಕೆ ನೀಡಿದ ಬಳಿಕ ಪಾಪ ಅಂತ ನಾನು ಕೇಸ್​ ವಾಪಸ್​ ತೆಗೆದುಕೊಂಡಿದ್ದೇನೆ. ಟ್ರೋಲ್​ ಮಾಡಿದ ವ್ಯಕ್ತಿಗಳು ಇನ್ನೂ ಚಿಕ್ಕವರು. ಅವರಿಗೂ ಭವಿಷ್ಯ ಇದೆ. ಯಾವುದೋ ಅನಾಮಧೇಯ ಖಾತೆಗಳ ಮೂಲಕ ಅವರು ಟ್ರೋಲ್​ ಮಾಡುತ್ತ ತಮ್ಮ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ.

  ‘ಯಾರೂ ಕೂಡ ಕಾನೂನಿಗಿಂತ ದೊಡ್ಡವರಲ್ಲ. ಕಾನೂನನ್ನು ಯಾರೂ ತಮ್ಮ ಕೈಗೆ ತೆಗೆದುಕೊಳ್ಳಬಾರದು. ನೀವು ಹೋಗಿ ಜನರನ್ನು ಹೊಡೆದು ಕೊಲ್ಲುವುದಲ್ಲ. ಒಂದು ಸರಳವಾದ ದೂರು ಸಾಕು. ಈಗ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್​ ಅಧಿಕಾರಿಗಳಿಗೆ ನಾನು ಮೆಚ್ಚುಗೆ ಮತ್ತು ಗೌರವ ಸಲ್ಲಿಸುತ್ತೇನೆ. ಅವರದ್ದು ಕೃತಜ್ಞತೆ ಇಲ್ಲದ ಕೆಲಸ. ಅವರು ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ರಾಜಕೀಯ ಪಕ್ಷಗಳ ಒತ್ತಡಕ್ಕೆ ಅವರು ಮಣಿಯುವುದಿಲ್ಲ ಹಾಗೂ ಕಾನೂನಿನ ಮೇಲೆ ಜನರ ಭರವಸೆಯನ್ನು ಉಳಿಸುತ್ತಾರೆ ಅಂತ ನಾನು ನಂಬಿದ್ದೇನೆ’ ಎಂದು ನಟಿ ರಮ್ಯಾ ಪೋಸ್ಟ್​ ಮಾಡಿದ್ದಾರೆ.

  See also  ರೈತರಿಗೆ ಸಿಗುತ್ತಿಲ್ಲ ರಾಜ್ಯದ ಸಮ್ಮಾನ; 3000 ಕೋಟಿ ರೂಪಾಯಿ ಬಾಕಿ..

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts