

ನವದೆಹಲಿ: ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ರ ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಕಿವೀಸ್ ಪಡೆಯನ್ನು 70 ರನ್ಗಳಿಂದ ಮಣಿಸಿದ ಟೀಂ ಇಂಡಿಯಾ 2023 ರ ಏಕದಿನ ವಿಶ್ವಕಪ್‌ನ ಫೈನಲ್ಗೇರಿದೆ.
ಸುಮಾರು 12 ವರ್ಷಗಳ ನಂತರ ಏಕದಿನ ವಿಶ್ವಕಪ್‌ಗೆ ತೆರಳುತ್ತಿರುವ ಟೀಂ ಇಂಡಿಯಾಕ್ಕೆ ಅಭಿನಂದನೆಗಳು ಮತ್ತು ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಟೂರ್ನಿಯಿಂದ ಹೊರ ಉಳಿದ ನಂತರ ಪಾಕ್ ಕ್ರೀಡಾಭಿಮಾನಿಗಳಿಗೆ ಇನ್ನೂ ಸಹಿಸಿಕೊಳ್ಳಲು ಆಗುತ್ತಿಲ್ಲ. ಹೇಗಾದರೂ ಮಾಡಿ ಭಾರತ ವಿರುದ್ಧ ಸೇಡು ತೀರಿಸಿಕೊಳ್ಳಬೇಕೆಂದು ಹಂಬಲಿಸುತ್ತಿದ್ದು, ಇದರ ನಡುವೆ ಪಾಕ್ ನಟಿಯೊಬ್ಬಳು ವಿಭಿನ್ನ ಹಾದಿಯನ್ನು ತುಳಿದಿದ್ದಾಳೆ. ಪಾಕಿಸ್ತಾನಿ ನಟಿ ಸೆಹರ್ ಶಿನ್ವಾರಿ ಮತ್ತೊಮ್ಮೆ ತಮ್ಮ ಬುದ್ದಿವಂತಿಕೆಯನ್ನು ತೋರಿಸಿದ್ದಾರೆ.
'ಭಾರತೀಯ ಆಟಗಾರರು ಉತ್ತಮ ನಟರು. ಈ ಪಂದ್ಯ ಫಿಕ್ಸ್ ಆಗಿದೆ ಎಂಬುದು ಅವರಿಗೆ ಮೊದಲೇ ಗೊತ್ತಿತ್ತು. ಆದರೆ ಅವರು ನಿಜವಾಗಿಯೂ ಪಂದ್ಯ ಆಡುತ್ತಿರುವಂತೆ ನಟಿಸಿದ್ದಾರೆ' ಎಂದು ಪಾಕಿಸ್ತಾನಿ ನಟಿ ಟ್ವೀಟ್ ಮಾಡಿದ್ದಾರೆ.
ನಟಿ ಸೆಹರ್ ಶಿನ್ವಾರಿ ಟ್ವೀಟ್‌ನಲ್ಲಿ ಏನಿದೆ?:
ಮತ್ತೊಂದು ಟ್ವೀಟ್‌ನಲ್ಲಿ, 'ಭಾರತ ತಂಡ ಮತ್ತೊಮ್ಮೆ ವಿಶ್ವಕಪ್‌ನ ಫೈನಲ್‌ಗೆ ಹೋಗುವುದನ್ನು ನಿಜವಾಗಿಯೂ ಅರಗಿಸಿಕೊಳ್ಳಲು ಸಾಧ್ಯವಿಲ್ಲ. ಭಾರತ ಎಲ್ಲದರಲ್ಲೂ ನಮ್ಮ ದೇಶಕ್ಕಿಂತ ಮುಂದಿರೋದು ಯಾಕೆ ಅಂತ ಅರ್ಥ ಆಗ್ತಿಲ್ಲ' ಎಂದು ಟ್ವೀಟ್ ಮಾಡಿದ್ದಾಳೆ.
ಮತ್ತೊಂದು ಟ್ವೀಟ್‌ನಲ್ಲಿ ಸೆಹರ್ ಶಿನ್ವಾರಿ ಅವರು 'ಬಿಸಿಸಿಐ ಮತ್ತು ಬಿಜೆಪಿಯನ್ನು ನಾಶಮಾಡಲು ಬಯಸುತ್ತಾರೆ' ಎಂದು ಕಾಮೆಂಟ್‌ಗಳನ್ನು ಮಾಡಿದ್ದಾರೆ.
ಈ ಪಾಕಿಸ್ತಾನಿ ನಟಿ ಭಾರತ ತಂಡವನ್ನು ಟೀಕಿಸಿರುವುದು ಇದೇ ಮೊದಲಲ್ಲ. ವಿಶ್ವಕಪ್ ಆರಂಭದಿಂದಲೂ ಕುಲು ವಿವಿಧ ಸಂದರ್ಭಗಳಲ್ಲಿ ಟೀಂ ಇಂಡಿಯಾದತ್ತ ಆಸಕ್ತಿ ತೋರುತ್ತಿದ್ದಾರೆ. ಬಾಂಗ್ಲಾದೇಶದ ಆಟಗಾರರು ಭಾರತ ವಿರುದ್ಧ ಗೆದ್ದರೆ ಅವರೊಂದಿಗೆ ಡೇಟಿಂಗ್ ಮಾಡುವುದಾಗಿಯೂ ಬಂಪರ್‌ಫಾರ್ ಘೋಷಿಸಿದ್ದರು. ಇದೀಗ ಮತ್ತೆ ಪಾಕಿಸ್ತಾನಿ ನಾಯಕಿ ಸೆನ್ಸೇಷನಲ್ ಆರೋಪಗಳ ಮೂಲಕ ಸುದ್ದಿಯಲ್ಲಿದ್ದಾರೆ.
ಈಗ ಆಕೆಯ ಪೋಸ್ಟ್‌ಗಳು ವೈರಲ್ ಆಗಿವೆ. ಟೀಂ ಇಂಡಿಯಾ ಅಭಿಮಾನಿಗಳು ಪಾಕಿಸ್ತಾನಿ ನಟಿಯನ್ನು ಟೀಕಿಸುತ್ತಿದ್ದಾರೆ. ಮತ್ತೊಮ್ಮೆ ನಿಮ್ಮ ಬುದ್ಧಿವಂತಿಕೆಯನ್ನು ತೋರಿಸಿದ್ದೀರಿ. ಈ ಧೋರಣೆಯಿಂದ ನೀವು (ಪಾಕ್) ಹಿಂದುಳಿದಿದ್ದೀರಿ ಎಂದು ಬುದ್ಧಿ ಹೇಳುತ್ತಿದ್ದಾರೆ.
ಯಾರು ಈ ಶಿನ್ವಾರಿ? : ಸೆಹರ್ ಶಿನ್ವಾರಿ ಹುಟ್ಟಿದ್ದು ಪಾಕಿಸ್ತಾನದ ಹೈದರಾಬಾದ್ನಲ್ಲಿ. ಖೈಬರ್‌ನಲ್ಲಿ “ಸೈರ್ ಸಾವಾ ಸೈರ್” ಎಂಬ ಹಾಸ್ಯ ಸರಣಿಯೊಂದಿಗೆ 2014 ರಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಿದಳು. 2015 ರಲ್ಲಿ ಕರಾಚಿ ಸ್ಟೇಷನ್ ಮಾಧ್ಯಮದಲ್ಲಿ ಬೆಳಗಿನ ಕಾರ್ಯಕ್ರಮದ ನಿರೂಪಕಿಯಾಗಿಯು ಕೆಲಸ ಮಾಡಿದ್ದಾಳೆ. ಸಾಮಾಜಿಕ ಜಾಲತಾಣದಲ್ಲಿ ತನ್ನ ನಟನೆ ಮತ್ತು ವೈರಲ್ ವಿಡಿಯೋಗಳಿಂದಲೇ ಸೆಹರ್ ಹೆಸರುವಾಸಿಯಾಗಿದ್ದಾಳೆ. ಟಿಕ್‌ಟಾಕ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಸೆಹರ್ ತುಂಬಾ ಸಕ್ರಿಯಳಾಗಿದ್ದಾಳೆ. ಇನ್ಸ್ಟಾಗ್ರಾಂನಲ್ಲಿ 33,000 ಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದಾಳೆ. ಆಕೆಯ ಟ್ವೀಟ್‌ಗಳು ಈ ಹಿಂದೆ ಮಾಧ್ಯಮಗಳ ಗಮನವನ್ನು ಸೆಳೆದಿದ್ದವು.