More

    ದರ್ಶನ್​ ಜತೆ 10 ವರ್ಷದಿಂದ ಸಂಬಂಧ; ವಿವಾದ ಹುಟ್ಟುಹಾಕಿದ ಈ ಪವಿತ್ರಾ ಗೌಡ ಯಾರು?

    ಬೆಂಗಳೂರು: ಸ್ಯಾಂಡಲ್​ವುಡ್​​ ನಟ ದರ್ಶನ್‌ ಮತ್ತು ನಟಿ ಪವಿತ್ರಾ ಗೌಡರ ಒಟ್ಟಿಗಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ತುಂಬಾನೇ ವೈರಲ್ ಆಗುತ್ತಿದೆ. ಈ ಫೋಟೋ ವೈರಲ್​ ಆಗುತ್ತಿದ್ದಂತೆ ದರ್ಶನ್​ ಪತ್ನಿ ವಿಜಯಲಕ್ಷ್ಮೀ ನಟಿ ಪವಿತ್ರಾ ವಿರುದ್ಧ ಕಿಡಿಕಾರಿ ಇನ್​ಸ್ಟಾಗ್ರಾಮ್​​ನಲ್ಲಿ ಪೋಸ್ಟ್​​ ಮಾಡಿದ್ದಾರೆ. ಈ ಸುದ್ದಿ ಹರಿದಾಡುತ್ತಿದ್ದಂತೆ ನೆಟ್ಟಿಗರು ಆಗಾಗ ದರ್ಶನ್​​ ಹೆಸರಿನ ಜತೆ ಕೇಳಿಬರುತ್ತಿದ್ದಂತೆ ಅಷ್ಟಕ್ಕೂ ಪವಿತ್ರಾ ಗೌಡ ಯಾರು? ದರ್ಶನ್ ಜೊತೆ ಈ ಹೆಸರು ತಳಕುಹಾಕಿಕೊಂಡಿದ್ದು ಹೇಗೆ? ಎಂದು ಹುಡುಕಾಡುತ್ತಿದ್ದಾರೆ.

    ಅಂದಹಾಗೆ ದರ್ಶನ್ ಜತೆ ಪವಿತ್ರಾ ಗೌಡ ಹೆಸರು ಸೇರಿಕೊಂಡಿರುವುದು ಈಗೇನಲ್ಲ. ಕಳೆದ ನಾಲ್ಕೈದು ವರ್ಷಗಳಿಂದ ದರ್ಶನ್ ಜತೆ ಪವಿತ್ರಾ ಗೌಡ ಹೆಸರು ಗಾಂಧಿನಗರದಲ್ಲಿ ಓಡಾಡುತ್ತಿದೆ. ಪವಿತ್ರಾ ಗೌಡ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸಕ್ರೀಯರಾಗಿದ್ದಾರೆ. ಆಗಾಗ ಸುಂದರ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಪವಿತ್ರಾ ಗೌಡ ದರ್ಶನ್‌ ಜೊತೆಗಿರುವ ಒಂದೊಂದೆ ಫೋಟೋ ಅಪ್ಲೋಡ್ ಮಾಡಿ ಸುಳಿವು ನೀಡುತ್ತಿದ್ದರು. ದರ್ಶನ್ ಮತ್ತು ಪವಿತ್ರಾ ಗೌಡ ಬಗ್ಗೆ ಗುಸುಗುಸು ಕೇಳಿಬರುತ್ತಿರುವಾಗಲೇ ದರ್ಶನ್ ಜತೆಗಿನ ಫೋಟೋ ಶೇರ್ ಮಾಡುವ ಮೂಲಕ ಎಲ್ಲರ ಹುಬ್ಬೇರಿಸಿದ್ದರು. ದರ್ಶನ್ ಜತೆ ಪವಿತ್ರಾ ಆಪ್ತವಾಗಿರುವ ಫೋಟೋ ಸಿಕ್ಕಾಪಟ್ಟೆ ವೈರಲ್ ಆಗಿತ್ತು.

    ನಮ್ಮಿಬ್ಬರ ಸಂಬಂಧ 10 ವರ್ಷ ಪೂರೈಸಿದೆ. ಥ್ಯಾಂಕ್​ ಯು ಎಂದು ಹೇಳಿ ದರ್ಶನ್ ಜತೆಗಿನ ಫೋಟೋಗಳನ್ನು ಶೇರ್​ ಮಾಡಿಕೊಂಡು​ ಇನ್​ಸ್ಟಾಗ್ರಾಂನಲ್ಲಿ ದರ್ಶನ್​ಗೂ ಪವಿತ್ರಾ ಗೌಡಾ ಟ್ಯಾಗ್​ ಮಾಡಿದ್ದಾರೆ. ಇದರ ಬೆನ್ನಲ್ಲೇ ವಿಜಯಲಕ್ಷ್ಮೀ ಇನ್​​ಸ್ಟಾಗ್ರಾಂ ಮೂಲಕ ಧ್ವನಿ ಎತ್ತಿದ್ದು, ದೂರು ನೀಡುವುದಾಗಿ ಪವಿತ್ರಾ ಗೌಡಗೆ ಎಚ್ಚರಿಕೆ ನೀಡಿದ್ದಾರೆ.

    ವಿಜಯಲಕ್ಷ್ಮೀ ಹೇಳಿದ್ದೇನು?
    ಬೇರೊಬ್ಬರ ಪತಿಯ ಫೋಟೋವನ್ನು ಪೋಸ್ಟ್​ ಮಾಡುವ ಮುನ್ನ ಈ ಮಹಿಳೆ(ಪವಿತ್ರಾ ಗೌಡ)ಗೆ ತನ್ನ ಪ್ರಜ್ಞೆ ಇರಬೇಕು ಎಂದು ನಾನು ಭಾವಿಸುತ್ತೇನೆ. ಈ ರೀತಿ ಪೋಸ್ಟ್​ ಮಾಡುವುದು ಆಕೆಯ ವ್ಯಕ್ತಿತ್ವ, ನಡತೆ ಮತ್ತು ನೈತಿಕ ನಿಲುವಿನ ಬಗ್ಗೆ ಹೇಳುತ್ತದೆ. ಆ ಪುರುಷ ವಿವಾಹಿತನಾಗಿದ್ದರೂ ಆಕೆ ಇನ್ನೂ ಕೂಡ ತನ್ನ ವೈಯಕ್ತಿಕ ಅಗತ್ಯತೆಗಳು ಮತ್ತು ಅಜೆಂಡಾ ಈಡೇರಿಕೆಗಾಗಿ ಅದನ್ನೇ ಮುಂದುವರಿಸಲು ಆಯ್ಕೆ ಮಾಡಿಕೊಂಡಿದ್ದಾಳೆ. ಖುಷಿ ಗೌಡ, ಪವಿತ್ರಾ ಗೌಡ ಹಾಗೂ ಸಂಜಯ್​ ಸಿಂಗ್​ ಮಗಳು ಎಂಬುದನ್ನು ಈ ಫೋಟೋಗಳು ಸ್ಪಷ್ಟವಾಗಿ ನಿರೂಪಿಸುತ್ತವೆ. ಸಾಮಾನ್ಯವಾಗಿ ನಾನು ವೈಯಕ್ತಿಕ ವಿಚಾರಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಧ್ವನಿ ಎತ್ತುವುದಿಲ್ಲ. ಆದರೆ, ನನ್ನ ಕುಟುಂಬ ಹಿತಾಸಕ್ತಿಗಾಗಿ ಧ್ವನಿ ಎತ್ತಲು ಇದು ಸೂಕ್ತ ಸಮಯ ಎಂದು ನನಗೆ ಅನಿಸುತ್ತಿದೆ. ಫೋಟೋಗಳನ್ನು ಶೇರ್​ ಮಾಡುವ ಮೂಲಕ ಸಮಾಜಕ್ಕೆ ಬೇರೆ ಕಲ್ಪನೆ ಬಿತ್ತುತ್ತಿರುವ ಜನರ ವಿರುದ್ಧ ನಾನು ಕಾನೂನು ಕ್ರಮವನ್ನು ತೆಗೆದುಕೊಳ್ಳುತ್ತೇನೆ ಎಂದು ಪವಿತ್ರಾ ಗೌಡ ಮತ್ತು ಸಂಜಯ್​ ಸಿಂಗ್​ ಫೋಟೋಗಳ ಸಮೇತ ಖಡಕ್​ ಎಚ್ಚರಿಕೆ ನೀಡಿರುವ ವಿಜಯಲಕ್ಷ್ಮೀ, ಸಂಜಯ್​ ಸಿಂಗ್​, ಖುಷಿಗೌಡ ಹಾಗೂ ಪವಿತ್ರಾ ಗೌಡಗೆ ಟ್ಯಾಗ್​ ಮಾಡಿದ್ದಾರೆ.

    Darshan and Vijayalakshami

    ಪವಿತ್ರಾ ಗೌಡಾ ಯಾರು?: ಪವಿತ್ರಾ ಗೌಡ ರೂಪದರ್ಶಿ ಮತ್ತು ನಟಿ. ಸಿನಿಮಾ ಮತ್ತು ಕಿರುತೆರೆಯಲ್ಲೂ ಮಿಂಚಿದ್ದಾರೆ. ಇವರಿಗೆ ಒಬ್ಬಳು ಹೆಣ್ಣುಮಗಳಿದ್ದಾಳೆ.ಪವಿತ್ರಾ ಗೌಡ ಅವರಿಗೆ ಈಗಾಗಲೇ ಮದುವೆಯಾಗಿದೆ. ಖುಷಿ ಎನ್ನುವ ಒಬ್ಬಳು ಮಗಳು ಕೂಡ ಇದ್ದಾಳೆ. ಪವಿತ್ರಾ ಪತಿಯಿಂದ ದೂರ ಆಗಿ ಅನೇಕ ವರ್ಷಗಳಾಗಿದೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ಸದ್ಯ ದರ್ಶನ್ ಜೊತೆ ಪವಿತ್ರಾ ಗೌಡ ಹೆಸರು ಜೋರಾಗಿ ಕೇಳಿಬರುತ್ತಿದೆ.

    ಅಗಮ್ಯಾ, ಛತ್ರಿಗಳು ಸಾರ್ ಛತ್ರಿಗಳು, ಸಾಗುವ ದಾರಿ, ಪ್ರೀತಿ ಕಿತಾಬು ಸೇರಿದಂತೆ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ ಈ ಸಿನಿಮಾಗಳು ಹೇಳಿಕೊಳ್ಳುವಷ್ಟು ಹೆಸರು, ಯಶಸ್ಸು ತಂದುಕೊಟ್ಟಿಲ್ಲ. ಪವಿತ್ರಾ ಸಿನಿಮಾಗಿಂತ ಹೆಚ್ಚಾಗಿ ದರ್ಶನ್ ವಿಚಾರವಾಗಿಯೇ ಖ್ಯಾತಿಗಳಿಸಿದ್ದಾರೆ. ಸದ್ಯ ಪವಿತ್ರಾ ಗೌಡ ಫ್ಯಾಷನ್ ಡಿಸೈನರ್ ಆಗಿದ್ದು ಬೋಟಿಕ್ ನಡೆಸುತ್ತಿದ್ದಾರೆ. ಕನ್ನಡ ಚಿತ್ರರಂಗ ಸ್ಟಾರ್ ನಟಿಯರು ಹಾಗೂ ಜನ ಸಾಮಾನ್ಯರಿಗೆ ತಮ್ಮ ಡಿಸೈನರ್ ಉಡುಪುಗಳನ್ನು ಮಾರಾಟ ಮಾಡುತ್ತಾರೆ.

    ದರ್ಶನ್​ ಜತೆ 10 ವರ್ಷದಿಂದ ಸಂಬಂಧ; ವಿವಾದ ಹುಟ್ಟುಹಾಕಿದ ಈ ಪವಿತ್ರಾ ಗೌಡ ಯಾರು?

    ಈ ಹಿಂದೆ ನಟ ದರ್ಶನ್‌ ಅವರ ಅಕ್ಕ ಮತ್ತು ತಾಯಿ ಜೊತೆ ಪವಿತ್ರಾ ಗೌಡ ಫೋಟೋ ಅಪ್ಲೋಡ್ ಮಾಡಿ ವಿವಾದಕ್ಕೆ ಸಿಲುಕಿಕೊಂಡಿದ್ದರು. ಆಗ ಯಾವುದೇ ರೀತಿಯ ಸ್ಪಷ್ಟನೆ ನೀಡಿರಲಿಲ್ಲ.

    ಬೆತ್ತಲೆ ಹಬ್ಬ; ಪುರುಷರ ಜತೆ ಮಹಿಳೆಯರಿಗೂ ಅವಕಾಶ..ಷರತ್ತುಗಳು ಅನ್ವಯ

    ಇನ್ಮುಂದೆ ಸುಮ್ಮನಿರಲ್ಲ… ಪರ್ಸನಲ್​ ಫೋಟೋಗಳನ್ನು ಹರಿಬಿಟ್ಟು ಪವಿತ್ರಾಗೆ ವಿಜಯಲಕ್ಷ್ಮೀ ಖಡಕ್​ ಎಚ್ಚರಿಕೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts