More

    ‘ಮುಖ್ಯಮಂತ್ರಿ ಯಡಿಯೂರಪ್ಪನವರ ಜೀವ ವಿಜಯೇಂದ್ರನ ಕೈಯಲ್ಲಿದೆ’

    ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಕುಟುಂಬ ರಾಜಕಾರಣ ಬಗ್ಗೆ ಕಟುವಾಗಿ ಮಾತನಾಡಿದ್ದಾರೆ. ಕುಟುಂಬ ರಾಜಕಾರಣ ಇಡೀ ದೇಶವನ್ನು ಕಿತ್ತು ತಿನ್ನುತ್ತಿದೆ. ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಕುಟುಂಬ ರಾಜಕಾರಣ ಅತಿಯಾಗಿದೆ ಎಂದು ಬಿಜೆಪಿ ನಾಯಕ ವಿಧಾನ ಪರಿಷತ್​ ಸದಸ್ಯ ಅಡಗೂರು ಎಚ್​. ವಿಶ್ವನಾಥ್​​ ಹೇಳಿದರು.

    ಅಧಿಕಾರದ ವ್ಯಾಮೋಹ ಇದ್ದರೆ ತಪ್ಪೇನೂ?
    'ಮುಖ್ಯಮಂತ್ರಿ ಯಡಿಯೂರಪ್ಪನವರ ಜೀವ ವಿಜಯೇಂದ್ರನ ಕೈಯಲ್ಲಿದೆ'ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 78 ವರ್ಷದ ಯಡಿಯೂರಪ್ಪರಿಗೆ ಅಧಿಕಾರ ವ್ಯಾಮೋಹ ಇರಬೇಕಾದ್ರೆ, 72 ವರ್ಷದ ನನಗೆ ಅಧಿಕಾರದ ವ್ಯಾಮೋಹ ಇದ್ದರೆ ತಪ್ಪೇನೂ? ಎಂದು ಪ್ರಶ್ನಿಸಿದರು. ಮುಂದುವರಿದು ನಾನು ಪಕ್ಷಾಂತರಿ ಅಲ್ಲ. ನಾಯಕತ್ವದ ವಿರುದ್ಧ ಧ್ವನಿ ಎತ್ತಿ ಪಕ್ಷ ಬದಲಿಸಿದ್ದೇನೆ. ನಾನು ಈ ಎಲ್ಲ ವಿಚಾರಗಳನ್ನು ಪುಸ್ತಕ ರೂಪದಲ್ಲಿ ಹೊರತರುವ ಯೋಚನೆಯಲ್ಲಿದ್ದೇನೆ. ಬಾಂಬೆ ಡೇಸ್ ಪುಸ್ತಕದಲ್ಲಿ ಸರ್ಕಾರ ರಚನೆಯ ಪ್ರಹಸನದ ಬಗ್ಗೆ ಬರೆಯುತ್ತಿದ್ದೇನೆ. ಇನ್ನು ನಾಲ್ಕೈದು ಅಧ್ಯಾಯಗಳು‌ ಬಾಕಿ ಇವೆ ಎಂದರು.

    ಇದನ್ನೂ ಓದಿರಿ: ಮದುವೆಯಾದ ತಿಂಗಳಲ್ಲೇ ರೈಲಿನಿಂದ ಪತ್ನಿಯ ನೂಕಿ ಕೊಲೆ- ಮುಂಬೈನಲ್ಲಿ ಅಮಾನುಷ ಘಟನೆ

    ಅಧಿಕಾರದ ಆಸೆ ಇಲ್ಲ ಅಂತ ಹೇಳಲ್ಲ
    ಸಾರಾ ಮಹೇಶ್ ಕೊಚ್ಚೆಗುಂಡಿ. ಆ ಕೊಚ್ಚೆಗುಂಡಿಗೆ ಕಲ್ಲು ಎಸೆದು ನಾನೇಕೆ ಹೊಲಸು ಮಾಡ್ಕೊಳ್ಳಿ ಎಂದ ವಿಶ್ವನಾಥ್​, ಕೇವಲ ತತ್ವದ ಸಿದ್ದಾಂತಕ್ಕಾಗಿ ರಾಜಕೀಯ ಮಾಡಲು ಸಾಧ್ಯವಿಲ್ಲ. ಅಧಿಕಾರದ ಆಸೆ ಇಲ್ಲ ಅಂತ ನಾನು ಹೇಳುತ್ತಿಲ್ಲ. ರಾಜಕೀಯದಲ್ಲಿ ಅಧಿಕಾರ ಇಲ್ಲದೆ ಏನೂ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.

    ಅಮಿತ್ ಷಾ ಮಗನ ವಿಚಾರದಲ್ಲಿ ಮೋದಿಗೆ ಬೇಸರವಿದೆ
    ಪ್ರಧಾನಿ ಮೋದಿ ಕುಟುಂಬ ರಾಜಕಾರಣ ಬಗ್ಗೆ ಕಟುವಾಗಿ ಮಾತನಾಡಿದ್ದಾರೆ. ಕುಟುಂಬ ರಾಜಕಾರಣ ದೇಶವನ್ನು ಕಿತ್ತು ತಿನ್ನುತ್ತಿದೆ. ಸಿಎಂ ಯಡಿಯೂರಪ್ಪ ಕುಟುಂಬದ ರಾಜಕಾರಣ ಅತಿಯಾಗಿದೆ. ಯಡಿಯೂರಪ್ಪ ಮಗ ವಿಜಯೇಂದ್ರ ಇಲ್ವಾ? ರಾಘವೇಂದ್ರ ಎಂ.ಪಿ ಇದ್ದಾರೆ. ಕುಟುಂಬದ ಹೆಣ್ಣುಮಕ್ಕಳು ರಾಜಕಾರಣದಲ್ಲಿ ಭಾಗಿಯಾಗುತ್ತಿಲ್ವಾ? ಎಂದು ಪ್ರಶ್ನಿಸಿದ ವಿಶ್ವನಾಥ್​, ಈಶ್ವರಪ್ಪನ ಕುಟುಂಬ ಸಹ ರಾಜಕಾರಣದಿಂದ ಹೊತರಾಗಿಲ್ಲ. ಕುಟುಂಬ ರಾಜಕಾರಣವೇ ಭ್ರಷ್ಟಾಚಾರವನ್ನು ಪೋಷಿಸುತ್ತಿದೆ. ಅಮಿತ್ ಷಾ ಮಗನ ವಿಚಾರದಲ್ಲಿ ಮೋದಿ ಸಹ ಬೇಸರ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.

    ಇದನ್ನೂ ಓದಿರಿ: ಮದ್ವೆಯಾಗುತ್ತಾನೆಂದು ನಂಬಿ ಎಲ್ಲವನ್ನೂ ಅರ್ಪಿಸಿಬಿಟ್ಟೆ- ಈಗ ಬೇರೆಯವಳನ್ನು ಕಟ್ಟಿಕೊಂಡಿದ್ದಾನೆ: ನಾನೇನು ಮಾಡಲಿ?

    ಯಡಿಯೂರಪ್ಪನವರ ಬಗ್ಗೆ ನನಗೆ ಕಳಕಳಿ
    ಯಡಿಯೂರಪ್ಪ ಕಾಮಧೇನು ಇದ್ದಂತೆ, 30 ವರ್ಷದಿಂದ ನೋಡುತ್ತಿದ್ದೇನೆ. ಯಡಿಯೂರಪ್ಪನವರ ಜೀವ ವಿಜಯೇಂದ್ರನ ಕೈಯಲ್ಲಿ ಇದೆ. ಯಡಿಯೂರಪ್ಪನ ಬದುಕು ಬಾಲ ನಾಗಮ್ಮನ ಕಥೆಯಂತಾಗಿದೆ. ಇವತ್ತಿಗೂ ಯಡಿಯೂರಪ್ಪನವರ ಬಗ್ಗೆ ನನಗೆ ಕಳಕಳಿ ಇದೆ ಎಂದರು. (ದಿಗ್ವಿಜಯ ನ್ಯೂಸ್​)

    ಕರೊನಾ ಲಸಿಕೆ ವಿತರಣೆಗೂ ಮುನ್ನ ಅನುಸರಿಸಬೇಕಾದ ನಿಯಮಗಳೇನು? ಕೇಂದ್ರದ ಮಾರ್ಗಸೂಚಿಯಲ್ಲೇನಿದೆ?

    ರಾಮಸೇತು ಅಧ್ಯಯನಕ್ಕೆ ಸಮ್ಮತಿ; ನೀರಿನ ಆಳದಲ್ಲಿನ ಮಾದರಿ ಸಂಗ್ರಹಿಸಿ ವಿಶ್ಲೇಷಣೆ

    ಮೊದಲ ದಿನ 3 ಲಕ್ಷ ಲಸಿಕೆ; ದೇಶದ ಬೃಹತ್ ಲಸಿಕೆ ಅಭಿಯಾನಕ್ಕೆ ನಾಳೆ ಚಾಲನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts