

‘ದಿ ಕೇರಳ ಸ್ಟೋರಿ’ ಸಿನಿಮಾದ ಬಿಡುಗಡೆ ಬಳಿಕ ಬಾಲಿವುಡ್ ಬ್ಯೂಟಿ ಅದಾ ಶರ್ಮಾ ಜನಪ್ರಿಯತೆ ಮತ್ತಷ್ಟು ಹೆಚ್ಚಿದೆ. ಬಾಲಿವುಡ್ನ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಅವರು ವಾಸವಾಗಿದ್ದ ಮನೆಯನ್ನು ಅದಾ ಶರ್ಮಾ ಅವರು ಬಾಡಿಗೆಗೆ ಪಡೆದಿದ್ದಾರೆ.
ಅಪಾರ ಅಭಿಮಾನಿಗಳನ್ನು ಹೊಂದಿದ್ದ ಸುಶಾಂತ್ ಸಿಂಗ್ ರಜಪೂತ್ ಅವರು ಬಾಲಿವುಡ್ನಲ್ಲಿ ಬಹುಬೇಡಿಕೆಯ ನಟನಾಗಿ ಗುರುತಿಸಿಕೊಂಡಿದ್ದರು. ಅನೇಕ ಹಿಟ್ ಸಿನಿಮಾಗಳನ್ನು ನೀಡಿದ್ದ ಸುಶಾಂತ್, ಬಾಲಿವುಡ್ನಲ್ಲಿ ಬಹುಬೇಡಿಕೆಯ ನಟನಾಗಿ ಗುರುತಿಸಿಕೊಂಡಿದ್ದರು. ಅಪಾರ ಅಭಿಮಾನಿಗಳನ್ನು ಹೊಂದಿದ್ದ ಅವರು ಏಕಾಏಕಿ ಸಾವಿಗೆ ಶರಣಾಗಿದ್ದು ಎಲ್ಲರಿಗೂ ನೋವು ನೀಡಿತು. ಸುಶಾಂತ್ ಸಾವನ್ನಪ್ಪಿದ ಬಳಿಕ ಅವರ ಅಪಾರ್ಟ್ಮೆಂಟ್ ಬಗ್ಗೆಯೂ ಸಾಕಷ್ಟು ಗಾಸಿಪ್ ಹರಿದಾಡಿತು.
ಅಂತಹ ವಿವಾದಿತ ಜಾಗದಲ್ಲಿ ಈಗ ಅದಾ ಶರ್ಮಾ ಅವರು ವಾಸ ಮಾಡಲು ನಿರ್ಧರಿಸಿದ್ದಾರೆ. ಶೀಘ್ರದಲ್ಲೇ ಅವರ ಆ ಫ್ಲಾಟ್ಗೆ ಶಿಫ್ಟ್ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ಸುಶಾಂತ್ ನಿಧನದ ನಂತರ ಆ ಜಾಗವನ್ನು ಖರೀದಿಸಲು ಅನೇಕರು ಆಸಕ್ತಿ ತೋರಿಸಿದ್ದರು. ಆದರೆ ಅದನ್ನು ಮಾರಲು ಅಪಾರ್ಟ್ಮೆಂಟ್ ಮಾಲೀಕರಿಗೆ ಇಷ್ಟವಿಲ್ಲ. ಹಾಗಾಗಿ ಕೇವಲ ಬಾಡಿಗೆಗೆ ನೀಡಬೇಕು ಎಂಬುದಷ್ಟೇ ಅವರ ಉದ್ದೇಶ. ಬಾಡಿಗೆಗೆ ಪಡೆದು ವಾಸಿಸಲು ಕೆಲವರು ಹಿಂದೇಟು ಹಾಕಿದ್ದರು. ಕೊನೆಗೂ ಅದಾ ಶರ್ಮಾ ಅವರು ಆ ಫ್ಲಾಟ್ ಅನ್ನು ಬಾಡಿಗೆಗೆ ಪಡೆದಿದ್ದಾರೆ. ಪ್ರತಿ ತಿಂಗಳು ಅವರು ಬರೋಬ್ಬರಿ 4.5 ಲಕ್ಷ ರೂಪಾಯಿ ಬಾಡಿಗೆ ಕಟ್ಟುತ್ತಾರೆ ಎಂದು ವರದಿ ಆಗಿದೆ.