More

    ಬಿಜೆಪಿಯಿಂದ ಅಡಕೆಗೆ ಉತ್ತಮ ಧಾರಣೆ

    ಎನ್.ಆರ್.ಪುರ: 2014ರಲ್ಲಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗಲೇ ಅಡಕೆಗೆ ಉತ್ತಮ ಧಾರಣೆ ಬಂದಿದ್ದು, ಈಗಲೂ ಅದೇ ಧಾರಣೆ ಮುಂದುವರಿದಿದೆ ಎಂದು ಮಾಜಿ ಸಚಿವ ಡಿ.ಎನ್.ಜೀವರಾಜ್ ಹೇಳಿದರು.
    ಭಾನುವಾರ ಮೂಡಬಾಗಿಲು ಗ್ರಾಮದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, 2013ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಇಂದಿರಾ ಜೈಸಿಂಗ್ ಅಡಕೆ ಕ್ಯಾನ್ಸರ್ ಕಾರಕವಾಗಿದ್ದು ಅದನ್ನು ಬ್ಯಾನ್ ಮಾಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಿದ್ದರು.ಆ ಕೇಸ್ ಇನ್ನೂ ಜೀವಂತವಾಗಿದೆ ಎಂದರು.
    2014ರಲ್ಲಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ವಿದೇಶದಿಂದ ಆಮದಾಗುತ್ತಿರುವ ಅಡಕೆಗೆ ತೆರಿಗೆ ಹೆಚ್ಚಿಸಬೇಕು ಎಂದು ಆಗ್ರಹಿಸಿ ಅಂದಿನ ಕೇಂದ್ರ ಸಚಿವ ಅನಂತಕುಮಾರ್ ನೇತೃತ್ವದಲ್ಲಿ ಕೇಂದ್ರ ಹಣಕಾಸು ಸಚಿವರನ್ನು ಭೇಟಿ ಮಾಡಿ ಆಗ್ರಹಿಸಿದೆವು. ಆಮದು ಅಡಕೆಗೆ ಹೆಚ್ಚುವರಿ ತೆರಿಗೆ ವಿಧಿಸಿದ್ದರಿಂದ 2014ರ ಅಕ್ಟೋಬರ್‌ನಲ್ಲಿ ಒಂದು ಕ್ವಿಂಟಾಲ್ 80 ಸಾವಿರ ಮುಟ್ಟಿತ್ತು. ಈಗಲೂ ಅಡಕೆ ಧಾರಣೆ ಸ್ಥಿರವಾಗಿ ಮುಂದುವರಿದಿದೆ. ಅಡಕೆ ಧಾರಣೆ ಏರಿಕೆಗೂ ಜಯಪ್ರಕಾಶ ಹೆಗ್ಡೆಗೂ ಸಂಬಂಧವಿಲ್ಲ ಎಂದರು.
    ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು 11ತಿಂಗಳು ಕಳೆದರೂ ಸಾಧನೆ ಶೂನ್ಯ ನಾನು ಶಾಸಕನಾಗಿದ್ದ ಅವಧಿಯಲ್ಲಿ ಫಾರ್ಮ್ ನಂ 50,53ರಲ್ಲಿ ಸಾಗುವಳಿ ಚೀಟಿ ನೀಡಿದ್ದೆ. ಬಡವರಿಗೆ ಗಂಗಾ ಕಲ್ಯಾಣ. 94 ಸಿಸಿ ಅಡಿ ಹಕ್ಕುಪತ್ರ ನೀಡಲಾಗಿತ್ತು. ನೀವು ಎಷ್ಟು ಹಕ್ಕುಪತ್ರ ನೀಡಲಾಗಿದೆ ಎಂದು ಉತ್ತರಿಸಬೇಕು ಎಂದರು. ಗ್ಯಾರಂಟಿ ಹೆಸರಿನಲ್ಲಿ ಕೊಟ್ಟಿದ್ದಕ್ಕಿಂತ ಕಿತ್ತುಕೊಂಡಿದ್ದು ಜಾಸ್ತಿ ಎಂದರು.
    ತಾಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ನಾಮ ನಾಗೇಶ್, ತಾಲೂಕು ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ರಶ್ಮಿ ದಯಾನಂದ್, ವಾಲ್ಮೀಕಿ ಸಂಘದ ಶೃಂಗೇರಿ ಕ್ಷೇತ್ರ ಅಧ್ಯಕ್ಷ ವಾಲ್ಮೀಕಿ ಶ್ರೀನಿವಾಸ್, ಬಿಜೆಪಿ ಕಸಬಾ ಹೋಬಳಿ ಅಧ್ಯಕ್ಷ ಎಚ್.ಡಿ.ಲೋಕೆಶ್, ಬೂತ್ ಸಮಿತಿ ಅಧ್ಯಕ್ಷ ಚಂದ್ರಶೇಖರ್ ,ಜೆಡಿಎಸ್ ಮುಖಂಡ ವೆಂಕಟೇಶ್, ಸುನೀತಾ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts