20.4 C
Bangalore
Monday, December 9, 2019

ಅದಮಾರು ಮಠದ ಜವಾಬ್ದಾರಿ ಕಿರಿಯ ಶ್ರೀಗೆ

Latest News

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಮೊದಲ ಸುತ್ತಿನ ಮತಎಣಿಕೆ ಮುಕ್ತಾಯ: ಕೆ.ಆರ್​.ಪೇಟೆಯಲ್ಲಿ ಜೆಡಿಎಸ್​, ಹುಣಸೂರಿನಲ್ಲಿ ಕಾಂಗ್ರೆಸ್​ ಮುನ್ನಡೆ

ಹುಣಸೂರು/ಕೆ.ಆರ್​ಪೇಟೆ: ಕೆ.ಆರ್​.ಪೇಟೆ ಕ್ಷೇತ್ರದ ಉಪಚುನಾವಣೆಯ ಅಂಚೆ ಮತಎಣಿಕೆಯಲ್ಲಿ ಮುಂದಿದ್ದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮೊದಲ ಸುತ್ತಿನ ಮತಎಣಿಕೆಯಲ್ಲಿ ಹಿಂದೆ ಉಳಿದಿದ್ದು, ಜೆಡಿಎಸ್​ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಚಿಕ್ಕಬಳ್ಳಾಪುರದಲ್ಲಿ 31 ಅಂಚೆಮತದಲ್ಲಿ 27 ಸ್ವೀಕೃತ, ಬಿಜೆಪಿ ಅಭ್ಯರ್ಥಿ ಸುಧಾಕರ್​ ಮುನ್ನಡೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಡೆದ ಅಂಚೆ ಮತಎಣಿಕೆಯಲ್ಲಿ ಚಲಾವಣೆಯಾದ ಒಟ್ಟು 31 ಅಂಚೆಮತದಲ್ಲಿ 27 ಸ್ವೀಕೃತವಾಗಿವೆ. ಅಂಚೆ ಮತೆಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್​...

ಕಾಗವಾಡ, ಅಥಣಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಮುನ್ನಡೆ

ಬೆಳಗಾವಿ: ಕಾಗವಾಡದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಮೊದಲ ಸುತ್ತಿನ ಎಣಿಕೆಯಲ್ಲಿ ಮುಂದಿದ್ದಾರೆ. ಅಂಚೆಮತಗಳ ಎಣಿಕೆಯಲ್ಲೂ ಮುಂದಿದ್ದ ಅವರು ನಂತರ ಮೊದಲ ಸುತ್ತಿನಲ್ಲೂ...

ಮೊದಲ ಹಂತದ ಮತ ಎಣಿಕೆ ಶಿವರಾಮ ಹೆಬ್ಬಾರಗೆ 5004 ಮತ ಮುನ್ನಡೆ

ಕಾರವಾರ: ಕುತೂಹಲ ಕೆರಳಿಸಿರುವ ವಿಧಾನಸಭೆಯ 15 ಕ್ಷೇತ್ರಗಳ ಉಪಚುನಾವಣೆಯ ಪೈಕಿ ಯಲ್ಲಾಪುರ ಕ್ಷೇತ್ರದ ಮತ ಎಣಿಕೆ ಆರಂಭವಾಗಿದೆ. ಮೊದಲ ಹಂತದ ಮತ ಎಣಿಕೆಯಲ್ಲಿ...

ಉಡುಪಿ: ಉಡುಪಿ ಅಷ್ಟಮಠಗಳಲ್ಲಿ ಒಂದಾಗಿರುವ ಅದಮಾರು ಮಠದ ಸಂಪೂರ್ಣ ಜವಾಬ್ದಾರಿಯನ್ನು ಉತ್ತರಾಧಿಕಾರಿ, ಕಿರಿಯ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರಿಗೆ ಅದಮಾರು ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಹಸ್ತಾಂತರಿಸಿದ್ದಾರೆ.

ಕಿರಿಯ ಶ್ರೀಗಳೊಂದಿಗೆ ರಥಬೀದಿಯ ಅದಮಾರು ಮಠದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅದಮಾರು ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ, ಒಬ್ಬರಿಗೆ ಜವಾಬ್ದಾರಿ ಕೊಡುವುದು ಎಂದರೆ ಮನೆಯ ಹಿರಿಯರು ಹಗುರವಾದಂತೆ, ನಾನು 1972ರಲ್ಲಿ ಸನ್ಯಾಸ ದೀಕ್ಷೆ ಸ್ವೀಕರಿಸಿ ಇಲ್ಲಿವರೆಗೂ ಮಠದ ಕಾರ್ಯಗಳನ್ನು ನಡೆಸಿಕೊಂಡು ಬಂದಿದ್ದೇನೆ. ನನಗೆ 60 ವರ್ಷವಾಗಿದ್ದು, ಈಗ ಶಿಷ್ಯ ಈಶಪ್ರಿಯರಿಗೆ ಮಠದ ಸಮಗ್ರ ಜವಾಬ್ದಾರಿ ನೀಡುತ್ತಿದ್ದೇನೆ, ಇನ್ನು ಮುಂದೆ ಅವರೇ ಮಠಾಧೀಶರಾಗಿ ಮುಂದುವರಿಯಲಿದ್ದಾರೆ ಎಂದರು.

ಈಶಪ್ರಿಯರು ಉತ್ತಮ ವೈದಿಕ ಮತ್ತು ಲೌಕಿಕ ಜ್ಞಾನ ಹೊಂದಿದ್ದಾರೆ. ಅನಂತಾಸನ ಒಂದೊಳ್ಳೆಯ ಉತ್ತರಾಧಿಕಾರಿ ನಮಗೆ ನೀಡಿದ್ದಾರೆ. ಆರಂಭದಲ್ಲಿ ಅವರು ನನ್ನ ನಿರ್ಧಾರಕ್ಕೆ ಒಪ್ಪಲಿಲ್ಲ, ಬಳಿಕ ನಾನು ಮನವೊಲಿಸಿದೆ. ನನಗಿಂತಲೂ ಚೆನ್ನಾಗಿ ಮಠದ ಕಾರ್ಯಗಳನ್ನು ನಿಭಾಯಿಸುತ್ತಾರೆ ಎಂಬ ವಿಶ್ವಾಸವಿದೆ. ಹಿರಿಯನಾಗಿ ನಾನು ಅವರ ಜತೆಗಿದ್ದು, ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸುತ್ತೇವೆ ಎಂದರು.

ಶಿಕ್ಷಣ ಸಂಸ್ಥೆ ಜವಾಬ್ದಾರಿ ಇಲ್ಲ: ಅದಮಾರು ಸಮೂಹ ಶಿಕ್ಷಣ ಸಂಸ್ಥೆಗಳ ಜವಾಬ್ದಾರಿಯನ್ನು ನನ್ನ ಬಳಿಯೇ ಇಟ್ಟುಕೊಂಡಿದ್ದೇನೆ. ಸದ್ಯಕ್ಕೆ ಮಠದ ಜವಾಬ್ದಾರಿ ಮಾತ್ರ ಅವರು ನಿಭಾಯಿಸಲಿದ್ದಾರೆ. ಧಾರ್ಮಿಕ ಕಾರ್ಯಕ್ರಮ, ಪೂಜೆ, ಹಣಕಾಸು, ಲೆಕ್ಕಪತ್ರ ಮೊದಲಾದವುಗಳ ಮುಖ್ಯಸ್ಥರು ಅವರೇ ಆಗಿರುತ್ತಾರೆ. ಮಠದ ಜವಾಬ್ದಾರಿ ಸಂಪೂರ್ಣವಾಗಿ ತಿಳಿದುಕೊಂಡು, ಶಿಕ್ಷಣ ಸಂಸ್ಥೆಗಳ ಬಗ್ಗೆ ಗಮನ ಕೊಡುವುದಾಗಿ ಕಿರಿಯ ಶ್ರೀಗಳು ಹೇಳಿದ್ದಾರೆ. ಶಿಕ್ಷಣ ಸಂಸ್ಥೆಯ ಜವಾಬ್ದಾರಿಯನ್ನು ನಿಭಾಯಿಸುವ ಬಗ್ಗೆ ಅವರು ನಮ್ಮೊಂದಿಗಿದ್ದು ತಿಳಿದುಕೊಳ್ಳಲಿದ್ದಾರೆ. ಅದಮಾರು ಶಿಕ್ಷಣ ಸಮೂಹ ಸಂಸ್ಥೆಯ ಕಾರ್ಯಾಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಶ್ರೀಗಳು ತಿಳಿಸಿದರು.

ಪರ್ಯಾಯ ನಿರ್ಧಾರ ಆಗಿಲ್ಲ: ಮುಂದಿನ ಶ್ರೀಕೃಷ್ಣ ಮಠ ಪರ್ಯಾಯ ಕುಳಿತುಕೊಳ್ಳುವ ಬಗ್ಗೆ ಯಾವುದೇ ತೀರ್ಮಾನ ಆಗಿಲ್ಲ, ಮುಂದಿನ ದಿನಗಳಲ್ಲಿ ಈ ಬಗ್ಗೆ ಚಿಂತಿಸಲಾಗುವುದು ಎಂದು ವಿಶ್ವಪ್ರಿಯ ತೀರ್ಥ ಸ್ವಾಮೀಜಿ ತಿಳಿಸಿದರು. ಲಕ್ಷದೀಪ ಆರಂಭವಾದ ಮೇಲೆ ವೃಶ್ಚಿಕ ಮಾಸದಲ್ಲಿ ಪರ್ಯಾಯದ ಬಾಳೆ ಮುಹೂರ್ತ ನಡೆಯಲಿದೆ. ಡಿಸೆಂಬರ್-ಜನವರಿ ತಿಂಗಳಲ್ಲಿ ಈ ಕಾರ್ಯಕ್ರಮ ಬರಲಿದೆ ಎಂದು ತಿಳಿಸಿದರು.

33ರ ನಂಟು: ಅದಮಾರು ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಸನ್ಯಾಸತ್ವ ಸ್ವೀಕರಿಸಿದ್ದು 1972ರಲ್ಲಿ, ಅದಮಾರು ಮಠದ 32ನೇ ಮಠಾಧೀಶರಾಗಿದ್ದರು. ತಮ್ಮ 33ನೇ ವಯಸ್ಸಿನಲ್ಲಿ ಪ್ರಥಮ ಪರ್ಯಾಯಕ್ಕೆ ಅದಮಾರು ಶ್ರೀಗಳು ಕೂತಿದ್ದರು. ನೂತನ ಮಠಧೀಶರಾದ ಈಶಪ್ರಿಯ ತೀರ್ಥ ಸ್ವಾಮೀಜಿಗೆ 33 ವರ್ಷವಾಗಿದ್ದು, ಅದಮಾರು ಮಠದ 33ನೇ ಮಠಾಧೀಶರಾಗಿದ್ದಾರೆ. ಈಶಪ್ರಿಯ ತೀರ್ಥ ಸ್ವಾಮೀಜಿ 2014 ಜೂನ್ 19ರಂದು ಮಠದ ಉತ್ತರಾಧಿಕಾರಿಯಾಗಿ ಆಯ್ಕೆಯಾಗಿದ್ದರು.

ತುಂಬಾ ಆಶ್ಚರ್ಯವಾಗುತ್ತಿದೆ, ಗುರುಗಳಲ್ಲಿ ಎಷ್ಟು ಹೇಳಿದರು ಅವರು ಕೇಳಲಿಲ್ಲ. ಗುರುಪ್ರಸಾದ ಎಂದು ತಿಳಿದು ಜವಾಬ್ದಾರಿಯಲ್ಲಿ ಮುನ್ನಡೆಯುತ್ತೇನೆ. ಗುರುಗಳ ಮಾರ್ಗದರ್ಶನ ಸದಾ ಪಡೆದುಕೊಳ್ಳುತ್ತೇನೆ. ಗುರುಗಳನ್ನು ಕೇಳದೆ ನಾವು ಯಾವುದೇ ಕೆಲಸವನ್ನು ಮಾಡುವುದಿಲ್ಲ. ಶಿಕ್ಷಣ ಸಂಸ್ಥೆಯ ಜವಾಬ್ದಾರಿ ವಹಿಸಿಕೊಡಲು ಗುರುಗಳು ತಯಾರಾಗಿದ್ದರು, ನಾವೇ ಬೇಡ ಎಂದಿದ್ದೇವೆ. ಸದ್ಯಕ್ಕೆ ಕಾರ್ಯಾಧ್ಯಕ್ಷರಾಗಿ ಮುಂದುವರಿಯಲಿದ್ದೇವೆ.
|ಈಶಪ್ರಿಯ ತೀರ್ಥ ಸ್ವಾಮೀಜಿ, ಅದಮಾರು ಮಠ

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...