ಮದ್ದೂರು: ತಾಲೂಕಿನ ಹೆಮ್ಮನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆಂದು ಪಂಚಾಯತ್ ರಾಜ್ ಆಯುಕ್ತೆ ಅರುಂದತಿ ಚಂದ್ರಶೇಖರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ತಾಲೂಕಿನ ಹೆಮ್ಮನಹಳ್ಳಿಗೆ ಶುಕ್ರವಾರ ಏಶಿಯನ್ ಅಭಿವೃದ್ಧಿ ಬ್ಯಾಂಕ್ (ಎಡಿಬಿ ತಂಡ)ನೊಂದಿಗೆ ಕೂಸಿನ ಮನೆಯ ಕಾರ್ಯವೈಖರಿ ಬಗ್ಗೆ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಹೆಮ್ಮನಹಳ್ಳಿ ಗ್ರಾಪಂ ಕೂಸಿನ ಮನೆ ಸೇರಿದಂತೆ ಎಲ್ಲ ಯೋಜನೆಗಳನ್ನು ಸಮರ್ಪಕವಾಗಿ ಜಾರಿ ಮಾಡುತ್ತಿರುವುದು ಭೇಟಿ ನೀಡಿದ ಸಂದರ್ಭದಲ್ಲಿ ತಿಳಿದು ಬಂದಿರುವುದು ಪ್ರಶಂಸನೀಯ ಸಂಗತಿಯಾಗಿದೆ ಎಂದರು.
ಎಡಿಬಿ ತಂದ ಕಲ್ಬುರ್ಗಿ, ಯಾದಗಿರಿ ಮುಗಿಸಿಕೊಂಡು ದಕ್ಷಿಣ ಕರ್ನಾಟಕವಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹೆಮ್ಮನಹಳ್ಳಿಯಲ್ಲಿ ನಡೆಯುತ್ತಿರುವ ಕೂಸಿನ ಮನೆ ಯೋಜನೆಯನ್ನು ಪರಿಶೀಲನೆ ಮಾಡಲು ಮತ್ತು ಮುಂದೆ ಯಾವ ರೀತಿ ಮತ್ತಷ್ಟು ಅಭಿವೃದ್ಧಿ ಮಾಡಬಹುದು ಎಂಬ ಬಗ್ಗೆ ತಿಳಿದುಕೊಳ್ಳಲು ಬಂದಿದೆ. ಹೆಮ್ಮನಹಳ್ಳಿ ಗ್ರಾಪಂ ಪಿಡಿಒ ಲೀಲಾವತಿ ಹಾಗೂ ಗ್ರಾಪಂ ಜನಪ್ರತಿನಿಧಿಗಳು ಉತ್ತಮ ರೀತಿಯಲ್ಲಿ ಕೂಸಿನ ಮನೆ ನಿರ್ವಹಣೆ ಮಾಡುತ್ತಿದ್ದಾರೆಂದು ಹರ್ಷ ವ್ಯಕ್ತಪಡಿಸಿದರು.
ಎಡಿಬಿ ತಂಡ ಹಾಗೂ ಅಧಿಕಾರಿಗಳು ಕೂಸಿನ ಮನೆ, ಘನ ತ್ಯಾಜ್ಯ ವಿಲೇವಾರಿ ಘಟಕ, ಡಿಜಿಟಲ್ ಗ್ರಂಥಾಲಯ ಹಾಗೂ ಗ್ರಾಪಂ ಕಚೇರಿಗೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ಅಲ್ಲಿ ನಡೆಯುತ್ತಿರುವ ಕೆಲಸ ಕಾರ್ಯಗಳ ಬಗ್ಗೆ ಖುದ್ದು ಪರಿಶೀಲನೆ ಮಾಡಿದರು ಹಾಗೂ ಸ್ವಚ್ಛ ಸಂಕೀರ್ಣ ಘಟಕ, ಕಸ ವಿಲೇವಾರಿ ಬಗ್ಗೆ ಗ್ರಾಪಂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಕೆಲಸ ಬಗ್ಗೆ ಪ್ರಶಂಶೆ ವ್ಯಕ್ತಪಡಿಸಿದರು.
ಜಿಪಂ ಸಿಇಒ ಕೆ.ಆರ್.ನಂದಿನಿ, ತಾಪಂ ಇಒ ರಾಮಲಿಂಗಯ್ಯ, ಸಿಡಿಪಿಒ ನಾರಾಯಣ್, ನರೇಗಾ ಸಹಾಯಕ ನಿರ್ದೇಶಕ ಮಂಜುನಾಥ್, ಗ್ರಾಪಂ ಅಧ್ಯಕ್ಷೆ ವೀಣಾ, ಉಪಾಧ್ಯಕ್ಷ ಮಧುಸೂದನ್, ಸದಸ್ಯರಾದ ನಂದೀಶ್‌ಗೌಡ್ರು, ನಾಗೇಶ್, ಅಪ್ಪಾಜಿಗೌಡ, ಉಮೇಶ್, ಪಿಡಿಒ ಲೀಲಾವತಿ, ಏಷ್ಯ ಅಭಿವೃದ್ಧಿ ಬ್ಯಾಂಕ್‌ನ ಪೂಜಾ, ನೀನಾ, ಮಾನಿಕಸೌದಿ ಇತರರು ಇದ್ದರು.