20.8 C
Bangalore
Sunday, December 8, 2019

ಲಾಲ್ ಬಹದ್ದೂರ್ ಶಾಸ್ತ್ರಿ ಸರ್ಕಾರಿ ಕಾಲೇಜು ಕಟ್ಟಡ ಹೊಸ ಕಟ್ಟಡಕ್ಕೆ ಪ್ರಸ್ತಾವನೆ

Latest News

ಪತಿಯನ್ನು ಕೊಲೆ ಮಾಡಿ ಶವ ಸುಟ್ಟು ಹಾಕಿದ್ದ ಪತ್ನಿಯ ಸೆರೆ

ಕೆಜಿಎಫ್: ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಪತಿಯನ್ನೇ ಕೊಲೆ ಮಾಡಿ ಶವ ಸುಟ್ಟು ಹಾಕಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಗೈದ ಪತ್ನಿ ಮತ್ತು ಪ್ರಿಯಕರನನ್ನು ಉರಿಗಾಂ...

ಅರಣ್ಯ ಸರ್ವೆಗೆ ಡ್ರೋನ್: ರಾಜ್ಯದಲ್ಲೇ ಮೊದಲ ಬಾರಿಗೆ ಹೊಸನಗರದಲ್ಲಿ ಪ್ರಾಯೋಗಿಕವಾಗಿ ಜಾರಿ

ರಾಜ್ಯದಲ್ಲಿ ಮೊದಲ ಬಾರಿಗೆ ಅರಣ್ಯ ಪ್ರದೇಶ ಗುರುತಿಸಲು ಪ್ರಾಯೋಗಿಕವಾಗಿ ಹೊಸನಗರ ತಾಲೂಕಿನಲ್ಲಿ ಅರಣ್ಯ ಇಲಾಖೆ ಡ್ರೋನ್ (ಏರಿಯಲ್) ಸರ್ವೆ ನಡೆಸಿದ್ದು, ಯಶಸ್ವಿಯಾದರೆ ಇಲಾಖೆಯ...

ಭಗವದ್ಗೀತೆ ಅಭಿಯಾನದ ಮಹಾಸಮರ್ಪಣೆ

ಚಿತ್ರದುರ್ಗ: ಸಾಮಾಜಿಕ ಸಾಮರಸ್ಯ,ರಾಷ್ಟ್ರೀಯ ಏಕತೆಗೆ ತಿಂಗಳಿಗೂ ಹೆಚ್ಚು ಕಾಲ ಜಿಲ್ಲಾದ್ಯಂತ ನಡೆದ ಭಗವದ್ಗೀತೆ ಅಭಿಯಾನದ ರಾಜ್ಯಮಟ್ಟದ ಮಹಾ ಸಮರ್ಪಣೆಗೆ ಶನಿವಾರ ಚಿತ್ರದುರ್ಗದ ಹಳೇ...

ಭಗವದ್ಗೀತೆ ಪಠಣದಿಂದ ಅಜ್ಞಾನ ದೂರ

ಚಿಕ್ಕಬಳ್ಳಾಪುರ: ಚಿಕ್ಕ ವಯಸ್ಸಿನಿಂದಲೇ ಮಕ್ಕಳನ್ನು ಒಳ್ಳೆಯ ವಾತಾವರಣದಲ್ಲಿ ಬೆಳೆಸಿದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮಹಾತ್ಮಗಾಂಧಿ ಸೇವಾಟ್ರಸ್ಟ್ ಸಂಸ್ಥಾಪಕ ಶ್ರೀ ವಿನಯ್ ಗುರೂಜಿ ಅಭಿಪ್ರಾಯಪಟ್ಟರು. ತಾಲೂಕಿನ...

ನಾಯಿಂದ್ರಹಳ್ಳಿ ವಿವಾದಿತ ರಸ್ತೆ ಸರ್ವೇ

ಚಿಂತಾಮಣಿ: ತಾಲೂಕಿನ ಪೆರಮಾಚನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಯಿಂದ್ರಹಳ್ಳಿ ರಸ್ತೆ ವಿವಾದ ರಾಜಕೀಯ ತಿರುವು ಪಡೆದುಕೊಂಡ ಹಿನ್ನೆಲೆಯಲ್ಲಿ ಶನಿವಾರ ಅಧಿಕಾರಿಗಳು ಸರ್ವೇ ನಂ.2 ವ್ಯಾಪ್ತಿಯ 5.04...

ಚಿಕ್ಕಮಗಳೂರು: ಲಾಲ್ ಬಹದ್ದೂರ್ ಶಾಸ್ತ್ರಿ ಸರ್ಕಾರಿ ಪದವಿಪೂರ್ವ ಕಾಲೇಜು ಕಟ್ಟಡ ದುರಸ್ತಿ ಮಾಡುವ ಪರಿಸ್ಥಿತಿಯಲ್ಲಿ ಇಲ್ಲದ ಕಾರಣ ಹೊಸ ಕಟ್ಟಡ ನಿರ್ವಿುಸುವ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ. ಕುಮಾರ್ ತಿಳಿಸಿದರು.

ಕಾಲೇಜಿನ ಕಟ್ಟಡ ಶಿಥಿಲಾವಸ್ಥೆಯಲ್ಲಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸ್ಥಳ ಪರಿಶೀಲಿಸಬೇಕು ಎಂದು ವಿವಿಧ ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದರಿಂದ ಮಂಗಳವಾರ ಭೇಟಿ ನೀಡಿದ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಕಾಲೇಜಿನ ಪ್ರಾಚಾರ್ಯರ ಕೊಠಡಿ ಸೇರಿ ಎಲ್ಲ ಗೋಡೆಗಳು ಹಾಗೂ ಛಾವಣಿ ಬಿರುಕುಬಿಟ್ಟಿವೆ. ಪ್ಲಾಸ್ಟಿಕ್​ಗಳನ್ನು ಸಹ ಹಾಕದೆ ಶಿಥಿಲಾವಸ್ಥೆಯಲ್ಲಿರುವ ಕೊಠಡಿಯಲ್ಲೇ ವಿದ್ಯಾರ್ಥಿಗಳು ಪಾಠ ಕೇಳುತ್ತಿದ್ದುದನ್ನು ಕಂಡ ಎಡಿಸಿ ಕುಮಾರ್, ಈ ಕೊಠಡಿ ದುರಸ್ತಿಗೆ ಮುಂದಾಗುವುದಕ್ಕಿಂತ ಹೊಸ ಕಟ್ಟಡ ಕಟ್ಟುವುದೇ ಲೇಸು ಎಂದು ಹೇಳಿದರು.

ಜಿಲ್ಲಾಧಿಕಾರಿಗಳು ಅನ್ಯ ಕಾರ್ಯ ನಿಮಿತ್ತ ಬೆಂಗಳೂರಿಗೆ ಹೋಗಿದ್ದಾರೆ. ಅವರ ಸೂಚನೆ ಮೇರೆಗೆ ಕಾಲೇಜಿಗೆ ಭೇಟಿ ನೀಡಿದ್ದೇನೆ. ಇಲ್ಲಿನ ಸ್ಥಿತಿಗತಿ ಬಗ್ಗೆ ಮಾಹಿತಿ ನೀಡುವಂತೆ ನಿರ್ದೇಶನ ನೀಡಿದ್ದಾರೆ. ಸದ್ಯದಲ್ಲೇ ಅವರು ಸಹ ಕಾಲೇಜಿಗೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ. ಸರ್ಕಾರದ ಮಟ್ಟದಲ್ಲೇ ಆಗುವಂಥ ಕೆಲಸಗಳಾದರೆ ಕೂಡಲೇ ವರದಿ ತಯಾರಿಸಿ ಎಂದು ತಿಳಿಸಿದ್ದರು. ಹಾಗಾಗಿ ವಸ್ತುಸ್ಥಿತಿ ವೀಕ್ಷಿಸಲು ಬಂದಿದ್ದೇನೆ ಎಂದು ತಿಳಿಸಿದರು.

ಬಿಎಸ್​ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ ಮಾತನಾಡಿ, ಕಟ್ಟಡ ಈಗಲೋ, ಆಗಲೋ ಬಿದ್ದು ಹೋಗುವ ಸ್ಥಿತಿಯಲ್ಲಿದೆ. ಈ ಬಗ್ಗೆ ವಿವಿಧ ಪಕ್ಷ ಹಾಗೂ ಸಂಘಟನೆಯ ಮುಖಂಡರು ನಾಲ್ಕಾರು ಬಾರಿ ಜಿಲ್ಲಾಡಳಿತದ ಗಮನಕ್ಕೆ ತರಲಾಗಿದೆ. ಮಳೆಗಾಲದಲ್ಲಿ ನೀರು ಕೊಠಡಿಗಳಿಗೆ ಬರುತ್ತದೆ. ಹಾಗಾಗಿ ಕೂಡಲೇ ಹೊಸ ಕಟ್ಟಡದ ಕಾಮಗಾರಿ ಕೈಗೆತ್ತಿಕೊಳ್ಳಬೇಕು ಎಂದು ಆಗ್ರಹಿಸಿದರು.

ಕನ್ನಡಸೇನೆ ಜಿಲ್ಲಾಧ್ಯಕ್ಷ ಪಿ.ಸಿ.ರಾಜೇಗೌಡ ಮಾತನಾಡಿ, ಕಟ್ಟಡಗಳು ಶಿಥಿಲಾವಸ್ಥೆಯಲ್ಲಿ ಇರುವುದರಿಂದಲೇ ಸರ್ಕಾರಿ ಶಾಲಾಕಾಲೇಜುಗಳಿಗೆ ವಿದ್ಯಾರ್ಥಿಗಳ ಸಂಖ್ಯೆ ಕೊರತೆ ಇರುತ್ತದೆ. ಹಾಗಾಗಿ ಸರ್ಕಾರಿ ಶಾಲೆಗಳ ಶಿಥಿಲಾವಸ್ಥೆಯ ಕಟ್ಟಡಗಳನ್ನು ದುರಸ್ತಿಪಡಿಸಬೇಕು. ಜತೆಗೆ ಒಳ್ಳೆಯ ಶಿಕ್ಷಣ ನೀಡಬೇಕು ಎಂದರು.

ಈ ಕಾಲೇಜಿಗೆ ಆರೇಳು ದಶಕಗಳ ಇತಿಹಾಸವಿದೆ. ಮಾಜಿ ಪ್ರಧಾನ ಮಂತ್ರಿಗಳ ನಾಮಕರಣ ಮಾಡಲಾಗಿದೆ. ಅಂತಹ ವ್ಯಕ್ತಿಯ ಹೆಸರು ಉಳಿಸುವುದಕ್ಕಾದರೂ ಕಾಲೇಜಿಗೆ ಮರು ಕಟ್ಟಡ ನಿರ್ಮಾಣ ಮಾಡಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಬೇಕು ಎಂದು ಹೇಳಿದರು.

Stay connected

278,744FansLike
581FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...