

ರಾಯಚೂರು ಶ್ರೀಸಂತ ಸೇವಾಲಾಲ, ಶ್ರೀ ಛತ್ರಪತಿ ಶಿವಾಜಿ ಮಹಾರಾಜ ಮತ್ತು ಶ್ರೀ ಸಂತ ಕವಿ ಸರ್ವಜ್ಞ ಜಯಂತಿಗಳ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಅಪರ ಜಿ¯್ಲÁಽಕಾರಿಗಳಾದ ಶಿವಾನಂದ ಅವರು ಹೇಳಿದರು.
ನಗರದ ನೂತನ ಜಿ¯್ಲÁಽಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ವಿವಿಧ ಜಯಂತಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿ¯್ಲÁಡಳಿತದಿಂದ ಪ್ರತಿ ವರ್ಷದಂತೆ ಈ ವರ್ಷವೂ ಅದ್ದೂರಿಯಾಗಿ ಹಾಗೂ ವಿಜೃಂಭಣೆಯಿAದ ವಿವಿಧ ಜಯಂತಿಗಳನ್ನು ಆಚರಿಸಲು ಅಗತ್ಯ ಕ್ರಮಕೈಗೊಳ್ಳಬೇಕುï ಎಂದು ಸಂಬAಽಸಿದ ಅಽಕಾರಿಗಳಿಗೆ ಸೂಚನೆ ನೀಡಿದರು.
-É.೧೫ರಂದು ನಡೆಯಲಿರುವ ಸಂತ ಸೇವಾಲಾಲï ಜಯಂತಿ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆ ೯ ಗಂಟೆಗೆ ನಗರದ ಬಸವೇಶ್ವರ ವೃತ್ತದಿಂದ ಮೆರವಣಿಗೆ ಹಾಗೂ ಬೆಳಿಗ್ಗೆ ೧೧ ಗಂಟೆಗೆ ನಗರದ ಪಂಡಿತï ಸಿದ್ದರಾಮ ಜಂಬಲದಿನ್ನಿ ರಂಗಮAದಿರದಲ್ಲಿ ವೇದಿಕೆ ಕಾರ್ಯಕ್ರಮ ಶಿಸ್ತುಬದ್ದವಾಗಿ ನಡೆಯಬೇಕು ಎಂದು ತಿಳಿಸಿದರು.
-É.೧೯ರಂದು ನಡೆಯಲಿರುವ ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಹಿನ್ನೆಲೆಯಲ್ಲಿ ಬೆಳಿಗ್ಗೆ ೯ ಗಂಟೆಗೆ ನಗರದ ಮಾವಿನಕರೆ ಹತ್ತಿರವಿರುವ ಅಂಬಾಭವಾನಿ ದೇವಸ್ಥಾನದಿಂದ ಮೆರವಣಿಗೆ ಹಾಗೂ ಬೆಳಿಗ್ಗೆ ೧೧ ಗಂಟೆಗೆ ನಗರದ ಪಂಡಿತï ಸಿದ್ದರಾಮ ಜಂಬಲದಿನ್ನಿ ರಂಗಮAದಿರದಲ್ಲಿ ವೇದಿಕೆ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಬೇಕು ಎಂದು ಸೂಚನೆ ನೀಡಿದರು.
-É.೨೦ರಂದು ಸಂತ ಕವಿ ಸರ್ವಜ್ಞ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆ ೯ ಗಂಟೆಗೆ ನಗರದ ಡಾ.ಬಿ.ïಆರï.ಅಂಬೇಡ್ಕರï ವೃತ್ತದಿಂದ ಮೆರವಣಿಗೆ ಹಾಗೂ ಬೆಳಿಗ್ಗೆ ೧೧ ಗಂಟೆಗೆ ನಗರದ ಪಂಡಿತï ಸಿದ್ದರಾಮ ಜಂಬಲದಿನ್ನಿ ರಂಗಮAದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ.
ಆಯಾ ದಿನ, ಮಹಾತ್ಮರ ಭಾವಚಿತ್ರಗಳಿಗೆ ಮಾಲಾರ್ಪಣೆ, ಪೂಜÁ ಕಾರ್ಯಕ್ರಮ ಸರಿಯಾಗಿ ನಡೆಯಬೇಕು. ಹೂದಾನಿಗಳಿಂದ ವೇದಿಕೆಯನ್ನು ಅಲಂಕಾರಗೊಳಿಸಬೇಕು. ರಂಗಮAದಿರದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಸ್ವಚ್ಛತೆ ಕಾಪಾಡಲು ಮಹಾನಗರ ಪಾಲಿಕೆಯ ಅಽಕಾರಿಗಳು ಮತ್ತು ಸಿಬ್ಬಂದಿ ಅಗತ್ಯ ಕ್ರಮವಹಿಸಬೇಕು. ಶಿಷ್ಟಾಚಾರ ಪ್ರಕಾರ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರಿಗೆ ತಲುಪಿಸಬೇಕು. ಜಯಂತಿಗಳ ಮೆರವಣಿಗೆ ವೇಳೆ ವಿವಿಧ ಕಲಾ ತಂಡಗಳು ಭಾಗಿಯಾಗಲು ಕ್ರಮವಹಿಸಬೇಕೆಂದು ಸಂಬAಽಸಿದ ಅಽಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ದತ್ತಪ್ಪ ಸಾಗೂರು, ರಾಯಚೂರು ನಗರಸಭೆಯ ಸಮುದಾಯ ಸಂಘಟನಾ ಅಽಕಾರಿ ಕೃಷ್ಣ ಕಟ್ಟಿಮನಿ ಸೇರಿದಂತೆ ವಿವಿಧ ಇಲಾಖೆಯ ಅಽಕಾರಿಗಳು ಹಾಗೂ ಸಮಾಜದ ಮುಖಂಡರು ಸಭೆಯಲ್ಲಿ ಇದ್ದರು.
-----------