More

    ಮಕ್ಕಳ ವಿದ್ಯಾಭ್ಯಾಸಕ್ಕೆ ವ್ಯವಸ್ಥೆಯಾಗಲಿ: ಎಡಿಸಿ ಡಾ.ಎಚ್.ಎಲ್.ನಾಗರಾಜು ಸೂಚನೆ

    ಮಂಡ್ಯ: ಭಿಕ್ಷಾಟನೆಯಲ್ಲಿ ತೊಡಗಿರುವವರನ್ನು ಸಮಾಜದ ಮುಖ್ಯವಾಹಿನಿಗೆ ತರುವುದರ ಜತೆಗೆ ಮೂಲ ವ್ಯವಸ್ಥೆ ಒದಗಿಸಲು ಆಧಾರ್ ಹಾಗೂ ಪಡಿತರ ಚೀಟಿ ವಿತರಿಸಬೇಕು ಎಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಸೂಚಿಸಿದರು.
    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಮಕ್ಕಳ ಸಹಾಯವಾಣಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಬಾಲ್ಯವಿವಾಹ ಹಾಗೂ ಭಿಕ್ಷಾಟನೆಯಲ್ಲಿ ಮಕ್ಕಳು ಮತು ಪಾಲಕರು ತೊಡಗಿಕೊಂಡಿರುವ ಪ್ರಕರಣಗಳ ಬಗ್ಗೆ ಹೆಚ್ಚಿನ ಗಮನಹರಿಸಿ ಪರಿಹರಿಸಬೇಕು. ವಲಸೆ ಕಾರ್ಮಿಕರು ಮುಖ್ಯವಾಗಿ ಕಬ್ಬಿನ ಕಟಾವಿಗೆ ಜಿಲ್ಲೆಗೆ ಆಗಮಿಸುತ್ತಾರೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಶಾಲೆ ಹಾಗೂ ವಸತಿ ಶಾಲೆಗಳಲ್ಲಿ ದಾಖಲು ಮಾಡಲು ಸ್ವಯಂ ಸೇವಾ ಸಂಸ್ಥೆಗಳು ಕೈ ಜೋಡಿಸಬೇಕು ಎಂದರು.
    ಭಿಕ್ಷಾಟನೆಯಲ್ಲಿ ತೊಡಗುವವರು ಹಾಗೂ ವಲಸೆ ಕಾರ್ಮಿಕರಿಗೆ ವಸತಿ ಮತ್ತು ಆಹಾರದ ಸಮಸ್ಯೆ ಪರಿಹಾರವಾದರೆ ಮಕ್ಕಳಿಗೆ ಸಂಬಂಧಿಸಿದ ಬಹಳಷ್ಟು ಸಮಸ್ಯೆಗಳು ಬಗೆಹರಿಯುತ್ತದೆ. ಈ ಹಿನ್ನಲೆಯಲ್ಲಿ ಅವರಿಗೆ ನಿವೇಶನ, ಮನೆ, ಪಡಿತರ ಚೀಟಿ ಒದಗಿಸಬೇಕು. ಬಾಲ್ಯ ವಿವಾಹ ತಡೆಗಟ್ಟಲು ಎಲ್ಲ ಇಲಾಖೆಗಳ ಸಹಕಾರ ಮುಖ್ಯ. ಗ್ರಾಮ ಮಟ್ಟದಲ್ಲಿ ನಿಯೋಜನೆಯಾಗಿರುವ ಬಾಲ್ಯ ವಿವಾಹ ತಡೆಗಟ್ಟುವ ಅಧಿಕಾರಿಗಳು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಬೇಕು. ಗ್ರಾಮ ಮಟ್ಟದಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಸಹಕರಿಸಬೇಕು ಎಂದ ಅವರು, ಮಂಡ್ಯ ನಗರದ 13 ವರ್ಷದ ಬಾಲಕ ಶ್ರವಣದೋಷದಿಂದ ಬಳಲುತ್ತಿದ್ದಾನೆ. ಆತನ ಚಿಕಿತ್ಸೆಗೆ ಅಂದಾಜು 5 ಲಕ್ಷ ರೂ ಬೇಕಿರುತ್ತದೆ. ಚಿಕಿತ್ಸೆಗೆ ಮಂಡ್ಯ ನಗರಸಭೆಯ ವಿಕಲಚೇತನರ ಅನುದಾನ ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.
    ಮಕ್ಕಳ ಸಹಾಯವಾಣಿಯ ನೋಡಲ್ ಸಂಸ್ಥೆಯ ನಿರ್ದೇಶಕ ವೆಂಕಟೇಶ್, ಜಿಪಂ ಉಪಕಾರ್ಯದರ್ಶಿ ಸರಸ್ವತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಎಸ್.ರಾಜಮೂರ್ತಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts