20.4 C
Bengaluru
Sunday, January 19, 2020

ಶ್ರೇಷ್ಠ ಕೃತಿಗಳಲ್ಲಿ ರಾಮಾಯಣ ದರ್ಶನಂ ಒಂದು

Latest News

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಆಯುಷ್ಮಾನ್ ಭಾರತಕ್ಕೆ ಅನಾರೋಗ್ಯ

ಶಂಕರ ಶರ್ಮಾ ಕುಮಟಾ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿನ ಆಯುಷ್ಮಾನ್ ಭಾರತ ಆರೋಗ್ಯ ಸೇವಾ ಕೇಂದ್ರವು ತಾಂತ್ರಿಕ ಸಮಸ್ಯೆಯಿಂದ ಬಳಲುತ್ತಿದ್ದು,...

ಹಾಸನ: ವಿಶ್ವದ ಶ್ರೇಷ್ಠ ಕೃತಿಗಳಲ್ಲಿ ರಾಷ್ಟ್ರಕವಿ ಕುವೆಂಪು ಅವರ ರಾಮಾಯಣ ದರ್ಶನಂ ಒಂದು ಎಂದು ಸಾಹಿತಿ ಸುಧೀರ್‌ಕುಮಾರ್ ಮಾರೋಳ್ಳಿ ಅಭಿಪ್ರಾಯಪಟ್ಟರು.
ನಗರದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಶುಕ್ರವಾರ ರಾತ್ರಿ ಏರ್ಪಡಿಸಿದ್ದ ಗುರು ತೋರಿದ ದಾರಿ ತಿಂಗಳ ಮಾಮನ ತೇರು 77ನೇ ಹುಣ್ಣಿಮೆ ಕಾರ್ಯಕ್ರಮದಲ್ಲಿ ‘ಕುವೆಂಪು ಅವರ ಮಹಾದರ್ಶನ’ ವಿಷಯ ಕುರಿತು ಮಾತನಾಡಿದರು.
ರಾಮಾಯಣ ದರ್ಶನಂ ಮಹಾಕಾವ್ಯದಲ್ಲಿ ಬರುವ ಯಾವ ಪಾತ್ರವನ್ನು ಕುವೆಂಪು ಕನಿಷ್ಠ ಅಥವಾ ಗರಿಷ್ಠ ಎಂಬಂತೆ ಚಿತ್ರಿಸಿಲ್ಲ. ವಾಲ್ಮೀಕಿ ರಾಮಾಯಣಕ್ಕಿಂತ ರಾಮಾಯಣ ದರ್ಶನಂ ಭಿನ್ನವಾಗಿದ್ದು, ಕುವೆಂಪು ಇಲ್ಲಿ ಯಾರನ್ನು ದೂರಿಲ್ಲ. ರಾವಣನನ್ನು ಕೊಂದ ರಾಮ ಶ್ರೇಷ್ಠನಲ್ಲ ಎಂದಿದ್ದಾರೆ. ಸೀತೆ ಅಗ್ನಿ ಪ್ರವೇಶ ಮಾಡುವಾಗ ತಾನು ಅಗ್ನಿ ಪ್ರವೇಶಕ್ಕೆ ಮುಂದಾದನೆಂದು ಹೇಳುವುದು ರಾಮಾಯಣಕ್ಕೆ ಗಟ್ಟಿತನ ತಂದುಕೊಟ್ಟಿದೆ ಎಂದರು.
ಕುವೆಂಪು ಅವರ ಕೃತಿಗಳ ಶ್ರೇಷ್ಠತೆ ಎಷ್ಟರ ಮಟ್ಟಿಗಿದೆ ಎಂದರೆ ನಾನು ನಮ್ಮ ಸಾಹಿತ್ಯವನ್ನು ಮೆಲುಕು ಹಾಕುವಾಗ ಪಂಪನಿಂದ ಕುವೆಂಪುವರೆಗೆ ಎನ್ನುತ್ತೇವೆ, ಇದು ಕುವೆಂಪು ಸಾಹಿತ್ಯದ ಹಿರಿಮೆ ಎಂದರು.
ಕುವೆಂಪು ಅವರ ಕೃತಿಗಳಲ್ಲಿ ಬದುಕಿನ ಸಾರ ಅಡಗಿದ್ದು, ನಮ್ಮೆಲ್ಲರ ಆತ್ಮಸಾಕ್ಷಿ ಜಾಗೃತಿಗೊಳಿಸುವ ಸಂದೇಶವನ್ನು ಅವರ ಬರವಣಿಗೆ ನೀಡುತ್ತದೆ. ಕುವೆಂಪು ರಚಿತ ಜಲಗಾರ ನಾಟಕದಲ್ಲಿ ಬರುವ ಶಿವನ ಪಾತ್ರ ಬಸವಣ್ಣರ ಶ್ರೇಷ್ಠತೆಯನ್ನು ಕಣ್ಣ ಮುಂದೆ ತರುತ್ತದೆ. ಅದು ಅವರ ಸಾಹಿತ್ಯದ ವಿಶೇಷ ಎಂದು ಅಭಿಮತ ವ್ಯಕ್ತಪಡಿಸಿದರು.
ಇಂತಹ ಶ್ರೇಷ್ಠ ಸಾಹಿತ್ಯವನ್ನು ಓದಿದ ನಾವು ಅವರ ಸಂದೇಶದಂತೆ ವಿಶ್ವ ಮಾನವರಾಗಬೇಕು. ನಮ್ಮಲ್ಲಿನ ಕೆಡುಕು ದೂರಾಗಿ ಬುದ್ಧ, ಬಸವ, ಅಂಬೇಡ್ಕರ್ ಅವರನ್ನು ಒಂದು ವರ್ಗಕ್ಕೆ ಸೀಮಿಗೊಳಿಸಿರುವ ಸಂಕುಚಿತ ಭಾವನೆ ಬಿಡಬೇಕು ಎಂದು ಸಲಹೆ ನೀಡಿದರು.
ಆದಿಚುಂಚನಗಿರಿ ಹಾಸನ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಮಾತನಾಡಿ, ಜೀವನ ಯಾರಿಗೂ ಶಾಶ್ವತವಲ್ಲ. ಮೂರು ದಿನದ ಬದುಕಿನಲ್ಲಿ ಅರಿವಿನಿಂದ ಗುರುವನ್ನು ಕಾಣಬೇಕು. ತಾಯಿ, ತಂದೆ, ಗುರು ಹಿರಿಯರಿಗೆ ವಿಧೇಯರಾಗಿ ಬಾಳ್ವೆ ನಡೆಸಬೇಕು ಎಂದರು.
ಕಬ್ಬಳಿ ಮಠದ ಶ್ರೀ ಶಿವಪುತ್ರನಾಥ ಸ್ವಾಮೀಜಿ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಜಿ.ಎಲ್. ಮುದ್ದೇಗೌಡ, ಶೃಂಗೇರಿ ಆದಿಚುಂಚನಗಿರಿ ಬಿ.ಇಡಿ ಕಾಲೇಜು ಪ್ರಾಂಶುಪಾಲ ನಾಗೇಶ್, ಆದಿಚುಂಚನಗಿರಿ ಹಾಸನ ಮಠದ ವ್ಯವಸ್ಥಾಪಕ ಚಂದ್ರಶೇಖರ್, ಪ್ರಾಂಶುಪಾಲ ಕೃಷ್ಣ, ಸಂಸ್ಕೃತ ಉಪನ್ಯಾಸಕ ಎಚ್.ಕೆ ಲಕ್ಷ್ಮೀ ನಾರಾಯಣ ಹಾಜರಿದ್ದರು. ಭಾಗ್ಯಲಕ್ಷ್ಮಿಪ್ರಾರ್ಥನೆ ನೆರವೇರಿಸಿದರು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...