More

  ಹಾರಂಗಿ ರಸ್ತೆಗೆ ಹಂಪ್ ಅಳವಡಿಸಿ

  ಕುಶಾಲನಗರ : ಕುಶಾಲನಗರ ಹಾರಂಗಿ ರಸ್ತೆಯಲ್ಲಿ ವಾಹನಗಳ ವೇಗ ನಿಯಂತ್ರಣಕ್ಕಾಗಿ ಹಂಪ್ ಅಳವಡಿಸುವಂತೆ ಆಗ್ರಹಿಸಿ ಕೂಡುಮಂಗಳೂರು ಗ್ರಾ.ಪಂ. ಸದಸ್ಯ ಕೆ.ಬಿ.ಶಂಶುದ್ಧೀನ್ ಬುಧವಾರ ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
  ಕುಶಾಲನಗರ ಹಾರಂಗಿ ರಸ್ತೆಯಲ್ಲಿ ಅಪಘಾತಗಳು ಹೆಚ್ಚೆಚ್ಚು ಸಂಭವಿಸುತ್ತಿವೆ. ಮೂಕಾಂಬಿಕಾ ಕಾಲೇಜು, ಸುಂದರನಗರ ಪ್ರಥಮ ದರ್ಜೆ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಹಾಗೂ ಕಾರ್ಮಿಕರು ರಸ್ತೆಯಲ್ಲಿ ಸಂಚರಿಸುತ್ತಾರೆ. ವಾಹನಗಳ ಅತಿವೇಗದಿಂದ ಸಾರ್ವಜನಿಕರು ರಸ್ತೆಯಲ್ಲಿ ಭಯದಿಂದ ಸಂಚರಿಸುವಂತಾಗಿದೆ.

  ಕುಶಾಲನಗರ ಹಾರಂಗಿ ರಸ್ತೆಯು ಹೊಸದಾಗಿ ಡಾಂಬರೀಕರಣ ಹಾಗೂ ರಸ್ತೆ ವಿಸ್ತರಣೆಯಾಗಿರುವುದರಿಂದ ವಾಹನಗಳು ಅತಿವೇಗವಾಗಿ ಸಂಚರಿಸುತ್ತಿರುತ್ತವೆ. 15 ದಿನಗಳ ಹಿಂದೆ 22 ವರ್ಷದ ಯುವಕ ಅಪಘಾತದಿಂದ ಸಾವಿಗೀಡಾಗಿದ್ದಾನೆ. ರಸ್ತೆಉಬ್ಬು ಇಲ್ಲದ ಕಾರಣ ವಾಹನಗಳ ಅತಿವೇಗ ಹಾಗೂ ಅಜಾಗರೂಕತೆಯಿಂದ ಆಗಾಗ್ಗೆ ಅಪಘಾತಗಳು ಸಂಭವಿಸುತ್ತಿವೆ. ಸಂಬಂಧಪಟ್ಟ ಪೊಲೀಸ್ ಇಲಾಖೆಗೆ ಪಂಚಾಯಿತಿಯಿಂದ ಪತ್ರ ವ್ಯವಹಾರ ನಡೆಸಲಾಗಿದ್ದು, ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಕುಶಾಲನಗರ ಹಾರಂಗಿ ರಸ್ತೆಯಲ್ಲಿ ರಸ್ತೆ ಉಬ್ಬು ಅಳವಡಿಸಿ ಅಪಘಾತಗಳಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿದ್ದಾರೆ.

  See also  ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts