ಅಡ್ಡಂಡ ಕಾರ್ಯಪ್ಪಗೆ ಜೀವ ಬೆದರಿಕೆ; ರಕ್ಷಣೆ ಕೋರಿ ಠಾಣೆ ಮೆಟ್ಟಿಲೇರಿದ ರಂಗಾಯಣ ನಿರ್ದೇಶಕ

ಅಡ್ಡಂಡ ಕಾರ್ಯಪ್ಪ
Published on

ಮೈಸೂರು: ‘ಟಿಪ್ಪು ನಿಜಕನಸುಗಳು’ ಎಂಬ ನಾಟಕವನ್ನು ರಚಿಸಿ, ನಿರ್ದೇಶನ ಮಾಡಿದ್ದ ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರಿಗೆ ಕೊಲೆ ಬೆದರಿಕೆ ಬಂದಿದೆ. ಈ ಬಗ್ಗೆ ಅವರು ಜಯಲಕ್ಷ್ಮಿಪುರಂ ಪೊಲೀಸರಿಗೆ ದೂರು ನೀಡಿದ್ದಾರೆ. ಜತೆಗೆ ಜೀವ ಬೆದರಿಕೆ ಇದ್ದು ಪೊಲೀಸ್ ರಕ್ಷಣೆ ನೀಡಬೇಕೆಂದು ಕೋರಿದ್ದಾರೆ.

ರಂಗಾಯಣದಿಂದ ‘ಟಿಪ್ಪು ನಿಜಕನಸುಗಳು’ ಎಂಬ ನಾಟಕವನ್ನು ರಚಿಸಿ, ನಿರ್ದೇಶನ ಮಾಡಿ ಇದೀಗ ಪ್ರದರ್ಶನಗೊಳ್ಳುತ್ತಿದೆ. ಈ ಪ್ರದರ್ಶನ ಆರಂಭವಾದಂದಿನಿಂದ ನನ್ನ ವಿರುದ್ಧ ಕೆಲವರು ಪ್ರತಿಭಟನೆ, ಜಿಲ್ಲಾಧಿಕಾರಿಗಳಿಗೆ ದೂರು, ಇತ್ಯಾದಿ ಮಾಡುತ್ತಾ ಬಂದಿದ್ದಾರೆ.

ಮೈಸೂರಿನ ಮಹೇಶ್‌ ಚಂದ್ರಗುರು ಎಂಬುವವರು ವೀಡಿಯೋ ಒಂದರಲ್ಲಿ ನನ್ನನ್ನು ‘ಮನೆಹಾಳ’ ಕಾರ್ಯಪ್ಪ ಇತ್ಯಾದಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಸಾರ ಮಾಡುತ್ತಿದ್ದಾರೆ ಎಂದು ಅಡ್ಡಂಡ ಕಾರ್ಯಪ್ಪಹೇಳಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net