ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ( H D Kumaraswamy ) , ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಎಚ್ಡಿಕೆ ಆಪ್ತ ಸುರೇಶ್ ಬಾಬು ವಿರುದ್ಧ ಎಡಿಜಿಪಿ ಚಂದ್ರಶೇಖರ್ ( ADGP Chandrashekar ) ದೂರು ದಾಖಲಿಸಿದ್ದು, ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎನ್ ಸಿಆರ್ ದಾಖಲಾಗಿದೆ.
ಎಡಿಜಿಪಿ ಚಂದ್ರಶೇಖರ್ ಅವರು ಇಂದು ಸಂಜಯನಗರ ಪೊಲೀಸ್ ಠಾಣೆಗೆ ತೆರಳಿ ದೂರು ಸಲ್ಲಿಸಿದ್ದಾರೆ. ಐಎಸ್ಡಿ ಮತ್ತು ಗಣಿಗಾರಿಕೆಗೆ ಸಂಬಂಧಿಸಿದ ಎಸ್ಐಟಿಯಲ್ಲಿ ಎಡಿಜಿಪಿಯಾಗಿ ಕೆಲಸ ಮಾಡುತ್ತಿರುತ್ತೇನೆ. ಎಚ್.ಡಿ. ಕುಮಾರಸ್ವಾಮಿ ಮೇಲೆ ಮೊಕದಮ್ಮೆ ಸಂಖ್ಯೆ 16/2014ರಲ್ಲಿ ತನಿಖೆ ಕೈಗೊಂಡಿದ್ದು, ಇವರ ವಿರುದ್ಧ ಹೆಚ್ಚುವರಿ ಸಾಕ್ಷ್ಯಾಧಾರಗಳು ದೊರೆತಿದ್ದರಿಂದ, ಕಾನೂನು ಕ್ರಮ ಕೈಗೊಳ್ಳಲು ಅನುಮತಿಗಾಗಿ ರಾಜ್ಯಪಾಲರಿಗೆ ಕೋರಲಾಗಿತ್ತು.
ತನಿಖೆಗೆ ಅನುಮತಿ ಕೋರಿದ ಬೆನ್ನಲ್ಲೇ ಎಚ್.ಡಿ. ಕುಮಾರಸ್ವಾಮಿ ಅವರು ಪತ್ರಿಕಾಗೋಷ್ಠಿಯನ್ನು ನೆಡೆಸಿ ನನ್ನ ಬಗ್ಗೆ ಸುಳ್ಳು ಮತ್ತು ದುರುದ್ದೇಶ ಪೂರಿತ ಆರೋಪಗಳನ್ನು ಮಾಡಿ, ಬೆದರಿಕೆಯನ್ನು ಹಾಕಿದ್ದಾರೆ ಎಂದು ಚಂದ್ರಶೇಖರ್ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ನನ್ನನ್ನು ಕರ್ನಾಟಕ ರಾಜ್ಯ ಕೇಡರ್ನಿಂದ ಬೇರೆ ರಾಜ್ಯಕ್ಕೆ ವರ್ಗಾಯಿಸುವುದಾಗಿ ಮೌಖಿಕವಾಗಿ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ನನ್ನ ಕುಟುಂಬದವರ ವಿರುದ್ಧವೂ ಸುಳ್ಳು ಆರೋಪಗಳನ್ನು ಮಾಡಿ, ತೊಂದರೆ ಕೊಡುವುದಾಗಿ ಬೆದರಿಕೆ ಹಾಕಿದ್ದಾರೆ. ನಾನು ಬೌರಿಂಗ್ ಆಸ್ಪತ್ರೆಯಿಂದ ಸುಳ್ಳು ಮೆಡಿಕಲ್ ದಾಖಲೆಗಳನ್ನು ಪಡೆದು, ಕರ್ನಾಟಕ ಕೇಡರ್ನಲ್ಲೇ ಮುಂದುವರೆಯುತ್ತಿರುವುದಾಗಿ ಸುಳ್ಳು ಆರೋಪ ಮಾಡಿದ್ದಾರೆ. ಅಲ್ಲದೆ, ನಾನು ಲಂಚ ಪಡೆದಿರುವುದಾಗಿ ಸುಳ್ಳು ಆರೋಪ ಮಾಡಿದ್ದಾರೆ.
ಇದಿಷ್ಟೇ ಅಲ್ಲದೆ, ಸೆ.29 ರಂದು ಎಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಪತ್ರಿಕಾಗೋಷ್ಠಿ ನಡೆಸಿ, ನನ್ನ ವಿರುದ್ಧ ಸುಳ್ಳು ಮತ್ತು ದುರುದ್ದೇಶಪೂರಿತ ಆರೋಪಗಳನ್ನು ಮಾಡಿದ್ದಾರೆ. ಇದಾದ ಬಳಿಕ ಎಚ್ಡಿಕೆ ಆಪ್ತ ಸುರೇಶ್ ಬಾಬು ಕೂಡ ನನ್ನ ವಿರುದ್ಧ ಇಲ್ಲಸಲ್ಲದ ಸುಳ್ಳು ಆರೋಪಗಳನ್ನು ಮಾಡಿ, ನನ್ನ ವಿರುದ್ಧ ಮುಖ್ಯ ಕಾರ್ಯದರ್ಶಿಯವರಿಗೆ ಕ್ರಮ ಕೈಗೊಳ್ಳಲು ಪತ್ರ ಬರೆದು, ಆ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ, ಬೆದರಿಕೆ ಹಾಕಿದ್ದಾರೆ. ಹೀಗಾಗಿ ಈ ಮೂವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಚಂದ್ರಶೇಖರ್ ಅವರು ತಮ್ಮ ದೂರಿನಲ್ಲಿ ಮನವಿ ಮಾಡಿದ್ದಾರೆ.
ಚಂದ್ರಶೇಖರ್ ನೀಡಿರುವ ದೂರನ್ನು ಆಧರಿಸಿ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಎಚ್ಡಿಕೆ ಆಪ್ತ ಸುರೇಶ್ ಬಾಬು ವಿರುದ್ಧ ಎನ್ಸಿಆರ್ ದಾಖಲಿಸಲಾಗಿದೆ.
ಈ ಫೋಟೋದಲ್ಲಿರುವ ಬಾಲಕ ಇಂದು ಭಾರತೀಯ ಚಿತ್ರರಂಗದ ಸೂಪರ್ಸ್ಟಾರ್! ಸಾಧ್ಯವಾದ್ರೆ ಗುರುತಿಸಿ| Star Hero
ನಾನು ಎಲ್ಲದಕ್ಕೂ ರೆಡಿ… ರೀಲ್ಸ್ನಿಂದಲೇ ಸಿನಿಮಾ ಅವಕಾಶ ಗಿಟ್ಟಿಸಿದ ಮಲಯಾಳಿ ಯುವತಿಯ ಶಾಕಿಂಗ್ ಹೇಳಿಕೆ! Aradhya Devi