More

    ಸಾಕ್ಷಿಗಳ ಮುಂದೆ ಆದಿತ್ಯರಾವ್ ಪರೇಡ್‌ಗೆ ಸಿದ್ಧತೆ

    ಮಂಗಳೂರು: ಜ.20ರಂದು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದ ಆರೋಪಿ ಆದಿತ್ಯ ರಾವ್ ಗುರುತು ದೃಢೀಕರಣಕ್ಕಾಗಿ ಸಾಕ್ಷಿಗಳ ಮುಂದೆ ಪರೇಡ್ ನಡೆಸಲು ಪೊಲೀಸರು ಸಿದ್ಧತೆ ಆರಂಭಿಸಿದ್ದಾರೆ.
    ಪ್ರಕರಣದ ತನಿಖೆ ನಡೆಸುತ್ತಿರುವ ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಕೆ.ಯು.ಬೆಳ್ಳಿಯಪ್ಪ ನೇತೃತ್ವದ ತಂಡ 50ಕ್ಕೂ ಹೆಚ್ಚು ಸಾಕ್ಷಿಗಳ ಹೇಳಿಕೆ ದಾಖಲಿಸಿಕೊಂಡಿದೆ. ಈ ಪೈಕಿ ಆರೋಪಿಯು ಬಾಂಬ್ ಇರಿಸಿ, ಪರಾರಿಯಾದ ದಿನ ಆತನನ್ನು ಪ್ರತ್ಯಕ್ಷವಾಗಿ ನೋಡಿದ್ದ 15 ಮಂದಿ ಎದುರು ಪರೇಡ್ ನಡೆಸಲು ನಿರ್ಧರಿಸಲಾಗಿದೆ. ಗುರುತು ಪತ್ತೆ ಪರೇಡ್ ನಡೆಸಲು ಕ್ರಮ ಕೈಗೊಳ್ಳುವಂತೆ ತನಿಖಾಧಿಕಾರಿಯು ಮಂಗಳೂರು ತಹಸೀಲ್ದಾರ್ ಅವರಿಗೆ ಪತ್ರ ಬರೆದಿದ್ದಾರೆ.

    ನ್ಯಾಯಾಧೀಶರ ಎದುರು ಹೇಳಿಕೆ: ಘಟನೆ ನಡೆದ ದಿನ ಆದಿತ್ಯ ರಾವ್ ವಿಮಾನ ನಿಲ್ದಾಣಕ್ಕೆ ಬಂದು ಬಾಂಬ್ ಇರಿಸಿ, ವಾಪಸ್ ಹೋದ ಸಂದರ್ಭ ಆತನನ್ನು ಕಂಡಿದ್ದ 15 ಮಂದಿಯನ್ನೂ ನ್ಯಾಯಾಧೀಶರ ಎದುರು ಹಾಜರುಪಡಿಸಿ ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಸೆಕ್ಷನ್ 164ರ ಅಡಿಯಲ್ಲಿ ಹೇಳಿಕೆ ದಾಖಲು ಮಾಡಿಸಲು ತನಿಖಾಧಿಕಾರಿಗಳು ನಿರ್ಧರಿಸಿದ್ದಾರೆ. ಈ ಸಂಬಂಧ ತನಿಖಾ ತಂಡ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ.

    ವರದಿ ನಿರೀಕ್ಷೆಯಲ್ಲಿ: ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಬಾಂಬ್ ಅನ್ನು ಸ್ಫೋಟಿಸಿ ನಾಶಪಡಿಸಿದ್ದ ಸ್ಥಳದಿಂದ ಸಂಗ್ರಹಿಸಿದ್ದ ಮಾದರಿಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ(ಎಫ್‌ಎಸ್‌ಎಲ್) ಕಳುಹಿಸಲಾಗಿದೆ. ಇನ್ನೂ ವರದಿ ಪೊಲೀಸರ ಕೈಸೇರಿಲ್ಲ. ಎಫ್‌ಎಸ್‌ಎಲ್ ವರದಿ ಲಭ್ಯವಾದ ಬಳಿಕ ಆದಿತ್ಯರಾವ್ ವಿರುದ್ಧ ಆರೋಪಪಟ್ಟಿ ಸಲ್ಲಿಸಲು ಪೊಲೀಸರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts