ಯುಗಾದಿ ಹಬ್ಬದಂದು ಹೆಣ್ಣು ಮಗುವಿನ ತಾಯಿಯಾದ ನಟಿ ಅದಿತಿ ಪ್ರಭುದೇವ

Aditi Prabhudeva
Published on

ಬೆಂಗಳೂರು: ಸ್ಯಾಂಡಲ್​ವುಡ್​ ಚೆಲುವೆ ಅದಿತಿ ಪ್ರಭುದೇವ ಯುಗಾದಿ ಹಬ್ಬದಂದು ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ಧಾರೆ. ಏಪ್ರಿಲ್​ 04ರಂದು ಅವರು ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿರುವುದಾಗಿ ಸಾಮಾಜಿಕ ಜಾಲತಾಣದ ಮೂಲಕ ತಿಳಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ನಟಿ ಅದಿತಿ ನಮ್ಮನೆ ಮಹಾಲಕ್ಷ್ಮಿ, ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ. ಏಪ್ರಿಲ್​ 04ರಂದು ನಟಿ ಅದಿತಿ ಪ್ರಭುದೇವ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇದೀಗ ಯುಗಾದಿ ಹಬ್ಬದಂದು ಮಗಳ ಆಗಮನದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅದಿತಿ ಮಾಹಿತಿ ನೀಡಿದ್ದಾರೆ. 

ಇತ್ತ ಪತ್ನಿ ಅದಿತಿ ಪೋಸ್ಟ್​ಗೆ ಕಮೆಂಟ್​ ಮಾಡಿರುವ ಪತಿ ಯಶಸ್​​, ಜೀವದ ಗೆಳತಿ ಅದಿತಿ, ನಿನ್ನ ಹಾಗೆಯೇ ನಮ್ಮ ಮಗಳು ಎಂದು ಕಾಮೆಂಟ್‌ ಮಾಡಿದ್ದಾರೆ. ಇದೀಗ ನಟಿಗೆ ಅಭಿಮಾನಿಗಳು, ಸಿನಿಮಾ ತಾರೆಯರು ಸಾಮಾಜಿಕ ಜಾಲತಾಣಗಳಲ್ಲಿ ಶುಭಕೋರುತ್ತಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಬೇಬಿ ಬಂಪ್ ಫೋಟೋಶೂಟ್​ ಮಾಡಿಸಿದ್ದ ನಟಿ ಕೊನೆಗೂ ನನ್ನ ಪುಟ್ಟ ಆಸೆ ನೆರವೇರಿದೆ ಎಂದು ಬರೆದುಕೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net