More

    ಡಿಕೆಶಿ ವಿರುದ್ಧದ ವಿಚಾರಣೆ ಮುಂದೂಡಿಕೆ; ಸಿಬಿಐ ಅನುಮತಿ ಹಿಂಪಡೆದ ಪ್ರಕರಣ

    ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ಸರ್ಕಾರ ನೀಡಿದ್ದ ಅನುಮತಿ ಹಿಂಪಡೆದಿದ್ದ ಕ್ರಮ ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್  29ಕ್ಕೆ ಮುಂದೂಡಿದೆ.

    ಡಿಕೆಶಿ ಪರ ಹಿರಿಯ ವಕೀಲ ಡಾ. ಅಭಿಷೇಕ್ ಮನು ಸಿಂಘ್ವಿ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲಾಗಿದೆ ಎಂದು ನ್ಯಾಯಮೂರ್ತಿಗಳಾದ ಕೆ.ಸೋಮಶೇಖರ್ ಮತ್ತು ಉಮೇಶ್ ಎಂ. ಅಡಿಗ ನೇತೃತ್ವದ ವಿಭಾಗೀಯ ಪೀಠಕ್ಕೆ ತಿಳಿಸಿದರು.

    ರಾಜ್ಯ ಸರ್ಕಾರದ ಪರವಾಗಿ ಹಾಜರಾಗಿದ್ದ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದರು. ಈ ಮಧ್ಯೆ, ಲೋಕಾಯುಕ್ತ ಎಡಿಜಿಪಿ ಮಧ್ಯಪ್ರವೇಶಕ್ಕೆ ಕೋರಿರುವ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿದ್ದು, ಲೋಕಾಯುಕ್ತ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ವೆಂಕಟೇಶ್ ಅರಬಟ್ಟಿ ಅವರಿಗೆ ನೋಟಿಸ್ ಪಡೆಯಲು ಸೂಚಿಸಲಾಗಿದೆ.

    ಯತ್ನಾಳ್ ಪರ ವಕೀಲ ವೆಂಕಟೇಶ್ ದಳವಾಯಿ ಅವರಿಗೆ ಕಚೇರಿ ಆಕ್ಷೇಪಣೆಗಳನ್ನು ಸರಿಪಡಿಸಲು ನ್ಯಾಯಾಲಯ ಸೂಚಿಸಿತು. ಆಕ್ಷೇಪಣೆ, ಪ್ರತ್ಯುತ್ತರ ಸಲ್ಲಿಸಲು ಕಾಲಾವಕಾಶ ನೀಡಿ, ಅಂತಿಮವಾಗಿ ವಿಚಾರಣೆಯನ್ನು ಫೆ.29ಕ್ಕೆ ಮುಂದೂಡಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts