ದೆಹಲಿ ಮದ್ಯ ಹಗರಣ: ಕವಿತಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

kavitha
Published on

ನವದೆಹಲಿ: ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಬಿಆರ್‌ಎಸ್ ಎಂಎಲ್‌ಸಿ ಕವಿತಾ ಅವರಿಗೆ ತಿಹಾರ್ ಜೈಲಿನಿಂದ ಹೊರಬರುವ ದಾರಿ ಕಾಣುತ್ತಿಲ್ಲ. ಈಗಾಗಲೇ ಹಲವು ಬಾರಿ ಜಾಮೀನು ಅರ್ಜಿಯನ್ನು ವಜಾಗೊಳಿಸಿರುವ ರೂಸ್ ಅವೆನ್ಯೂ ನ್ಯಾಯಾಲಯ, ಡೀಫಾಲ್ಟ್ ಜಾಮೀನು ಅರ್ಜಿಯ ವಿಚಾರಣೆಯನ್ನು ಬುಧವಾರ(ಆ.7)ಕ್ಕೆ ಮುಂದೂಡಲಾಗಿದೆ.

ನ್ಯಾಯಾಧೀಶೆ ಕಾವೇರಿ ಭವೇಜಾ ಅರ್ಜಿಯ ವಿಚಾರಣೆ ನಡೆಸಿದ್ದು, ಹಿರಿಯವಕೀಲರು ಬಾರದ ಕಾರಣ ಪ್ರಕರಣವನ್ನು ಮುಂದೂಡುವಂತೆ ಕವಿತಾ ಪರ ವಕೀಲರು ನ್ಯಾಯಾಲಯವನ್ನು ಕೋರಿದ್ದರಿಂದ ವಿಚಾರಣೆಯನ್ನು ಮುಂದೂಡಿದರು.

ಕವಿತಾರನ್ನು 2024ರ ಮಾರ್ಚ್ 15 ರಂದು ಇಡಿ ಮತ್ತು ನಂತರ ಏಪ್ರಿಲ್ 11 ರಂದು ಸಿಬಿಐ ಬಂಧಿಸಿತ್ತು. ಇದಕ್ಕೂ ಮುನ್ನ ಇಡಿ ಮತ್ತು ಸಿಬಿಐ ಸಲ್ಲಿಸಿದ್ದ ಎರಡೂ ಪ್ರಕರಣಗಳಲ್ಲಿ ಸಾಮಾನ್ಯ ಜಾಮೀನು ನೀಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣಾ ನ್ಯಾಯಾಲಯ ವಜಾಗೊಳಿಸಿತ್ತು. ಈ ಆದೇಶವನ್ನು ದೆಹಲಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದಾಗ ನಿರಾಶೆಯಾಯಿತು. ಈ ಹಿನ್ನೆಲೆಯಲ್ಲಿ ಮತ್ತೆ ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net