17.8 C
Bengaluru
Wednesday, January 22, 2020

ಕಾಣೆಯಾದ ಎಂಟು ಪರ್ವತಾರೋಹಿಗಳಲ್ಲಿ ಐವರ ಮೃತದೇಹ ಪತ್ತೆ: ಮೃತದೇಹ ತರಲು ಇಂದು ತೆರಳಲಿರುವ ರಕ್ಷಣಾ ತಂಡ

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ನವದೆಹಲಿ: ಉತ್ತರಾಖಂಡ್​ನ ನಂದಾ ದೇವಿ ಪರ್ವತದಲ್ಲಿ ಕಾಣೆಯಾಗಿದ್ದ ಪರ್ವತಾರೋಹಿಗಳಲ್ಲಿ ಐವರ ಮೃತ ದೇಹಗಳನ್ನು ಐಎಎಫ್​ ಹೆಲಿಕಾಪ್ಟರ್​ ಪತ್ತೆ ಹಚ್ಚಿದ್ದು, ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಸಹಾಯದಿಂದ ಮೃತದೇಹಗಳನ್ನು ಮರಳಿ ತರಲು ಪ್ರಯತ್ನಿಸುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಐಎಎಫ್ ಹೆಲಿಕಾಪ್ಟರ್​ನಲ್ಲಿದ್ದ ರಕ್ಷಣಾ ತಂಡ ಕಾಣೆಯಾದ ಎಂಟು ಪರ್ವತಾರೋಹಿಗಳಲ್ಲಿ ಐದು ಮಂದಿಯ ದೇಹಗಳನ್ನು ನಂದಾ ದೇವಿ ಶಿಖರದ 5,000 ಮೀಟರ್ ಎತ್ತರದಲ್ಲಿ ಕಂಡು ಹಿಡಿದಿದ್ದು, ಕೆಟ್ಟ ವಾತಾವರಣದಿಂದಾಗಿ ರಕ್ಷಣಾ ತಂಡಕ್ಕೆ ಮೃತ ದೇಹಗಳನ್ನು ತರಲು ಸಾಧ್ಯವಾಗಿರಲಿಲ್ಲ.

ಮೃತದೇಹಗಳನ್ನು ಪತ್ತೆ ಹಚ್ಚಿದ ಬಳಿಕ ರಕ್ಷಣೆ ಮತ್ತು ಗೃಹ ಸಚಿವಾಲಯಕ್ಕೆ ಮಾಹಿತಿ ನೀಡಿದ್ದು, ಎರಡೂ ವಿಭಾಗಗಳು ಅಗತ್ಯವಾದ ಸಹಾಯ ನೀಡಲಿದ್ದು, ಮೃತ ದೇಹಗಳನ್ನು ಹಿಂಪಡೆಯಲು ಕ್ರಮ ಕೈಗೊಳ್ಳುವಂತೆ ತಿಳಿಸಿವೆ ಎಂದು ಉತ್ತರಾಖಂಡ್ ಮುಖ್ಯ ಕಾರ್ಯದರ್ಶಿ ಉತ್ಪಾಲ್ ಕುಮಾರ್ ಸಿಂಗ್ ಹೇಳಿದ್ದಾರೆ.

ಪಿಥೋರಗರ್​ ಜಿಲ್ಲೆಯ ಆಡಳಿತ ಮಂಡಳಿಯು ಮೃತ ದೇಹಗಳನ್ನು ಮರಳಿ ಪಡೆಯುವ ಪ್ರಕ್ರಿಯೆಯನ್ನು ಹೇಗೆ ನಡೆಸುವುದು ಎಂಬುದರ ಬಗ್ಗೆ ಕಾರ್ಯತಂತ್ರ ರೂಪಿಸಿದ್ದು ಚಾಪರ್ ಮೂಲಕ ಮೃತ ದೇಹಗಳ ಬಳಿ ಕೆಳಗಿಳಿದು ಕಾರ್ಯಾಚರಣೆ ನಡೆಸಬೇಕಿದೆ.

ಪಿಥೋರಗರ್​ ಜಿಲ್ಲೆಯ ಮ್ಯಾಜಿಸ್ಟ್ರೇಟ್​ ವಿಜಯ್ ಕುಮಾರ್ ಜೋಗ್ದಾಂಡೇ ಇದರ ಕುರಿತು ಜಿಲ್ಲಾಡಳಿತವು ಐಟಿಬಿಪಿ ಮತ್ತು ಎಸ್​ಡಿಆರ್​ಎಫ್​ ನೊಂದಿಗೆ ಚರ್ಚಿಸಿದೆ. ಏಜೆನ್ಸಿಗಳಿಂದ ಪರ್ವತಾರೋಹಿಗಳ ಹೆಸರು ಪಡೆಯಲಾಗಿದೆ ಎಂದು ತಿಳಿಸಿದ್ದಾರೆ. ಹಾಗೂ ಹವಾಮಾನದ ಆಧಾರದ ಮೇಲೆ ಬುಧವಾರ ಐಎಎಫ್ ಚಾಪರ್​ನೊಂದಿಗೆ ತಂಡವು ತೆರಳಲಿದೆ ಎಂದು ತಿಳಿಸಿದ್ದಾರೆ.

ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲಿಸ್ (ಐಟಿಬಿಪಿ) ಮತ್ತು ರಾಜ್ಯ ವಿಪತ್ತು ಪಡೆ (ಎಸ್​ಡಿಆರ್​ಎಫ್) ಸಿಬ್ಬಂದಿಯನ್ನು ರಕ್ಷಣಾ ತಂಡವು ಒಳಗೊಂಡಿದೆ. (ಏಜೆನ್ಸೀಸ್​)

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...