ಉಡುಪಿ: ರಾಜ್ಯದ ಕರಾವಳಿ ಮತ್ತು ಒಳನಾಡು ಮೀನುಗಾರಿಕೆ ಅಭಿವೃದ್ಧಿಗೆ ಫೀಶರೀಶ್ ೆಡರೇಶನ್ ವತಿಯಿಂದ ಮಾಸ್ಟರ್ ಪ್ಲಾನ್ ತಯಾರಿಸಲಾಗಿದೆ ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.
ಬಡಗಬೆಟ್ಟು ಸೊಸೈಟಿ ಸಭಾಂಗಣದಲ್ಲಿ ಶುಕ್ರವಾರ ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್ ಆಶ್ರಯದಲ್ಲಿ ಪ್ರಾಥಮಿಕ ಮೀನುಗಾರರ ಸಹಕಾರ ಸಂಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಆಡಳಿತ ನಿರ್ವಹಣಾ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.
31 ಜಿಲ್ಲೆಗಳಲ್ಲಿರುವ ಸಂಗಳಿಗೆ ಉಡುಪಿ ಸಹಕಾರ ಯೂನಿಯನ್ ಮಾದರಿಯಾಗಿದೆ. ರಾಜ್ಯದ ಸಹಕಾರಿಗಳ ಪರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದೆ. ಮತ್ಸ$ಸಂಪದ ಯೋಜನೆಯನ್ನು ಕರ್ನಾಟಕದಲ್ಲಿ ಸಮರ್ಪಕವಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ಉಚ್ಚಿಲದಲ್ಲಿ ಕೇಂದ್ರ ಮೀನುಗಾರಿಕಾ ಸಚಿವ ರಾಜೀವ್ ರಂಜನ್ ಸಿಂಗ್ ಅಧ್ಯಕ್ಷತೆಯಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಸಹಕಾರ ಸಂಗಳ ಉಪನಿಬಂಧಕಿ ಕೆ.ಆರ್. ಲಾವಣ್ಯ ಮಾತನಾಡಿ, ಸ್ಥಳಿಯ ಆರ್ಥಿಕತೆಗೆ ಮೀನುಗಾರಿಕಾ ಕ್ಷೇತ್ರ ಬಹಳಷ್ಟು ಕೊಡುಗೆ ನೀಡಿದೆ. ಈ ನಿಟ್ಟಿನಲ್ಲಿ ಮೀನುಗಾರಿಕಾ ಸಹಕಾರ ಸಂಗಳು ಸ್ವಾವಲಂಬಿಗಳಾಗಿ ಅಭಿವೃದ್ಧಿ ಹೊಂದಲು ಸಿಇಒಗಳು ಕಾನೂನು ಅರಿವು ಹೊಂದಿರುವುದು ಬಹಳ ಮುಖ್ಯ ಎಂದರು.
ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ ಅಧ್ಯಕ್ಷತೆ ವಹಿಸಿ, ಜಿಲ್ಲೆಯಲ್ಲಿ 740ಕ್ಕೂ ಅಧಿಕ ಸಹಕಾರಿ ಸಂಗಳು ಕಾರ್ಯನಿರ್ವಹಿಸುತ್ತಿದ್ದು, ಯೂನಿಯನ್ ಮೂಲಕ ವರ್ಷಕ್ಕೆ 12 ರಿಂದ 14 ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲಾಗುತ್ತಿದೆ. ಈ ಮೂಲಕ ಆಡಳಿತಾತ್ಮಕ ವಿಷಯಗಳಲ್ಲಿ ಸಂಬಂಧಪಟ್ಟವರಿಗೆ ಸಹಕಾರಿ ಕಾನೂನುಗಳ ಅರಿವು ಮೂಡಿಸಲಾಗುತ್ತಿದೆ ಎಂದರು.
ಮೀನುಗಾರಿಕಾ ಇಲಾಖೆ ಉಪನಿರ್ದೇಶಕಿ ಟಿ. ಅಂಜನಾದೇವಿ, ಸಹಕಾರ ಸಂಗಳ ಸಹಾಯಕ ನಿಬಂಧಕಿ ಸುಕನ್ಯಾ, ಮಲ್ಪೆ ಯಾಂತ್ರಿಕ ದೋನಿ ಮೀನುಗಾರರ ಪ್ರಾ.ಸ.ಸಂದ ಅಧ್ಯಕ್ಷ ರಾಮಚಂದ್ರ ಕುಂದರ್, ಯೂನಿಯನ್ ಸದಸ್ಯರಾದ ಕಟಪಾಡಿ ಶಂಕರಪೂಜಾರಿ, ಎಚ್. ಗಂಗಾಧರ ಶೆಟ್ಟಿ, ಕೆ. ಕೊರಗ ಪೂಜಾರಿ, ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಹಿರಿಯ ವ್ಯವಸ್ಥಾಪಕಿ ಸೀತಾ ಜೆ.ಎಸ್. ಉಪಸ್ಥಿತರಿದ್ದರು. ಯೂನಿಯನ್ ಮುಖ್ಯ ಕಾರ್ಯನಿರ್ವಹರ್ಣಾಧಿಕಾರಿ ಅನುಷಾ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.
ಕರಾವಳಿ ಮೀನುಗಾರಿಕೆಗೆ ಮಾಸ್ಟರ್ ಪ್ಲಾನ್
ಎಚ್ಚರ, ದೇಹ ದಣಿದಿದ್ರೂ ನಿದ್ದೆ ಬರ್ತಿಲ್ಲವೇ? ಸಿರ್ಕಾಡಿಯನ್ ಸಿಂಡ್ರೋಮ್ ಇರಬಹುದು!!
ಬೆಂಗಳೂರು: ದೇಹ ದಣಿದಿರುತ್ತದೆ. ಆದರೆ ನಿದ್ರೆ ಬರುತ್ತಿಲ್ಲ. ಇದಕ್ಕೆ ದೇಹದ ಸಿರ್ಕಾಡಿಯನ್ ಲಯ ತಪ್ಪಿರುವುದು, ಅತಿಯಾದ…
ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಇಷ್ಟೆಲ್ಲ ಪ್ರಯೋಜನಗಳಿವೆಯಾ? ಇಲ್ಲಿದೆ ಉಪಯುಕ್ತ ಮಾಹಿತಿ….
ಇಂದು ಬಹುತೇಕರು ಡೈನಿಂಗ್ ಟೇಬಲ್ ಮೇಲೆ ಕುಳಿತು ಊಟ ಮಾಡುತ್ತಿದ್ದಾರೆ. ಆದರೆ, ಮೊದ ಮೊದಲು ಹೆಚ್ಚಿನ…
ನೀವು ಎಷ್ಟು ಆರೋಗ್ಯವಂತರೆಂದು ತಿಳಿಯಲು ನಿಮ್ಮ ನಾಲಿಗೆ ಬಣ್ಣ ಚೆಕ್ ಮಾಡಿ! ಈ ಬಣ್ಣದಲ್ಲಿದ್ರೆ ತುಂಬಾ ಡೇಂಜರ್!
ಪ್ರತಿಯೊಬ್ಬರೂ ಆರೋಗ್ಯವಾಗಿರಲು ಬಯಸುತ್ತಾರೆ. ಏಕೆಂದರೆ, ಆರೋಗ್ಯವೇ ಭಾಗ್ಯ. ಎಲ್ಲ ಇದ್ದು ಆರೋಗ್ಯವೇ ಇಲ್ಲದಿದ್ದರೆ ಏನು ಪ್ರಯೋಜನಾ?…