More

    ಗ್ರಾಪಂಗಳಿಗೆ ಆಡಳಿತಾಧಿಕಾರಿ ನೇಮಕ ಸಚಿವರ ಸಭೆಯಲ್ಲಿ ಚರ್ಚೆ

    ಬೆಂಗಳೂರು: ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆ ಮುಂದೂಡಿರುವ ಹಿನ್ನೆಲೆಯಲ್ಲಿ ಆಡಳಿತಾಧಿಕಾರಿ ನೇಮಕ ಕುರಿತು ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಸುಮಾರು 5 ಸಾವಿರ ಗ್ರಾಮ ಪಂಚಾಯಿತಿಗಳಿಗೆ ಮೇ ತಿಂಗಳಲ್ಲಿ ನಡೆಯಬೇಕಿತ್ತು. ಕರೊನಾ ಕಾರಣ ಮುಂದೂಡುವಂತೆ ಸರ್ಕಾರ ಆಯೋಗಕ್ಕೆ ಪತ್ರ ಬರೆದಿತ್ತು. ಈ ಹಿನ್ನೆಲೆಯಲ್ಲಿ ಈಗ ಆಡಳಿತಾಧಿಕಾರಿ ನೇಮಕ ಮಾಡುವ ಚರ್ಚೆ ನಡೆಯುತ್ತಿದೆ.

    ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ, ಅವಧಿ ಮುಗಿಯುವ ಗ್ರಾಮ ಪಂಚಾಯಿತಿಗಳಿಗೆ ಆಡಾಳಿತಾಧಿಕಾರಿ ನೇಮಕ ಮಾಡಬೇಕೆ ಅಥವಾ ಆಡಳಿತ ಸಮಿತಿ ರಚಿಸಬೇಕೆ ಎನ್ನುವ ಬಗ್ಗೆ ಚರ್ಚೆ ನಡೆಯುತ್ತಿದೆ. ಮಧ್ಯಂತರ ಅವಧಿಗೆ ಆಡಳಿತ ಸಮಿತಿ ಅಥವಾ ಆಡಳಿತಾಧಿಕಾರಿ ನೇಮಿಸುವ ಕುರಿತು ಮುಖ್ಯಮಂತ್ರಿಗಳ ನಿರ್ದೇಶನದಂತೆ ಸಭೆ ನಡೆಸಿ ರ್ಚಚಿಸಲಾಗಿದೆ. ಚರ್ಚೆಯ ವಿವರಗಳನ್ನು ಸಚಿವ ಸಂಪುಟದಲ್ಲಿಟ್ಟು ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

    ಇದನ್ನೂ ಓದಿ:  ನಕಲಿ ಅಶ್ಲೀಲ ಸಿಡಿ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ: ರಾಮಚಂದ್ರಾಪುರ ಮಠಕ್ಕೆ ಗೆಲುವು

    ಅಂತರ್ಜಲ ಚೇತನ: ರಾಜ್ಯದ 273 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಅಂತರ್ಜಲ ಚೇತನ ಯೋಜನೆ ಆರಂಭಿಸಲಾಗುವುದು. ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ ಪ್ರ್ರಾಯೋಗಿಕವಾಗಿ ಈ ಯೋಜನೆಗೆ ಚಾಲನೆ ನೀಡುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಆರ್ಟ್ ಆಫ್ ಲೀವಿಂಗ್ ಸಹಭಾಗಿತ್ವದಲ್ಲಿ ಯೋಜನೆ ಅನುಷ್ಠಾನಕ್ಕೆ ಚಾಲನೆ ನೀಡಲಾಗುವುದು ಎಂದರು.

    ಈ ಯೋಜನೆಯಿಂದ ರೈತರಿಗೆ ಸಾಕಷ್ಟು ಅನುಕೂಲವಾಗಲಿದೆ. ರಾಜ್ಯದ ಸಮಗ್ರ ಅಂತರ್ಜಲ ಚೇತನಕ್ಕೆ ಇದು ಸಹಕಾರಿಯಾಗಲಿದೆ. ಯಾದಗಿರಿ, ಬಳ್ಳಾರಿ, ಉತ್ತರ ಕನ್ನಡ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ 8-10 ದಿನದಲ್ಲಿ ಆರಂಭಿಸಲಾಗುವುದು. ಜೂನ್ ವೇಳೆಗೆ 9 ಜಿಲ್ಲೆಯಲ್ಲಿ ಈ ಯೋಜನೆ ಪ್ರಾರಂಭವಾಗಲಿದೆ ಎಂದು ಹೇಳಿದರು.

    ಇದನ್ನೂ ಓದಿ: VIDEO: ಸಂಸದೆ ಶೋಭಾ ಕರಂದ್ಲಾಜೆಗೆ ಗಲ್ಫ್ ರಾಷ್ಟ್ರಗಳಿಂದ ಜೀವ ಬೆದರಿಕೆ ಕರೆ!

    ಈಶ್ವರಪ್ಪ ಗರಂ: ಕಾರ್ವಿುಕರನ್ನು ಅವರವರ ಊರಿಗೆ ಕಳಿಸುವಲ್ಲಿ ಸರ್ಕಾರ ಎಡವಿದೆ ಎನ್ನುವ ಪ್ರತಿಪಕ್ಷಗಳ ಟೀಕೆಗೆ ಈಶ್ವರಪ್ಪ ಗರಂ ಆದರು. ಡಿ.ಕೆ. ಶಿವಕುಮಾರ್​ಗೆ ಕಣ್ಣು ಕಾಣುವುದಿಲ್ಲವೆ? ದೇಶದಲ್ಲಿ ಉತ್ತಮವಾಗಿ ಕರೊನಾ ಕಂಟ್ರೋಲ್ ಮಾಡುತ್ತಿರುವುದೇ ಕರ್ನಾಟಕ. ಅದಕ್ಕೆ ಜನರು ನಮ್ಮನ್ನು ಪ್ರಶಂಸಿಸುತ್ತಿದ್ದಾರೆ. ಆದರೆ, ಸಿದ್ದರಾಮಯ್ಯಮತ್ತು ಡಿಕೆಶಿ ಪೈಪೋಟಿಗೆ ಬಿದ್ದು ಮಾತಾಡುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಸೋನಿಯಾ ಗಾಂಧಿ ಮೆಚ್ಚಿಸಲು ಮಾತನಾಡುತ್ತಿದ್ದಾರೆ. ಇದು ದೇಶದಲ್ಲಿ ಕಾಂಗ್ರೆಸ್ ಪಕ್ಷವೊಂದು ಇದೆ ಎಂದು ತೋರಿಸುವ ಪ್ರಯತ್ನವಷ್ಟೆ ಎಂದು ಈಶ್ವರಪ್ಪ ಟಾಂಗ್ ಕೊಟ್ಟರು.

    ಇಷ್ಟಾದರೂ ಈ ಜನರಿಗೆ ಬುದ್ಧಿ ಬರಲಿಲ್ಲವಲ್ಲಾ?!

    ಮರಳು ಮಾಫಿಯಾ ಅಟ್ಟಹಾಸ: ಟ್ರ್ಯಾಕ್ಟರ್​ ಹಾಯಿಸಿ ಪೊಲೀಸ್ ಪೇದೆಯನ್ನು ಕೊಲ್ಲಲು ಯತ್ನ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts