More

    ಜೋಗದ ಗುಂಡಿಗೆ ಇಳಿಯಲು ಬೆಳಗ್ಗೆ 8ರಿಂದಲೇ ಅವಕಾಶ

    ಕಾರ್ಗಲ್: ಜೋಗ ಜಲಪಾತದ ಗುಂಡಿಗೆ ಮೆಟ್ಟಿಲುಗಳ ಮೂಲಕ ಇಳಿಯುವ ಪ್ರವಾಸಿಗರಿಗೆ ಇನ್ನು ಮುಂದೆ ಬೆಳಗ್ಗೆ ಎಂಟು ಗಂಟೆಯಿಂದಲೇ ಅವಕಾಶ ನೀಡುವಂತೆ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅಧಿಕಾರಿಗಳಿಗೆ ಸೂಚಿಸಿದರು.

    ಜೋಗದ ಅತಿಥಿಗೃಹದಲ್ಲಿ ಶನಿವಾರ ಜನಪ್ರತಿನಿಧಿಗಳá- ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸá-ದ್ದಿಗಾರರ ಜತೆ ಮಾತನಾಡಿ,

    ಪ್ರಸ್ತುತ ಬೆಳಗ್ಗೆ 11 ಗಂಟೆಯಿಂದ ಸಂಜೆ ನಾಲ್ಕು ಗಂಟೆವರೆಗೆ ಇಳಿಯಲು ಅವಕಾಶವಿದ್ದು ಈ ಸಮಯವನ್ನು ಹೆಚ್ಚು ಮಾಡುವಂತೆ ತಿಳಿಸಿದರು.

    ವಿಶ್ವದಲ್ಲಿಯೇ ಪ್ರಸಿದ್ಧ ತಾಣವನ್ನಾಗಿಸುವ ನಿಟ್ಟಿನಲ್ಲಿ ಇಲ್ಲಿನ ಸರ್ವತೋಮುಖ ಅಭಿವೃದ್ಧಿಗೆ 160 ಕೋಟಿ ರೂ. ಆಡಳಿತಾತ್ಮಕ ಮಂಜೂರಾತಿಯನ್ನು ರಾಜ್ಯ ಸರ್ಕಾರ ನೀಡಿದೆ. ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಬೇಕು ಎಂಬ ನಿಟ್ಟಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜೋಗ ಜಲಪಾತದ ಅಭಿವೃದ್ಧಿಗೆ ವಿಶೇಷ ಆಸಕ್ತಿ ವಹಿಸಿದ್ದು ಒಂದು ತಿಂಗಳ ಹಿಂದೆಯೇ ಕ್ಯಾಬಿನೆಟ್ ಅನುಮೋದನೆ ದೊರೆತಿದೆ. ಇದಕ್ಕೆ ಪೂರಕವಾಗಿ ಡಿಪಿಆರ್ ತಯಾರಿಸಿ ಟೆಂಡರ್ ಕರೆದು ಮುಂದಿನ ಒಂದು ವರ್ಷದಲ್ಲಿ ಅಭಿವೃದ್ಧಿ ಕಾಮಗಾರಿಗಳ ಕಾರ್ಯವನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

    ಜೋಗ ಜಲಪಾತಕ್ಕೆ ಆಗಮಿಸುವ ಪ್ರವಾಸಿಗರಿಗೆ ಶೌಚಗೃಹ, ಜಲ ಸಾಹಸ ಕ್ರೀಡೆ, ಹೋಮ್್ಟೇ, ವಿಶ್ರಾಂತಿ ಕೊಠಡಿ, ಉಪಾಹಾರ ಗೃಹ ಎಲ್ಲವೂ ಸೇರಿ ಮೂಲ ಸೌಲಭ್ಯ ಒದಗಿಸುವತ್ತ ಪ್ರಮುಖವಾಗಿ ಗಮನ ಹರಿಸಬೇಕಾಗಿದೆ ಎಂದರು.

    ಸ್ಥಳೀಯ ಪಟ್ಟಣ ಪಂಚಾಯಿತಿ ಅಭಿವೃದ್ಧಿಗೆ ಆದಾಯವನ್ನು ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಜೆಎಂಎ ಅಧೀನದಲ್ಲಿ ಪ್ರವೇಶ ದ್ವಾರದಲ್ಲಿ ಸಂಗ್ರಹವಾಗುವ ಹಣದಲ್ಲಿ ಶೇಕಡವಾರು ನೀಡುವಂತೆ ಪಪಂ ಸದಸ್ಯರು ಮಾಡಿದ ಮನವಿಗೆ, ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ ಕ್ರಮಕೈಗೊಳುವುದಾಗಿ ತಿಳಿಸಿದರು.

    ಶಾಸಕ ಹರತಾಳು ಹಾಲಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಜಿಪಂ ಸದಸ್ಯ ರಾಜಶೇಖರ ಗಾಳಿಪುರ, ನಗರಸಭೆ ಅಧ್ಯಕ್ಷೆ ಮಧá-ರಾ ಶಿವಾನಂದ್, ಪಪಂ ಅಧ್ಯಕ್ಷೆ ವಾಸಂತಿ ರಮೇಶ್, ಉಪಾಧ್ಯಕ್ಷ ಪಿ.ಮಂಜುನಾಥ್, ಸದಸ್ಯರಾದ ನಾಗರಾಜ್ ವಾಟೆಮಕ್ಕಿ, ಲಲಿತಾ ಮಂಜುನಾಥ್, ಉಮೇಶ್ ಕೆಮ್ಮಣಗಾರ್, ಬಾಲಸುಬ್ರಮಣ್ಯ, ಲಕ್ಷ್ಮೀರಾಜು, ಸುಜಾತಾ ಜೈನ್, ಜಯಲ್ಷ್ಮ, ಹರೀಶ್ ಗೌಡ, ಪ್ರಮುಖರಾದ ಲೋಕನಾಥ್ ಬಿಳಿಸಿರಿ, ಗಣೇಶ್ ಪ್ರಸಾದ್, ನಿಸ್ಸಾರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts