ಪ್ಲಾಸ್ಟಿಕ್ ಕವರ್‌ನಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಮೈಸೂರು: ನಗರದ ಬಡಾವಣೆಯೊಂದರಲ್ಲಿ ಪ್ಲಾಸ್ಟಿಕ್ ಕವರ್‌ನಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿದ್ದು, ಪೊಲೀಸರು ಮಗುವನ್ನು ಚೆಲುವಾಂಬ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಶ್ರೀರಾಂಪುರ ಬಡಾವಣೆಯ ಶನೇಶ್ವರ ದೇಗುಲದ ಬಳಿ ಸೋಮವಾರ ಮಗು ಪತ್ತೆಯಾಗಿದೆ. ಶಿಶು ಬೆಳಗಿನ ಜಾವ ಜನಿಸಿರಬಹುದೆಂದು ವೈದ್ಯರು ಅಂದಾಜಿಸಿದ್ದಾರೆ. ಬೆಳಗ್ಗೆ ಶಿಶು ಕಂಡು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಕುವೆಂಪುನಗರ ಠಾಣೆಯ ಎಎಸ್‌ಐ ರಂಗಸ್ವಾಮಿ ಮತ್ತು ಸಿಬ್ಬಂದಿ ಮಗುವನ್ನು ಚೆಲುವಾಂಬ ಆಸ್ಪತ್ರೆಗೆ ದಾಖಲಿಸಿದರು.

ಈ ಕುರಿತು ಪ್ರತಿಕ್ರಿಯಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಪದ್ಮಾ, ಮಗು ಆರೋಗ್ಯವಾಗಿದ್ದು, ಬೇರೆಲ್ಲೋ ಜನಿಸಿರುವ ಮಗುವನ್ನು ಇಲ್ಲಿ ತಂದು ಎಸೆದಿರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಕುವೆಂಪುನಗರ ಠಾಣೆ ಇನ್ಸ್‌ಪೆಕ್ಟರ್ ರಾಜು ಅವರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *