More

    ಮಹನೀಯರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಿ

    ಮದ್ದೂರು: ಕನಕದಾಸರು ಕೀರ್ತನೆ ಮತ್ತು ವಚನಗಳ ಮೂಲಕ ನಾಡಿಗೆ ಮತ್ತು ರಾಷ್ಟ್ರಕ್ಕೆ ಉತ್ತಮ ಹೆಸರು ತಂದಿದ್ದಾರೆ. ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆದರೆ ಜೀವನ ಸಾರ್ಥಕವಾಗುತ್ತದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.

    ಪಟ್ಟಣದ ತಾಲೂಕು ಪಂಚಾಯಿತಿಯ ಸಭಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಗುರುವಾರ ಆಯೋಜಿಸಿದ್ದ ಭಕ್ತ ಕನಕದಾಸ ಜಯಂತಿಯ ಕಾರ್ಯಕ್ರಮದಲ್ಲಿ ಸಾಧಕರನ್ನು ಅಭಿನಂದಿಸಿ ಮಾತನಾಡಿದರು.

    ಭಕ್ತ ಕನಕದಾಸರು ತಮ್ಮ ವಚನಗಳು, ಕೀರ್ತನೆಗಳ ಮೂಲಕ ಸಮಾಜ ಸುಧಾರಣೆಗೆ ಅನನ್ಯ ಕೊಡುಗೆ ನೀಡಿದ್ದಾರೆ. ಇವರ ವಚನಗಳು ಮತ್ತು ಕೀರ್ತನೆಗಳನ್ನು ಅರ್ಥೈಸಿಕೊಂಡರೆ ನೆಮ್ಮದಿ ಜೀವನ ನಡೆಸಬಹುದು ಎಂದು ಸಲಹೆ ನೀಡಿದರು.

    ತಾಲೂಕು ಮಟ್ಟದಲ್ಲಿ ಸುಸಜ್ಜಿತವಾದ ಕನಕ ಭವನ ನಿರ್ಮಾಣ ಮಾಡಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ. ಭವನ ನಿರ್ಮಾಣ ಮಾಡುವ ಸಂಬಂಧ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ಮುಂದಿನ ದಿನಗಳಲ್ಲಿ ಎಲ್ಲ ಮುಖಂಡರು ಒಟ್ಟಿಗೆ ಸೇರಿ ಕಾರ್ಯಕ್ರಮಗಳನ್ನು ರೂಪಿಸಿ ಅವುಗಳನ್ನು ಯಶಸ್ವಿಗೊಳಿಸಿ ಸಮಾಜಕ್ಕೆ ಹೊಸ ಸಂದೇಶ ಸಾರಬೇಕು ಎಂದು ಕರೆ ನೀಡಿದರು.

    ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಶ್ರೀ ಉಗ್ರನರಸಿಂಹ ದೇವಾಲಯ ಆವರಣದಿಂದ ಭಕ್ತ ಕನಕದಾಸರ ಭಾವಚಿತ್ರವನ್ನು ತೆರೆದ ವಾಹನದಲ್ಲಿಟ್ಟು ವಿವಿಧ ಜಾನಪದ ಕಲಾ ಪ್ರಕಾರಗಳೊಂದಿಗೆ ಅದ್ದೂರಿಯಾಗಿ ಮೆರವಣಿಗೆ ಮೂಲಕ ತಾಲೂಕು ಪಂಚಾಯಿತಿ ಕಚೇರಿಗೆ ಆಗಮಿಸಲಾಯಿತು.

    ಭಕ್ತ ಕನಕದಾಸರ ಕುರಿತು ಸಾಹಿತಿ ಬಿ.ವಿ.ಹಳ್ಳಿ ನಾರಾಯಣ ವಿಶೇಷ ಉಪನ್ಯಾಸ ನೀಡಿದರು. ತಹಸೀಲ್ದಾರ್ ಸೋಮಶೇಖರ್, ತಾಲೂಕು ಪಂಚಾಯಿತಿ ಇಒ ಎಲ್.ಸಂದೀಪ್, ಗ್ರೇಡ್- 2 ತಹಸೀಲ್ದಾರ್ ಸೋಮಶೇಖರ್, ತಾಲೂಕು ಕುರುಬರ ಸಂಘದ ಅಧ್ಯಕ್ಷ ಮರಿಹೆಗಡೆ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಎಂ.ಮರಿಹೆಗಡೆ, ಜವಾಹರ್‌ಲಾಲ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts