More

    ಸಾಧಕಿಯರ ಆದರ್ಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ

    ಆಲೂರು: ತಾಲೂಕಿನ ಬೈರಾಪುರ ಗ್ರಾಮದ ಬೇಥೆಸ್ದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೋಮವಾರ ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಯಿತು.

    ತಾಲೂಕಿನ ಬೈರಾಪುರ ಗ್ರಾಮದ ಬೇಥೆಸ್ದ ಆಂಗ್ಲ ಮಾಧ್ಯಮ ಶಾಲಾ ಮುಖ್ಯಶಿಕ್ಷಕಿ ರೀನಾ ಮ್ಯಾಥ್ಯೂ ಮಾತನಾಡಿ, ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರನ್ನು ಅದ್ವಿತೀಯ ಸಾಧನೆ ಮಾಡುತ್ತಿದ್ದು, ತಮ್ಮ ತಮ್ಮ ಕ್ಷೇತ್ರಗಳಲ್ಲಿ ದೊಡ್ಡ ಸಾಧನೆ ಮಾಡಲು ಶ್ರಮಿಸುತ್ತಿದ್ದಾಳೆ. ಮಹಿಳಾ ಸಾಧಕಿಯರ ಆದರ್ಶವನ್ನು ಜೀವನದಲ್ಲಿ ಅಳವಡಿಸಿಕೊಂಡು ವಿದ್ಯಾರ್ಥಿನಿಯರು ಸಮಾಜ ಹೆಮ್ಮೆ ಪಡುವಂತಹ ಸಾಧನೆ ಮಾಡಬೇಕು ಎಂದು ಕಿವಿಮಾತು ಹೇಳಿದರು.

    ಕಾರ್ಯಕ್ರಮದಲ್ಲಿ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಸಂಸ್ಥೆಯ ಜಿಲ್ಲಾ ಸಹಾಯಕ ಆಯುಕ್ತ ಎಂ.ಬಾಲಕೃಷ್ಣ ಮಾತನಾಡಿ, ಭಾರತೀಯ ಸಂಸ್ಕೃತಿ ಹಾಗೂ ಪರಂಪರೆಯಲ್ಲಿ ಮಹಿಳೆಯರಿಗೆ ಉನ್ನತ ಸ್ಥಾನಮಾನವಿದೆ. ದೇಶದ ಪ್ರತಿಯೊಬ್ಬ ಪ್ರಜೆಯೂ ಮಹಿಳೆಯರನ್ನು ಗೌರವಿಸುವ ಪದ್ಧತಿಯನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

    ಬೇಥೆಸ್ದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕಿ ರೀನಾ ಮ್ಯಾಥ್ಯೂ ಸನ್ಮಾನಿಸಲಾಯಿತು. ಹಿರಿಯ ಶಿಕ್ಷಕ ನಾಗೇಂದ್ರ, ಮಮತಾ ಶೆಟ್ಟಿ, ಶುಭಾ, ಚಂದ್ರಕಲಾ, ಸುಮಾ, ಪರ್ವೀನ್, ಜೇಮ್ಸ್, ಚಂದ್ರು, ಪಿ.ಸುನೀಲ್ ಶಿಕ್ಷಕರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts