More

    ವಚನಕಾರರ ಚಿಂತನೆಗಳನ್ನು ಅಳವಡಿಸಿಕೊಳ್ಳಿ

    ಕುರುಗೋಡು: ಸಂತರ ವಿಚಾರ ಹಾಗೂ ಸಾಧನೆಗಳನ್ನು ಯುವಕರು ಪಾಲಿಸಬೇಕು ಎಂದು ತಹಸೀಲ್ದಾರ್ ಕೆ. ರಾಘವೇಂದ್ರ ರಾವ್ ಹೇಳಿದರು. ಪಟ್ಟಣದ ತಹಸಿಲ್ ಕಚೇರಿಯಲ್ಲಿ ಸೋಮವಾರ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಶಿವಯೋಗಿ ಸಿದ್ಧರಾಮೇಶ್ವರರು 68 ಸಾವಿರ ವಚನಗಳನ್ನು ರಚಿಸಿ ಹಾಡಿದ್ದಾರೆ. ಅವುಗಳ ಪೈಕಿ ಈಗ 1,679 ವಚನಗಳು ಲಭಿಸಿವೆ. ಬಸವಣ್ಣ ಹಾಗೂ ಸಿದ್ದರಾಮೇಶ್ವರರು ಶ್ರೇಷ್ಠ ವಚನಕಾರರಾಗಿದ್ದಾರೆ. ಬಸವಣ್ಣನವರು ಸಾಮಾಜಿಕವಾಗಿ ಹೆಚ್ಚು ಒತ್ತು ಕೊಡುತ್ತಿದ್ದರು.

    ಇದನ್ನು ಓದಿ: ಎಲ್ಲರೂ ಒಂದೇ ಎಂಬ ಸಂದೇಶ ಬಸವಣ್ಣನವರು ನೀಡಿದ್ದರು: ಮಣಕವಾಡದ ಶ್ರೀಗಳು

    ಸಿದ್ದರಾಮೇಶ್ವರರು ಸಮಾಜ ಸೇವೆಯಲ್ಲಿ ತೃಪ್ತಿ ಪಡೆಯುತ್ತಿದ್ದರು. ಅಧ್ಯಾತ್ಮ ಪರಂಪರೆ ಹೊಂದಿರುವ ದೇಶದಲ್ಲಿ ದಿವ್ಯಜ್ಞಾನಿಗಳನ್ನು ಮುಂದಿನ ಜನಾಂಗಕ್ಕೆ ಪರಿಚಯಿಸಲು ಅವರ ಚಿಂತನೆಗಳನ್ನು ಅನುಷ್ಠಾನಕ್ಕೆ ತರಬೇಕು ಎಂದು ಹೇಳಿದರು.

    ಪಟ್ಟಣದ ಮುಖಂಡರು ಮಾತನಾಡಿದರು. ಪ್ರಮುಖರಾದ ತಿಮ್ಮಪ್ಪ, ಆಂಜನೇಯ, ಬೊಗಪ್ಪ, ಕ್ಯಾದಿಗೆಹಾಳ್ ರಾಘು, ನಾಗರಾಜ್, ಅಡಿವೆಪ್ಪ ಸೇರಿ ಪಟ್ಟಣದ ಮುಖಂಡರು ಹಾಗೂ ವಿವಿಧ ಸಂಘಟನೆಯ ಮುಖಂಡರು ಮತ್ತು ತಹಸೀಲ್ದಾರ್ ಕಚೇರಿ ಸಿಬ್ಬಂದಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts