More

    ಕಲಬೆರಕೆ ಆಹಾರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ ಜಿ.ಜಗದೀಶ್

    ಉಡುಪಿ: ಜನಸಾಮಾನ್ಯರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವಂತಹ ಕಲಬೆರಕೆ ಉತ್ಪನ್ನಗಳ ತಯಾರಕರು, ಮಾರಾಟಗಾರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚನೆ ನೀಡಿದರು.
    ಬುಧವಾರ ಜಿಲ್ಲಾ ಮಟ್ಟದ ಆಹಾರ ಸುರಕ್ಷತೆ ಸಲಹಾ ಸಮಿತಿ ಸಭೆ ನಡೆಸಿದ ಅವರು, ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಗಳಲ್ಲಿ ಕಲಬೆರಕೆ ಉತ್ಪನ್ನಗಳು ಮಾರಾಟವಾಗುತ್ತಿವೆ ಎಂಬ ದೂರುಗಳು ಕೇಳಿಬರುತ್ತಿವೆ. ಕಲಬೆರಕೆ, ರಾಸಾಯನಿಕ ಮಿಶ್ರಿತ ಆಹಾರಗಳ ಸೇವನೆಯಿಂದ ಮಾರಕ ರೋಗಗಳು ಉಂಟಾಗುತ್ತವೆ. ಈ ದಂಧೆಗೆ ಅಧಿಕಾರಿಗಳು ಕಡಿವಾಣ ಹಾಕಬೇಕು ಎಂದರು.

    ಜಿಲ್ಲೆಗೆ ಹೊರಗಿನಿಂದ ಬರುವ ಹಾಗೂ ಇಲ್ಲಿಂದ ಹೋಗುವ ಮೀನುಗಳು ಕೆಡದಂತೆ ಇಡಲು ರಾಸಾಯನಿಕ ಬಳಸುತ್ತಿರುವ ಬಗ್ಗೆ ದೂರುಗಳಿದ್ದು, ಆ ಮೀನುಗಳನ್ನು ಪರೀಕ್ಷೆ ಮಾಡಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

    ಪ್ರಸಾದಕ್ಕೆ ಪರವಾನಗಿ: ಪ್ರಸಾದ ವಿತರಿಸುವ ಆರಾಧನಾಲಯಗಳು ಕಡ್ಡಾಯವಾಗಿ ನೋಂದಣಿ ಮಾಡುವುದರ ಜತೆಗೆ ಪರವಾನಗಿ ಪಡೆಯಬೇಕು. ಪ್ರಸಾದ ತಯಾರಿಕಾ ಕೋಣೆಗಳಲ್ಲಿ ಸಿಸಿಟಿವಿ ಅಳವಡಿಸಬೇಕು. ಅನಧಿಕೃತ ವ್ಯಕ್ತಿಗಳು ಕೋಣೆ ಪ್ರವೇಶಿಸದಂತೆ ಎಚ್ಚರ ವಹಿಸಬೇಕು ಎಂದರು.
    ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ವೈ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸುಧೀರ್ ಚಂದ್ರ ಸೂಡ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ವಾಸುದೇವ, ಹಿರಿಯ ಆಹಾರ ಸುರಕ್ಷಿತ ಅಧಿಕಾರಿ ವೆಂಕಟೇಶ್ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts