ಹೂಲಗೇರಿ ಏಕಪಕ್ಷೀಯ ನಿರ್ಧಾರಗಳಿಂದ ಬೇಸರ

blank

ಲಿಂಗಸುಗೂರು: ಮಾಜಿ ಶಾಸಕ ಡಿ.ಎಸ್.ಹೂಲಗೇರಿ ಅವರ ನಡವಳಿಕೆ ಮತ್ತು ಏಕಪಕ್ಷೀಯ ನಿರ್ಧಾರಗಳಿಂದ ಬೇಸತ್ತು ಅವರಿಂದ ಅಂತರ ಕಾಯ್ದುಕೊಂಡಿದ್ದರೂ ಕಾಂಗ್ರೆಸ್‌ನಲ್ಲೇ ಮುಂದುವರಿಯುವುದಾಗಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪನಗೌಡ ಪಾಟೀಲ್ ಹೇಳಿದರು.


ಪಟ್ಟಣದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿ, ಕಳೆದ ಮೂರು ದಶಕಗಳಿಂದ ಕಾಂಗ್ರೆಸ್ ಸಂಘಟನೆ ಮತ್ತು ಕಳೆದ ಮೂರು ವಿಧಾನಸಭಾ ಚುನಾವಣೆಯಲ್ಲಿ ಡಿ.ಎಸ್.ಹೂಲಗೇರಿ ಪರ ಕೆಲಸ ಮಾಡಿದ್ದೇವೆ. ಆದರೆ, ಹೂಲಗೇರಿ ಏಕಪಕ್ಷೀಯ ನಿರ್ಧಾರಗಳಿಂದ ಪಕ್ಷದಲ್ಲಿ ಗುಂಪುಗಾರಿಕೆ ಕಂಡು ಬರುತ್ತಿದೆ ಎಂದು ದೂರಿದರು.


ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಯಾರನ್ನು ಆಯ್ಕೆ ಮಾಡಬೇಕೆಂಬುದರ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚಿಸಿಲ್ಲ. ಹಲವು ದಶಕಗಳಿಂದ ಪಕ್ಷಕ್ಕಾಗಿ ದುಡಿದವರಿಗೆ ಸ್ಥಾನಮಾನ ನೀಡಬೇಕಿತ್ತು. ಆದರೆ ಕಳೆದ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಸೇರ್ಪಡೆಗೊಂಡ ಬಿಜೆಪಿ ಮತ್ತು ಆರ್‌ಎಸ್‌ಎಸ್ ಸಂಸ್ಕೃತಿಯಿಂದ ಬಂದಿರುವ ಗೋವಿಂದ ನಾಯಕರನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಆರೋಪಿಸಿದರು.


ಪಕ್ಷದಲ್ಲಿ ಹಿರಿಯ ಮುಖಂಡರಾದ ಡಿ.ಜಿ.ಗುರಿಕಾರ, ಮಲ್ಲಣ್ಣ ವಾರದ ಸೇರಿ ಇನ್ನೂ ಹಲವರನ್ನು ಕಡೆಗಣಿಸಲಾಗಿದೆ. ಇಂತಹ ಬೆಳವಣಿಗೆಗಳಿಂದ ಲೋಕಸಭೆ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಪಕ್ಷಕ್ಕೆ ಹಿನ್ನಡೆಯಾಗಲಿದೆ. ಪಕ್ಷದ ವರಿಷ್ಠರ ಗಮನಕ್ಕೆ ಎಲ್ಲ ವಿಚಾರಗಳನ್ನು ತರಲಾಗುವುದು ಎಂದು ಭೂಪನಗೌಡ ಪಾಟೀಲ್ ತಿಳಿಸಿದರು. ಪ್ರಮುಖರಾದ ಪಾಮಯ್ಯ ಮುರಾರಿ, ಗುಂಡಪ್ಪ ನಾಯಕ, ಮಲ್ಲಣ್ಣ ವಾರದ, ಏಕ ಅಮರಣ್ಣ, ಆದೇಶ ನಾಯಕ, ಚಂದ್ರಣ್ಣ ಹಳ್ಳಿ ಇದ್ದರು.

Share This Article

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಉಪ್ಪು ನೀರು ಕುಡಿಯುವುದರಿಂದ ಏನು ಪ್ರಯೋಜನ; ಇಲ್ಲಿದೆ ನಿಮಗಾಗಿ ಹೆಲ್ತಿ ಮಾಹಿತಿ | Health Tips

ಬೆಳಗ್ಗೆ ಎದ್ದ ನಂತರ ನೀರು ಕುಡಿಯುವ ಅಭ್ಯಾಸವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆದರೆ…

ಮಲಬದ್ಧತೆ ಸಮಸ್ಯೆ ನಿಮ್ಮನ್ನು ಕಾಡುತ್ತಿದ್ಯಾ?; ಈ ತರಕಾರಿಗಳಿಂದ ತೊಂದರೆ ನಿವಾರಣೆ ಗ್ಯಾರಂಟಿ | Health Tips

ಮಲಬದ್ಧತೆ ಎಲ್ಲಾ ವಯಸ್ಸಿನ ಜನರ ಮೇಲೆ ಪರಿಣಾಮ ಬೀರುವ ಸಾಮಾನ್ಯ ಸಮಸ್ಯೆಯಾಗಿದೆ. ನಿಮ್ಮ ಕರುಳುಗಳು ಸರಿಯಾಗಿ…

ಸ್ಟ್ರೆಚ್ ಮಾರ್ಕ್ಸ್ ಹೋಗಲಾಡಿಸಲು ಉತ್ತಮ ಮದ್ದು ತೆಂಗಿನ ಎಣ್ಣೆ; ಈ ಬಗ್ಗೆ ತಜ್ಞರು ಹೇಳೋದೇನು | Health Tips

ಗರ್ಭಾವಸ್ಥೆಯಲ್ಲಿ ಹಿಗ್ಗಿಸಲಾದ ಗುರುತುಗಳು ಇರುವುದು ಸಹಜ. ಕೆಲವೊಮ್ಮೆ ಈ ಗುರುತುಗಳು ತಾವಾಗಿಯೇ ಮಾಯವಾಗುತ್ತವೆ ಮತ್ತು ಕೆಲವೊಮ್ಮೆ…