More

    ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ಆಗ್ರಹ

    ದಾವಣಗೆರೆ : ವಕೀಲರ ಸಂರಕ್ಷಣಾ ಮಸೂದೆಯನ್ನು ಬೆಳಗಾವಿಯಲ್ಲಿ ನಡೆಯುವ ವಿಧಾನ ಮಂಡಲದ ಅಧಿವೇಶನದಲ್ಲಿ ಮಂಡಿಸಿ ಜಾರಿಗೆ ತರುವಂತೆ ಆಗ್ರಹಿಸಿ ವಕೀಲರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
    ನ್ಯಾಯಾಲಯದ ಕಾರ್ಯ ಕಲಾಪಗಳಿಂದ ಹೊರಗುಳಿದ ವಕೀಲರು, ಜಿಲ್ಲಾ ನ್ಯಾಯಾಲಯ ಆವರಣದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆಯಲ್ಲಿ ತೆರಳಿ, ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ಅವರಿಗೆ ಮನವಿ ಸಲ್ಲಿಸಿದರು.
    ಇತ್ತೀಚಿನ ದಿನಗಳಲ್ಲಿ ವಕೀಲರ ಮೇಲೆ ನಿರಂತರವಾಗಿ ಪೊಲೀಸರಿಂದ ಹಾಗೂ ಸಾರ್ವಜನಿಕರಿಂದ ದಬ್ಬಾಳಿಕೆ ಮತ್ತು ಹಲ್ಲೆ ಪ್ರಕರಣಗಳು ನಡೆಯುತ್ತಿವೆ. ಇದರಿಂದ ತಮಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು.
    ಈಗಾಗಲೇ ವೈದ್ಯರಿಗೆ ರಕ್ಷಣಾ ಕಾನೂನು ಜಾರಿ ಮಾಡಲಾಗಿದೆ. ವಕೀಲರಿಗೂ ಅದೇ ರೀತಿಯ ಕಾಯ್ದೆ ಅನುಷ್ಠಾನಕ್ಕೆ ತರಬೇಕಿದೆ ಎಂದು ಹೇಳಿದರು.
    ಕಾಯ್ದೆ ಅಂತಿಮ ಕರಡು ಕಾನೂನು ಇಲಾಖೆಯಲ್ಲಿದೆ. ವಕೀಲರ ಮೇಲೆ ನಡೆಯುತ್ತಿರುವ ಹಲ್ಲೆ ಹಾಗೂ ದಬ್ಬಾಳಿಕೆಯನ್ನು ಗಂಭೀರವಾಗಿ ಪರಿಗಣಿಸಿ, ಮಸೂದೆಯನ್ನು ಅಧಿವೇಶನದಲ್ಲಿ ಮಂಡನೆ ಮಾಡಿ ತುರ್ತಾಗಿ ಜಾರಿಗೊಳಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದರು.
    ದಾವಣಗೆರೆ ವಕೀಲರ ಸಂಘದ ಅಧ್ಯಕ್ಷ ಡಿ.ಪಿ. ಬಸವರಾಜ, ಕಾರ್ಯದರ್ಶಿ ಲೋಕಿಕೆರೆ ಪ್ರದೀಪ್, ಉಪಾಧ್ಯಕ್ಷ ಬಿ.ಬಿ. ರಾಮಪ್ಪ, ಹಿರಿಯ ವಕೀಲರಾದ ಎಂ.ಆರ್. ಮಹೇಶ್ವರಪ್ಪ, ಎನ್.ಎಂ. ಆಂಜನೇಯ, ಗುಮ್ಮನೂರು ಮಲ್ಲಿಕಾರ್ಜುನ, ಎ.ಸಿ. ರಾಘವೇಂದ್ರ, ಡಿ.ಎಸ್. ಲಿಂಗರಾಜು, ವಿ. ಗೋಪಾಲ್, ಶಿವಕುಮಾರ್, ಚಂದ್ರಶೇಖರ್, ಸವಿತಾ, ಮಂಜಮ್ಮ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts