More

    ಕ್ರಿಕೆಟ್ ಚಟುವಟಿಕೆಗಳಿಗೆ ಅಡ್ಡಿ ಮಾಡಲ್ಲ ಎಂದ ತಾಲಿಬಾನಿ ಉಗ್ರರು

    ಕಾಬೂಲ್: ಅಫ್ಘಾನಿಸ್ತಾನದಲ್ಲಿ ತಾಲಿಬಾನಿ ಉಗ್ರರ ಅಟ್ಟಹಾಸ ಎಲೆ ಮೀರುತ್ತಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ದೇಶದ ಸಂಪೂರ್ಣ ಆಡಳಿತವನ್ನು ತಾಲಿಬಾನಿಗಳು ವಶಪಡಿಸಿಕೊಂಡಿದ್ದಾರೆ. ಇದರ ನಡುವೆಯೂ ದೇಶದಲ್ಲಿ ಕ್ರಿಕೆಟ್ ಚಟುವಟಿಕೆ ಯಾವುದೇ ಅಡ್ಡಿ ಆತಂಕವಿಲ್ಲದೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಎಂದಿನಂತೆ ಕ್ರಿಕೆಟ್ ಚಟುವಟಿಕೆ ಸಾಗಲಿವೆ ಎನ್ನಲಾಗಿದೆ. ದೇಶದಲ್ಲಿ ಕ್ರಿಕೆಟ್ ಬಂದ್ ಮಾಡುವ ಸಂಬಂಧ ತಾಲಿಬಾನ್ ಉಗ್ರರಿಂದ ಇದುವರೆಗೂ ಯಾವುದೇ ಸೂಚನೆ ಅಥವಾ ಆದೇಶ ಬಂದಿಲ್ಲ. ಹೀಗಾಗಿ ಆಫ್ಘನ್ ಕ್ರಿಕೆಟ್ ತಂಡಕ್ಕೆ ಯಾವುದೇ ತೊಂದರೆ ಯಾಗುವುದಿಲ್ಲ ಎಂದು ಹೇಳಲಾಗಿದೆ.

    ಇದನ್ನೂ ಓದಿ: ಎನ್‌ಸಿಎ ಮುಖ್ಯಸ್ಥರಾಗಿ ರಾಹುಲ್ ದ್ರಾವಿಡ್ ಮುಂದುವರಿಕೆ ?

    ಅಫ್ಘಾನಿಸ್ತಾನ ತಂಡ ಲಾಜಿಸ್ಟಿಕ್ಸ್ ಸೇರಿದಂತೆ ಇನ್ನಿತರ ಯಾವುದೇ ಸಮಸ್ಯೆಗಳಿಗೂ ತೊಂದರೆ ಯಾಗುವುದಿಲ್ಲ ಎಂದು ತಿಳಿದು ಬಂದಿದೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಅಟ್ಟಹಾಸದಿಂದಾಗಿ ರಾಜತಾಂತ್ರಿಕ ಬಿಕ್ಕಟ್ಟಿನಿಂದ ಬಳಲುತ್ತಿದ್ದರೂ ಕ್ರಿಕೆಟ್ ಚಟುವಟಿಕೆಗಳಿಗೆ ಯಾವುದೇ ತೊಂದರೆಯಿಲ್ಲ ಎಂದು ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿಯ (ಎಸಿಬಿ) ಸಿಇಒ ಹಮೀದ್ ಶಿನ್ವರಿ ಈ ಮೊದಲೇ ಹೇಳಿದ್ದರು. ತಾಲಿಬಾನ್‌ಗಳು ಕ್ರಿಕೆಟ್ ಅನ್ನು ಇಷ್ಟಪಡುತ್ತಾರೆ, ಬೆಂಬಲಿಸುತ್ತಾರೆ ಎಂದು ಹೇಳಿಕೊಂಡಿದ್ದಾರೆ. ಆ್ಘನ್ ಆಡಳಿತವನ್ನು ತಾಲಿಬಾನ್ ವಶಪಡಿಸಿಕೊಂಡರೂ ಕ್ರಿಕೆಟಿಗರು ಹಾಗೂ ಅವರ ಕುಟುಂಬಸ್ಥರು ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಹೇಳಿದ್ದಾರೆ.

    ಲಿಯೋನೆಲ್ ಮೆಸ್ಸಿ ಬಳಸಿದ್ದ ಟಿಶ್ಯು ಪೇಪರ್ 7.44 ಕೋಟಿ ರೂಪಾಯಿಗೆ ಸೇಲ್!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts