More

    ತವರಿನ ಪರಿಸ್ಥಿತಿ ಕಂಡು ಮರುಗುತ್ತಿದ್ದಾರೆ ಆಫ್ಘನ್ ನ ಸ್ಟಾರ್ ಕ್ರಿಕೆಟಿಗ..!

    ನವದೆಹಲಿ: ಅಫ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು ಸಂಪೂರ್ಣ ವಶಪಡಿಸಿಕೊಂಡಿದ್ದಾರೆ. ಹೊಸ ಸರ್ಕಾರ ರಚನೆಗೂ ಸಿದ್ಧತೆಯಲ್ಲಿ ತೊಡಗಿದ್ದಾರೆ. ಸ್ಥಳೀಯ ಜನರು ಮಾತ್ರ ಆತಂಕದಲ್ಲೆ ದಿನದೂಡುತ್ತಿದ್ದಾರೆ. ಇತ್ತ ತವರು ಅಫ್ಘಾನಿಸ್ತಾನದ ಪರಿಸ್ಥಿತಿ ಬಗ್ಗೆ ಸ್ಟಾರ್ ಕ್ರಿಕೆಟಿಗ ರಶೀದ್ ಖಾನ್ ಆತಂಕಗೊಂಡಿದ್ದಾರೆ. ಸದ್ಯದ ಸ್ಥಿತಿಯಲ್ಲಿ ಕುಟುಂಬ ಸದಸ್ಯರನ್ನು ನೋಡಲು ಸಾಧ್ಯವಾಗುತ್ತಿಲ್ಲ. ಆಫ್ಘನ್ ನಿಂದ ವಿಮಾನಯಾನ ಸೇವೆ ಸಂಪೂರ್ಣ ಸ್ಥಗಿತಗೊಂಡಿದೆ. ತವರು ದೇಶದ ಸ್ಥಿತಿಗತಿ ಬಗ್ಗೆ ರಶೀದ್ ಖಾನ್, ಇಂಗ್ಲೆಂಡ್ ಮಾಜಿ ನಾಯಕ ಕೆವಿನ್ ಪೀಟರ್ಸೆನ್ ಎದುರು ಆತಂಕ ಹೊರಹಾಕಿದ್ದಾರೆ.

    ಇದನ್ನೂ ಓದಿ: ರಾಹುಲ್ ಶತಕಕ್ಕೆ ಬಾಲಿವುಡ್ ಸ್ಟಾರ್ ಸುನೀಲ್ ಶೆಟ್ಟಿ ಹೇಳಿದ್ದೇನು?

    ರಶೀದ್ ಖಾನ್, ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಚೊಚ್ಚಲ ಆವೃತ್ತಿಯ ದ ಹಂಡ್ರೆಡ್ ಟೂರ್ನಿಯಲ್ಲಿ ಟ್ರೆಂಟ್ ರಾಕೆಟ್ಸ್ ತಂಡ ಪ್ರತಿನಿಧಿಸುತ್ತಿದ್ದಾರೆ. ತವರಿನಲ್ಲಿ ಹಲವು ಘಟನೆಗಳು ನಡೆಯುತ್ತಿವೆ. ಅಫ್ಘಾನಿಸ್ತಾನದಿಂದ ಕುಟುಂಬವನ್ನು ಹೊರಗೆ ಕರೆತರಲು ಸಾಧ್ಯವಾಗುತ್ತಿಲ್ಲ. ಈ ಕುರಿತು ರಶೀದ್ ಖಾನ್ ಸಾಕಷ್ಟು ವಿಷಯ ಹಂಚಿಕೊಂಡಿದ್ದಾರೆ ಎಂದು ಪೀಟರ್ಸೆನ್ ತಿಳಿಸಿದ್ದಾರೆ. ಅಫ್ಘಾನಿಸ್ತಾನದ ಐಪಿಎಲ್ ಆಟಗಾರರಾದ ರಶೀದ್ ಖಾನ್ ಹಾಗೂ ಮೊಹಮದ್ ನಬಿ ಸೆಪ್ಟೆಂಬರ್ 19ರಿಂದ ಯುಎಇಯಲ್ಲಿ ನಡೆಯಲಿರುವ 14ನೇ ಐಪಿಎಲ್‌ನ ಭಾಗ-2ರಲ್ಲಿ ಆಡಲಿದ್ದಾರೆ ಎಂದು ಸನ್‌ರೈಸರ್ಸ್‌ ಹೈದರಾಬಾದ್ ತಂಡ ತಿಳಿಸಿದೆ. ಸದ್ಯ ಅಲ್ಲಿನ ಪರಿಸ್ಥಿತಿ ಬಗ್ಗೆ ಮಾತನಾಡಿಲ್ಲ. ಆದರೆ, ಅವರಿಬ್ಬರೂ ಐಪಿಎಲ್‌ಗೆ ಲಭ್ಯರಿರುವರು ಎಂದು ತಂಡದ ಸಿಇಒ ಕೆ.ಷಣ್ಮುಗಂ ತಿಳಿಸಿದ್ದಾರೆ. ಸನ್‌ರೈಸರ್ಸ್‌ ತಂಡ ಆಗಸ್ಟ್ 31 ರಂದು ಯುಎಇಗೆ ತೆರಳಲಿದೆ ಎಂದು ಹೇಳಿದ್ದಾರೆ.

    ಇದನ್ನೂ ಓದಿ: ಕಿರಿಯರ ವಿಶ್ವಕಪ್ ವಿಜೇತ ನಾಯಕ ಉನ್ಮುಕ್ತ್ ಚಂದ್ 28ನೇ ವಯಸ್ಸಲ್ಲೇ ನಿವೃತ್ತಿ, 

    ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಅಟ್ಟಹಾಸದಿಂದಾಗಿ ರಾಜತಾಂತ್ರಿಕ ಬಿಕ್ಕಟ್ಟಿನಿಂದ ಬಳಲುತ್ತಿದ್ದರೂ ಕ್ರಿಕೆಟ್ ಚಟುವಟಿಕೆಗಳಿಗೆ ಯಾವುದೇ ತೊಂದರೆಯಿಲ್ಲ ಎಂದು ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿಯ (ಎಸಿಬಿ) ಸಿಇಒ ಹಮೀದ್ ಶಿನ್ವರಿ ತಿಳಿಸಿದ್ದಾರೆ. ತಾಲಿಬಾನ್‌ಗಳು ಕ್ರಿಕೆಟ್ ಅನ್ನು ಇಷ್ಟಪಡುತ್ತಾರೆ, ಬೆಂಬಲಿಸುತ್ತಾರೆ ಎಂದು ಹೇಳಿಕೊಂಡಿದ್ದಾರೆ. ಆಫ್ಘನ್ ಆಡಳಿತವನ್ನು ತಾಲಿಬಾನ್ ವಶಪಡಿಸಿಕೊಂಡರೂ ಕ್ರಿಕೆಟಿಗರು ಹಾಗೂ ಅವರ ಕುಟುಂಬಸ್ಥರು ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts