More

    ಶಾಲೆಗಳೇ ಇವರ ಟಾರ್ಗೆಟ್; 22 ವರ್ಷಗಳ ನಂತರ ಪೊಲೀಸರ ಬಲೆಗೆ ಬಿದ್ದ ಖದೀಮರು

    ಬೆಂಗಳೂರು: ಶಾಲೆಗಳನ್ನು ಟಾರ್ಗೆಟ್​​ ಮಾಡಿಕೊಂಡು ಕಳ್ಳತನ ಮಾಡುತ್ತಿದ್ದ ಖದೀಮರ ಗ್ಯಾಂಗ್​ವೊಂದನ್ನು 22 ವರ್ಷಗಳ ನಂತರ ಅಂತರರಾಜ್ಯ ಕಳ್ಳರನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ಅಣ್ಣಾ ದೊರೈ, ವೀರಮಲೈ ಹಾಗೂ ಬಾಬು ಬಂಧಿತ ಆರೋಪಿಗಳಾಗಿದ್ದಾರೆ. ಈ ಖದೀಮರು ಶಾಲೆಗಳಲ್ಲಿ ಕಳ್ಳತನ ಮಾಡುವುದನ್ನೇ ಗುರಿಯಾಗಿಸಿಕೊಂಡಿದ್ದಾರೆ. ಈ ಕಳ್ಳರ ಗ್ಯಾಂಗ್​ 2000ನೇ ಇಸವಿಯಿಂದ ಕಳ್ಳತನದಲ್ಲಿ ತೊಡಗಿಸಿಕೊಂಡಿದ್ದು, ಬೆಂಗಳೂರು ಸೇರಿದಂತೆ ತಮಿಳುನಾಡಿನ ಶಾಲೆಗಳಲ್ಲಿ ಕಳ್ಳತನ ಮಾಡಿದ್ದಾರೆ. ಆದರೆ ಪೊಲೀಸರಿಗೆ ಇದುವರೆಗೆ ಸಿಕ್ಕಿ ಬಿದ್ದಿರಲಿಲ್ಲ. ಆದರೆ ಪೊಲೀಸರ ಕಾರ್ಯಾಚರಣೆಯಿಂದ ಗ್ಯಾಂಗ್​ ಸಿಕ್ಕಿ ಬಿದ್ದಿದೆ.

    ಇದನ್ನೂ ಓದಿ:  ಗರ್ಲ್ ಫ್ರೆಂಡ್​​ಗಾಗಿ ಸ್ನೇಹಿತನ ಹೃದಯ ಕಿತ್ತು, ಬೆರಳು ಕತ್ತರಿಸಿ ಕೊಂದ ಯುವಕ

    ಜ್ಞಾನಭಾರತಿ ಠಾಣೆ ಪೊಲೀಸರು ಈ ಮೂವರು ಖದೀಮರನ್ನು ಬಂಧಿಸಿದ್ದು, ಆರೋಪಿಗಳಿಂದ 5ಲಕ್ಷ ಮೌಲ್ಯದ ವಿವಿಧ ರೀತಿಯ ಎಲೆಕ್ಟ್ರಾನಿಕ್ ವಸ್ತುಗಳು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ದಾವಣಗೆರೆ, ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ 12 ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣದ ಕುರಿತಾಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

    ಎಂಜಿನ್​ ಸಮಸ್ಯೆ; ಕೆಟ್ಟುನಿಂತ ಇಂಡಿಗೋ, ಗೋಫಸ್ಟ್​​ನ 50ಕ್ಕೂ ಹೆಚ್ಚು ವಿಮಾನಗಳು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts