ಅಶ್ಲೀಲ ವಿಡಿಯೋ ಪ್ರಕರಣ; 43 ದಿನಗಳ ಬಳಿಕ ಹೊಳೆನರಸೀಪುರಕ್ಕೆ ಪ್ರಜ್ವಲ್ ಆಗಮನ..ನಿವಾಸದಲ್ಲಿ SITಯಿಂದ ಸ್ಥಳ ಮಹಜರು

1 Min Read
ಅಶ್ಲೀಲ ವಿಡಿಯೋ ಪ್ರಕರಣ; 43 ದಿನಗಳ ಬಳಿಕ ಹೊಳೆನರಸೀಪುರಕ್ಕೆ ಪ್ರಜ್ವಲ್ ಆಗಮನ..ನಿವಾಸದಲ್ಲಿ SITಯಿಂದ ಸ್ಥಳ ಮಹಜರು
ಹಾಸನ: ಅತ್ಯಾಚಾರ, ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನಕ್ಕೊಳಗಾಗಿರುವ ಪ್ರಜ್ವಲ್ ರೇವಣ್ಣ  ಅವರನ್ನು  ಹೊಳೆನರಸೀಪುರದ  ಚೆನ್ನಾಂಬಿಕಾ ನಿವಾಸಕ್ಕೆ ಕರೆತಂದು ಎಸ್‍ಐಟಿ ಅಧಿಕಾರಿಗಳು  ಸ್ಥಳ ಮಹಜರು ನಡೆಸಿದ್ದಾರೆ.
ಬಂಧನಕ್ಕೊಳಗಾಗಿರುವ ಆರೋಪಿ ಪ್ರಜ್ವಲ್ ಹಲವು ಮಹಿಳೆಯ ಜತೆ ಇದ್ದಾರೆ ಎನ್ನಲಾದ ವೀಡಿಯೋ ವೈರಲ್ ಆಗಿತ್ತು. ವೀಡಿಯೋಗಳು ವೈರಲ್ ಆಗುತ್ತಿದ್ದಂತೆ ಅವರು ಜರ್ಮನಿಗೆ ತೆರಳಿದ್ದರು. ಸುಮಾರು 34 ದಿನಗಳ ಕಾಲ ಯಾರ ಸಂಪರ್ಕಕ್ಕೂ ಸಿಗದೇ ಜರ್ಮನಿಯಲ್ಲಿದ್ದರು.
34 ದಿನಗಳ ನಂತರ ಬಳಿಕ ಭಾರತಕ್ಕೆ ಮರಳುತ್ತಿದ್ದಂತೆ ಎಸ್‍ಐಟಿ ಅಧಿಕಾರಿಗಳು ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. 43 ದಿನಗಳ ಬಳಿಕ ಹೊಳೆನರಸೀಪುರಕ್ಕೆ ಪ್ರಜ್ವಲ್ ಆಗಮನವಾಗಿದೆ. 
ಪ್ರಜ್ವಲ್ ರೇವಣ್ಣ  ಅವರನ್ನು  ಹೊಳೆನರಸೀಪುರದ  ಚೆನ್ನಾಂಬಿಕಾ ನಿವಾಸಕ್ಕೆ ಕರೆತಂದು ಎಸ್‍ಐಟಿ ಅಧಿಕಾರಿಗಳು  ಸ್ಥಳ ಮಹಜರು ನಡೆಸಿದ್ದಾರೆ. ಎಎಸ್‍ಪಿ ವೆಂಕಟೇಶ್ ನಾಯ್ಡು ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
See also  ಪ್ರಜ್ವಲ್ ವಿದೇಶಕ್ಕೆ ಹಾರುತ್ತಾರೆಂದು ಕೇಂದ್ರಕ್ಕೆ ಕನಸು ಬಿದ್ದಿತ್ತೇ ?
TAGGED:
Share This Article