Wednesday, 12th December 2018  

Vijayavani

ಅಂತೂ ಹೊರಬಿತ್ತು ಮಧ್ಯಪ್ರದೇಶದ ಫಲಿತಾಂಶ: ಅತಂತ್ರ ರಾಜ್ಯದಲ್ಲಿ ಯಾರಿಗೆ ಅಧಿಕಾರ?        ಮಧ್ಯಪ್ರದೇಶದಲ್ಲಿ ಸರ್ಕಾರ ರಚನೆ ಮಾಡಲು ಕಾಂಗ್ರೆಸ್​ ಮತ್ತು ಬಿಜೆಪಿ ಎರಡೂ ಪಕ್ಷಗಳಿಂದಲೂ ಹಕ್ಕು ಮಂಡನೆ        ಸಾಂವಿಧಾನಿಕ ಸಂಸ್ಥೆಗಳ ಸ್ವಾಯತ್ತೆಯ ಕುರಿತು ಚರ್ಚಿಸಲು ರಾಜ್ಯಸಭೆಯಲ್ಲಿ ಸಮಯ ಕೋರಿದ ಟಿಎಂಸಿ        ರಾಹುಲ್​ ಗಾಂಧಿಯನ್ನು ದೇಶ ಒಪ್ಪಿಕೊಳ್ಳುತ್ತಿದೆ ಎಂದ ಎಂಎನ್​ಎಸ್​ ವರಿಷ್ಠ ರಾಜ್​ ಠಾಕ್ರೆ        ತೆಲಂಗಾಣದ ಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಕೆ. ಚಂದ್ರಶೇಖರ್​ ರಾವ್​       
Breaking News

ಬುರಾರಿ ಪ್ರಕರಣದ ನಂತರ ಪಾಣಿಪತ್​ನಲ್ಲಿ ಒಂದೇ ಕುಟುಂಬದ ಮೂವರು ನೇಣಿಗೆ ಶರಣು

Sunday, 15.07.2018, 7:42 AM       No Comments

ಪಾಣಿಪತ್​: ಬುರಾರಿಯಲ್ಲಿ ಒಂದೇ ಕುಟುಂಬದ 11 ಮಂದಿ ನೇಣಿಗೆ ಶರಣಾದ ಪ್ರಕರಣದ ನಂತರ ಹರಿಯಾಣದ ಪಾಣಿಪತ್​ನಲ್ಲಿ ಒಂದೇ ಕುಟುಂಬದ ಮೂವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

40 ವರ್ಷದ ಉದ್ಯಮಿ ಹಾಗೂ ಆತನ 15 ವರ್ಷದ ಮಗ ಮತ್ತು 10 ವರ್ಷದ ಮಗಳ ದೇಹಗಳು ಪಾಣಿಪತ್​ನ ಸೆಕ್ಟರ್​ 11ರ ನಿವಾಸದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪೊಲೀಸರಿಗೆ ಪತ್ತೆಯಾಗಿವೆ.

ಉದ್ಯಮಿಯ ಪತ್ನಿಯೂ ದುಪ್ಪಟಾದಿಂದ ಫ್ಯಾನ್​ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾಳೆ. ಆದರೆ ಆಕೆಯ ಯತ್ನ ವಿಫಲವಾಗಿ ನೇಣಿನ ಗಂಟು ಕಳಚಿಕೊಂಡು ನೆಲಕ್ಕೆ ಬಿದ್ದಿದ್ದಾಳೆ. ಸದ್ಯ ಆಕೆಯೂ ಸ್ಥಿತಿ ಗಂಭೀರವಾಗಿದ್ದು ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಚಾಂದಿನಿ ಬಾಘ್​ ಪೊಲೀಸ್​ ಠಾಣೆಯ ಸಬ್​ ಇನ್ಸ್​ಪೆಕ್ಟರ್​ ವಿರೇಂದರ್​ ಹೇಳಿದ್ದಾರೆ.

ತಮ್ಮ ಇಬ್ಬರು ಮಕ್ಕಳನ್ನು ನೇಣಿಗೆ ಬಿಗಿಯುವ ಮುಂಚೆ ಅವರಿಗೆ ವಿಷ ಉಣಿಸಲಾಗಿದೆ ಎಂದು ಶಂಕಿಸಲಾಗಿದೆ. 35 ವರ್ಷದ ಪತ್ನಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಕುಟುಂಬದ ಆತ್ಮಹತ್ಯೆಗೆ ಕಾರಣ ಏನೆಂಬುದನ್ನು ಆಕೆ ಆರೋಗ್ಯದಲ್ಲಿ ಚೇತರಿಕೆ ಕಂಡ ನಂತರವಷ್ಟೇ ಪಡೆಯಲಾಗುವುದು ಎಂದು ಮಾಹಿತಿ ನೀಡಿದ್ದಾರೆ

ಮೃತ ಉದ್ಯಮಿಯನ್ನು ಪಾಣಿಪತ್​ ಸಮೀಪದ ಸಮಲ್ಖಾ ನಿವಾಸಿ ರಿತೇಶ್​ ಎಂದು ಗುರುತಿಸಲಾಗಿದ್ದು, ಈತನ ಕುಟುಂಬ ಬಾಡಿಗೆ ಮನೆಯಲ್ಲಿ ವಾಸಿಸುತ್ತಿತ್ತು. (ಏಜೆನ್ಸೀಸ್​)

Leave a Reply

Your email address will not be published. Required fields are marked *

Back To Top