ಡಬಲ್ ಮರ್ಡರ್ ಬೆನ್ನಿಗೇ ನಗರದಲ್ಲಿ ಮತ್ತೊಬ್ಬ ಉದ್ಯಮಿಯ ಬರ್ಬರ ಕೊಲೆ!

Kapil
Published on

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಉದ್ಯಮಿಗಳಿಬ್ಬರ ಕೊಲೆಯ ಬೆನ್ನಿಗೇ ಇನ್ನೊಬ್ಬ ಉದ್ಯಮಿಯ ಬರ್ಬರ ಹತ್ಯೆ ನಡೆದಿದೆ. ಬೆಂಗಳೂರಿನ ಡಿ.ಜೆ. ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಕೊಲೆ ನಡೆದಿದೆ.

ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ರೌಡಿ ಶೀಟರ್ ಕೂಡ ಆಗಿದ್ದ ಕಪಿಲ್ ಎಂಬಾತ ಕೊಲೆಯಾದ ವ್ಯಕ್ತಿ. ಡಿ.ಜೆ.ಹಳ್ಳಿ ಕೆಎಚ್​ಬಿ ಮುಖ್ಯರಸ್ತೆಯಲ್ಲಿ ಬೈಕ್​ಗಳಲ್ಲಿ ಬಂದಿದ್ದ ನಾಲ್ಕೈದು ದುಷ್ಕರ್ಮಿಗಳು ಮಾರಕಾಸ್ತ್ರಗಳೊಂದಿಗೆ ದಾಳಿ ಮಾಡಿದ್ದು, ಮನಸೋ ಇಚ್ಛೆ ಕೊಚ್ಚಿ ಹಾಕಿದ್ದಾರೆ.

ಗಂಭೀರವಾಗಿ ಗಾಯಗೊಂಡು ತೀವ್ರ ರಕ್ತಸ್ರಾವಕ್ಕೆ ಒಳಗಾಗಿದ್ದ ಕಪಿಲ್​ನನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಈತ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ. ದಾಳಿ ನಡೆದ ಸ್ಥಳಕ್ಕೆ ಡಿಸಿಪಿ ಭೀಮಾಶಂಕರ್ ಗುಳೇದ್ ಭೇಟಿ ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಶೋಧಕ್ಕೆ ಮುಂದಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net