More

    ಮಹಿಳಾ ಟೆಕ್ಕಿ ಮೃತಪಟ್ಟ ಪ್ರಕರಣ: ಚಾಲಕ ಮತ್ತು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಎಫ್ಐಆರ್

    ಬೆಂಗಳೂರು: ಕೆ.ಆರ್.ಸರ್ಕಲ್ ಬಳಿಯ ಅಂಡರ್‌ಪಾಸ್‌ನಲ್ಲಿ ಕಾರು ಮುಳುಗಡೆಯಾಗಿ ಮಹಿಳಾ ಟೆಕ್ಕಿ ಮೃತಪಟ್ಟ ಪ್ರಕರಣ ಸಂಬಂಧಿಸಿದಂತೆ ಚಾಲಕ ಮತ್ತು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಎಫ್​​ಐಆರ್ ದಾಖಲಾಗಿದ್ದು ಚಾಲಕನನ್ನು ಹಲಸೂರುಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ಹುಣಸೂರು ಮೂಲದ ಹರೀಶ್(37) ಬಂಧಿತ ಚಾಲಕನಾಗಿದ್ದು, ಖಾಸಗಿ ಟ್ರಾವೆಲ್ಸ್ ಕಂಪನಿಯ ಚಾಲಕನಾಗಿದ್ದ. ದೂರಿನ ಹಿನ್ನೆಲೆಯಲ್ಲಿ ಹರೀಶ್‌ನನ್ನು ಹಲಸೂರುಗೇಟ್ ಠಾಣೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿ ತೋರಿದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಇದನ್ನೂ ಓದಿ: ಪಿಯುಸಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ತರಬೇತಿ ಅವಶ್ಯ

    ಭಾನುವಾರ ಸಂಜೆ ಸುರಿದ ಭಾರೀ ಮಳೆಗೆ ಕೆ.ಆರ್.ಸರ್ಕಲ್ ಬಳಿಯ ಅಂಡರ್‌ಪಾಸ್‌ನಲ್ಲಿ ಹರೀಶ್‌ನ ಕಾರು ಸಿಲುಕಿ ಮಹಿಳಾ ಟೆಕ್ಕಿ ಭಾನುರೇಖಾ ಎಂಬುವರು ನೀರು ಸೇವಿಸಿ ಅಸ್ವಸ್ಥರಾಗಿ ಮೃತಪಟ್ಟಿದ್ದರು. ಆಂಧ್ರಪ್ರದೇಶ ಮೂಲದ ಭಾನುರೇಖಾ, ಎಲೆಕ್ಟ್ರಾನಿಕ್ ಸಿಟಿಯಲ್ಲಿ ವಾಸವಾಗಿದ್ದು ಇನ್ಫೋಸಿಸ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು.

    ಭಾನುವಾರ ಆಂಧ್ರಪ್ರದೇಶದಿಂದ ಬಂದಿದ್ದ ಕುಟುಂಬ ಸದಸ್ಯರಿಗೆ ಬೆಂಗಳೂರು ನಗರ ಪ್ರದಕ್ಷಿಣೆ ಸಲುವಾಗಿ ಖಾಸಗಿ ಟ್ರಾವೆಲ್ಸ್ ಕಂಪನಿಯ ಕಾರು ಬುಕ್ ಮಾಡಿದ್ದರು. ನಗರ ಪ್ರದಕ್ಷಿಣೆ ನಂತರ ಕಾರು ಚಾಲಕ ಹರೀಶ್, ಕೆ.ಆರ್.ಸರ್ಕಲ್ ಬಳಿಯ ಅಂಡರ್‌ಪಾಸ್‌ನಲ್ಲಿ ಕಾರು ಚಲಾಯಿಸಲು ಮುಂದಾಗಿದ್ದಾನೆ.

    ಆಗ ಕಾರಿನಲ್ಲಿದ್ದವರು ನೀರು ತುಂಬಿದೆ ಬೇಡ ಎಂದರೂ ಕೇಳದ ಚಾಲಕ ಹರೀಶ್, ನೀರು ತುಂಬಿದ ಅಂಡರ್‌ಪಾಸ್‌ನಲ್ಲಿಯೇ ಕಾರು ಚಲಾಯಿಸಿದ್ದಾನೆ. ಕಾರಿನ ಟೈಯರ್ ಮಟ್ಟಕ್ಕಿಂತ ಮೇಲೆ ನೀರು ಬಂದಿದ್ದರಿಂದ ಕಾರು ಆಫ್ ಆಗಿದೆ. ಈ ವೇಳೆ ಪ್ರಯಾಣಿಕರು ಕಾರಿನಿಂದ ಇಳಿಯಲು ಯತ್ನಿಸಿದಾಗ, ಆರೋಪಿ ಮತ್ತೆ ಕಾರು ಸ್ಟಾರ್ಟ್ ಮಾಡುತ್ತೇನೆ ಎಂದಿದ್ದಾನೆ.

    ಇದನ್ನೂ ಓದಿ: ಯಸಳೂರು ಹೋಬಳಿ ಹಲವೆಡೆ ಮಳೆ

    ಅಷ್ಟೋತ್ತಿಗಾಗಲೇ ಕಾರಿನ ಒಳಗಡೆ ನೀರು ತುಂಬಿಕೊಂಡು ಬಾಗಿಲು ತೆಗೆಯಲು ಸಹ ಸಾಧ್ಯವಾಗಿಲ್ಲ. ಕೂಡಲೇ ಸ್ಥಳೀಯರು ನೀರಿಗೆ ಜಿಗಿದು ರಕ್ಷಣೆಗೆ ಧಾವಿಸಿದ್ದಾರೆ. ಅಷ್ಟರಲ್ಲಿ ಭಾನುರೇಖಾ ಅಸ್ವಸ್ಥಗೊಂಡಿದ್ದರು. ಕೂಡಲೇ ಸಮೀಪ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

    ಆದರೆ, ಆಸ್ಪತ್ರೆ ಸಿಬ್ಬಂದಿ ದಾಖಲಿಸಿಕೊಳ್ಳಲು ನಿರ್ಲಕ್ಷ್ಯ ವಹಿಸಿದ್ದರಿಂದ ಭಾನುರೇಖಾ ಮೃತಪಟ್ಟಿದ್ದರು ಎನ್ನಲಾಗಿದೆ. ಇನ್ನು ಘಟನೆ ಸಂಬಂಧ ಕಾರು ಚಾಲಕ ಹರೀಶ್ ಮತ್ತು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಭಾನುರೇಖಾ ಸಹೋದರ ಸಂದೀಪ್ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಹರೀಶ್‌ನನ್ನು ಬಂಧಿಸಲಾಗಿದೆ. ಸಂಬಂಧಿಸಿದ ಬಿಬಿಎಂಪಿ ಅಧಿಕಾರಿಗಳಿಗೆ ನೋಟಿಸ್ ಕೊಟ್ಟು ವಿಚಾರಣೆ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.(ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts