ನವದೆಹಲಿ: ಟಿ20 ವಿಶ್ವಕಪ್ ಮುಗಿದ ಬಳಿಕ ಟೀಮ್ ಇಂಡಿಯಾ ಕೋಚ್ ಹುದ್ದೆಗೆ ರಾಹುಲ್ ದ್ರಾವಿಡ್ ಗುಡ್ ಬೈ ಹೇಳಿದ್ದು, ಅವರ ಉತ್ತರಾಧಿಕಾರಿಯಾಗಿ ಗೌತಮ್ ಗಂಭೀರ್ ಅಧಿಕಾರಿ ವಹಿಸಿಕೊಂಡಿದ್ದಾರೆ. ನೂತನ ಕೋಚ್ ಆಗಿ ಗೌತಿ ಆಯ್ಕೆಯಾದ ಬಳಿಕ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾಗೆ ಸಿಹಿ-ಕಹಿ ಜತೆಯಾಗಿ ಲಭಿಸಿದ್ದು, ಆ ಬಳಿಕ ಟೀಮ್ ಇಂಡಿಯಾ ಸುದೀರ್ಘ ವಿರಾಮ ಪಡೆದುಕೊಂಡಿದ್ದು, ಸೆಪ್ಟೆಂಬರ್ 19 ರಿಂದ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆಡಲಿದೆ. ಈ ಸರಣಿಯು ಗಂಭೀರ್ ಅವರಿಗೆ ನಿಜವಾದ ಪರೀಕ್ಷೆಯಾಗಿದೆ ಎಂದರೆ ತಪ್ಪಾಗಲಾರದು.
ಏಕೆಂದರೆ ಗಂಭೀರ್ ತಂಡವನ್ನು ಮುಂದಿನ ವರ್ಷ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ, ವಿಶ್ವ ಟೆಸ್ಟ್ ಚಾಂಪಿಯನ್ಶಿಪ್, ಟಿ20 ವಿಶ್ವಕಪ್, ಏಕದಿನ ವಿಶ್ವಕಪ್ಗೆ ತಂಡವನ್ನು ಸಜ್ಜುಗೊಳಿಸಬೇಕಿದ್ದು, ಅವರಿಗೆ ನಿಜವಾದ ಅಗ್ನಿ ಪರೀಕ್ಷೆ ಎದುರಾಗಿದೆ. ಇದೆಲ್ಲದರ ನಡುವೆ ಗಂಭೀರ್ ಕುರಿತು ರಿಷಭ್ ಪಂತ್ ನೀಡಿರುವ ಹೇಳಿಕೆ ಸಖತ್ ವೈರಲ್ ಆಗುತ್ತಿದೆ. ಜಿಯೋ ಸಿನಿಮಾಗೆ ನೀಡಿದ ಸಂದರ್ಶದಲ್ಲಿ ಈ ಕುರಿತು ಮಾತನಾಡಿರುವ ಪಂತ್ ಗೌತಮ್ ಗಂಭೀರ್ ನೇತೃತ್ವದಲ್ಲಿ ಆಗಬಹುದಾದ ದೊಡ್ಡ ಬದಲಾವಣೆ ಯಾವುದು ಮತ್ತು ಅದು ಭಾರತೀಯ ಕ್ರಿಕೆಟ್ ಅನ್ನು ಹೇಗೆ ಮುಂದಕ್ಕೆ ಕೊಂಡೊಯ್ಯುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ್ದಾರೆ.
ರಾಹುಲ್ ದ್ರಾವಿಡ್ ಅವರು ಒಬ್ಬ ವ್ಯಕ್ತಿಯಾಗಿ ಮತ್ತು ತರಬೇತುದಾರನಾಗಿ ತುಂಬಾ ಸಮತೋಲಿತ ಎಂದು ನಾನು ಭಾವಿಸುತ್ತೇನೆ. ಆದರೆ, ಗೌತಮ್ ಗಂಭೀರ್ ಅವ್ರು ಹೆಚ್ಚು ಆಕ್ರಮಣಕಾರಿಯಾಗಿದ್ದು, ಅವರು ಒಂದೇ ನಿಲುವಿಗೆ ಬದ್ಧರಾಗಿರುತ್ತಾರೆ. ಗೆಲ್ಲಲೇ ಬೇಕು ಎಂದರೆ ಗೆಲ್ಲಲೇ ಬೇಕು, ಅದಕ್ಕಾಗಿ ನೀವು ಸರಿಯಾದ ಬ್ಯಾಲೆನ್ಸ್ ಕಂಡುಕೊಳ್ಳಬೇಕು ಮತ್ತು ಇದು ಅಂತರರಾಷ್ಟ್ರೀಯ ಕ್ರಿಕೆಟ್‌ನ ಅತ್ಯುತ್ತಮ ಭಾಗವಾಗಿದೆ.
ಇದನ್ನೂ ಓದಿ: ದೇವಸ್ಥಾನ ನಿರ್ಮಾಣಕ್ಕೆ ಗೃಹಲಕ್ಷ್ಮಿ ಹಣವನ್ನು ದೇಣಿಗೆಯಾಗಿ ನೀಡಿದ 50ಕ್ಕೂ ಹೆಚ್ಚು ಮಹಿಳೆಯರು
ಸೆಪ್ಟೆಂಬರ್ 19ರಿಂದ ಬಾಂಗ್ಲಾದೇಶ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದ್ದು, ನಾವು ಎದುರಾಳಿಗಳನ್ನು ಲಘುವಾಗಿ ಪರಿಗಣಿಸಬಾರದು. ಏಕೆಂದರೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಶ್ರೀಲಂಕಾದಂತಹ ದೇಶಗಳು ಏಷ್ಯನ್ ಪರಿಸ್ಥಿತಿಗಳಲ್ಲಿ ಉತ್ತಮ ಪ್ರದರ್ಶನ ನೀಡುತ್ತವೆ. ಏಕೆಂದರೆ ಆ ತಂಡಗಳು ಇಲ್ಲಿನ ವಿಕೆಟ್‌ಗಳಿಗೆ ಒಗ್ಗಿಕೊಂಡಿವೆ.
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಯಾವುದೇ ಸರಣಿಯನ್ನು ಲಘುವಾಗಿ ಪರಿಗಣಿಸಲಾಗುವುದಿಲ್ಲ. ಒತ್ತಡ ಯಾವಾಗಲೂ ಇರುತ್ತದೆ ಏಕೆಂದರೆ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ, ನೀವು ಯಾವುದೇ ಸರಣಿಯನ್ನು ಲಘುವಾಗಿ ತೆಗೆದುಕೊಳ್ಳುವಂತಿಲ್ಲ. ಗೆಲುವು ಮತ್ತು ಸೋಲಿನ ನಡುವಿನ ಅಂತರವು ತುಂಬಾ ಚಿಕ್ಕದಾಗಿದೆ ಎಂದು ಜಿಯೋ ಸಿನಿಮಾಗೆ ನೀಡಿದ ಸಂದರ್ಶನದಲ್ಲಿ ಪಂತ್ ಹೇಳಿದ್ದಾರೆ.