More

    ಮೊನ್ನೆ ಎಚ್​ಡಿಕೆ, ನಿನ್ನೆ ಡಿಕೆಶಿ, ಇಂದು ಮೊಯ್ಲಿ!; ಏನದು?

    ಬೆಳಗಾವಿ: ಮೊನ್ನೆ ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ, ನಿನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಇಂದು ಮತ್ತೊಬ್ಬರು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ.. ಹೀಗೆ ಒಬ್ಬೊಬ್ಬರೇ ತಮ್ಮ ಹೇಳಿಕೆಗಳ ಮೂಲಕ ಗಮನ ಸೆಳೆಯಲಾರಂಭಿಸಿದ್ದಾರೆ.

    ಅದೇನೆಂದರೆ ಅಮಾಯಕರ ಬೆನ್ನಿಗೆ ನಿಂತಿರುವುದು. ಹುಬ್ಬಳ್ಳಿ ಗಲಭೆ ವಿಚಾರವಾಗಿ ಅಮಾಯಕರಿಗೆ ತೊಂದರೆ ಕೊಡಬೇಡಿ ಎಂದು ಎಚ್.ಡಿ. ಕುಮಾರಸ್ವಾಮಿ ಮತ್ತು ಡಿ.ಕೆ.ಶಿವಕುಮಾರ್​ ಈಗಾಗಲೇ ಹೇಳಿದ್ದು, ಆ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಸಾಕಷ್ಟು ಮಂದಿ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ವಿರೋಧವನ್ನೂ ವ್ಯಕ್ತಪಡಿಸಿದ್ದರು. ಇದೀಗ ಮಾಜಿ ಸಿಎಂ ವೀರಪ್ಪ ಮೊಯ್ಲಿ ಕೂಡ ಹುಬ್ಬಳ್ಳಿಯ ನಡೆದ ಗಲಭೆಗೆ ಸಂಬಂಧಿಸಿದಂತೆ ಅಮಾಯಕರ ಬೆನ್ನಿಗೆ ನಿಂತಿದ್ದಾರೆ.

    ಹುಬ್ಬಳ್ಳಿ ಗಲಾಟೆ ಪ್ರಕರಣದಲ್ಲಿ ಅಮಾಯಕರನ್ನು ಬಂಧಿಸಲಾಗುತ್ತಿದೆ ಎಂಬ ಮಾಹಿತಿ ಬಂದಿದೆ. ಸರ್ಕಾರವು ಈ ವಿಷಯದಲ್ಲಿ ಜಾತ್ಯತೀತವಾಗಿ ಕೆಲಸ‌ ಮಾಡಬೇಕು. ಸರ್ಕಾರ ತಾರತಮ್ಯ ‌ನೀತಿ ಅನುಸರಿಸಬಾರದು ಎಂದು ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೊಯ್ಲಿ ತಿಳಿಸಿದರು.

    ಕಾಂಗ್ರೆಸ್​ಗಿದೆ ಪ್ರಶಾಂತ್ ಕಿಶೋರ್ ಅಗತ್ಯ

    ಮೊನ್ನೆ ಎಚ್​ಡಿಕೆ, ನಿನ್ನೆ ಡಿಕೆಶಿ, ಇಂದು ಮೊಯ್ಲಿ!; ಏನದು?ಕಾಂಗ್ರೆಸ್​ಗೆ ಚುನಾವಣಾ ನೀತಿ ತಜ್ಞ ಪ್ರಶಾಂತ ಕಿಶೋರ್ ಅವಶ್ಯಕತೆ ಇದೆ ಎಂದು ಹೇಳಿದ ಅವರು, ಪ್ರಶಾಂತ್ ಅವರನ್ನು ಕರ್ನಾಟಕ ಸೇರಿ‌ ಎಲ್ಲ ರಾಜ್ಯಗಳ ಚುನಾವಣೆಯಲ್ಲಿ ಬಳಸಿಕೊಳ್ಳಬೇಕು ಎಂಬ ಅಭಿಪ್ರಾಯವನ್ನೂ ವ್ಯಕ್ತಪಡಿಸಿದ್ದಾರೆ. ಪಂಚ ರಾಜ್ಯಗಳ ಚುನಾವಣೆಯಲ್ಲಿ ಸೋಲು, ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಬಿಜೆಪಿಯನ್ನು ಎದುರಿಸಲು, ಪಕ್ಷವನ್ನು ಮರಳಿ ಅಧಿಕಾರಕ್ಕೆ ತರಲು ಕಾಂಗ್ರೆಸ್ ಪುನಶ್ಚೇತನಗೊಳಿಸಬೇಕಾಗಿದೆ. ಈ ಸಂಬಂಧ ಸೋನಿಯಾ ಗಾಂಧಿಯವರಿಗೂ ಪತ್ರ ಬರೆದಿದ್ದೇನೆ ಎಂದು ಮೊಯ್ಲಿ ಹೇಳಿದರು.

    ಇದನ್ನೂ ಓದಿ: ಬಾಲಿವುಡ್​ ಮೇಲೆ ಅಣುಬಾಂಬ್​!; ನಿರ್ದೇಶಕ ರಾಮ್​ಗೋಪಾಲ್​ ವರ್ಮಾ ಹೀಗಂದಿದ್ದೇಕೆ?

    ದೇಶದಲ್ಲಿ ಕಾಂಗ್ರೆಸ್ ನೆಲಕಚ್ಚಿದೆ ಎಂದು ಕೈ ಕಟ್ಟಿ ಕುಳಿತುಕೊಳ್ಳುವ ಅವಶ್ಯಕತೆ ಇಲ್ಲ.‌ ಪುನಃ ಗೆದ್ದು ಅಧಿಕಾರಕ್ಕೆ ಬರುವ ಶಕ್ತಿ ಕಾಂಗ್ರೆಸ್​ಗಿದೆ. ಈ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ, ಚುನಾವಣೆ ಹಾಗೂ ಬಿಜೆಪಿ‌‌ ಮಣಿಸಲು ರಾಜಕೀಯ ತಂತ್ರಗಳನ್ನು ರೂಪಿಸಬೇಕು. ಆ ನಿಟ್ಟಿನಲ್ಲಿ ಪ್ರಶಾಂತ ಕಿಶೋರ್ ಅವರನ್ನು ಪಕ್ಷ ಬಳಸಿಕೊಳ್ಳಬೇಕು. ಅದರಿಂದ ಉತ್ತಮ ಫಲ ಸಿಗುತ್ತದೆ ಎಂಬ ಸಲಹೆಯನ್ನು ಸೋನಿಯಾ ಗಾಂಧಿಗೆ ತಿಳಿಸಿದ್ದೇನೆ ಎಂದರು.

    ಇದನ್ನೂ ಓದಿ: ಇಪ್ಪತ್ತರ ಯುವತಿಯ ಹುಡುಕಾಟದಲ್ಲಿ ‘ರಾಮಾ ರಾಮಾ ರೇ’ ಸತ್ಯ!

    ಕರ್ನಾಟಕ ದಲ್ಲಿ 2023 ಮತ್ತು ದೇಶದಲ್ಲಿ 2024 ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಬಿಜೆಪಿ ಏನೇ ತಂತ್ರ ರೂಪಿಸಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಶತಃಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಹುಬ್ಬಳ್ಳಿ ಗಲಾಟೆ ಸಂಬಂಧ ಅಮಾಯಕರಿಗೆ ತೊಂದರೆ ಕೊಡಬೇಡಿ: ಪೊಲೀಸರಿಗೆ ಎಚ್​ಡಿಕೆ ಮನವಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts