ಭಾರತದ ನಂತರ ಅಫ್ಘಾನಿಸ್ತಾನದಿಂದಲೂ ಪಾಕಿಸ್ತಾನದಲ್ಲಿ ಐಸಿಸಿ ಚಾಂಪಿಯನ್ಸ್​ ಟ್ರೋಫಿ ಆಡಲು ನಿರಾಕರಣೆ?

web afghan
Published on

ನವದೆಹಲಿ: ಮುಂದಿನ ವರ್ಷದ ಐಸಿಸಿ ಚಾಂಪಿಯನ್ಸ್​ ಟ್ರೋಫಿಯ ಪಂದ್ಯಗಳನ್ನು ಪಾಕಿಸ್ತಾನದಲ್ಲಿ ಆಡಲು ಅಫ್ಘಾನಿಸ್ತಾನ ಕ್ರಿಕೆಟ್​ ತಂಡವೂ ನಿರಾಕರಿಸಿದೆ ಎಂದು ವರದಿಯಾಗಿದೆ. ಭದ್ರತಾ ಭೀತಿಯಿಂದಾಗಿ ಅ್ಘಾನಿಸ್ತಾನ ಈ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.

ಪಾಕಿಸ್ತಾನದ ವೆಬ್​ಸೈಟ್​ ಒಂದು ಈ ಬಗ್ಗೆ ವರದಿ ಮಾಡಿದೆ. ಆದರೆ ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಣೆಗಳನ್ನು ನೀಡಿಲ್ಲ. ಭಾರತ ತಂಡ ಚಾಂಪಿಯನ್ಸ್​ ಟ್ರೋಫಿಯಲ್ಲಿ ತನ್ನ ಪಂದ್ಯಗಳನ್ನು ಪಾಕಿಸ್ತಾನದಲ್ಲಿ ಆಡಲು ನಿರಾಕರಿಸಿದೆ ಎಂಬ ವರದಿಗಳ ನಡುವೆ ಅಫ್ಘಾನಿಸ್ತಾನವೂ ಆಡಲು ಹಿಂದೇಟು ಹಾಕಿರುವ ಸುದ್ದಿ ಹೊರಬಿದ್ದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net