ತೆಲಸಂಗ ಗ್ರಾಮದ ರೈತರ ಸಮಸ್ಯೆ ಆಲಿಸಿದ ಜಿ.ಪಂ. ಸಿಇಒ ರಾಹುಲ್ ಶಿಂಧೆ

blank

ಬೆಳಗಾವಿ: ಜಿಲ್ಲಾದ್ಯಂತ ಉತ್ತಮ ಮಳೆಯಾಗಿದ್ದು, ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ ಡಿಎಪಿ, ಹಾಗೂ ಯುರಿಯಾ ಕೊರತೆಯಾಗದಂತೆ ನೋಡಿಕೊಳ್ಳುವಂತೆ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳಿಗೆ ಸೂಚಿಸಿದರು.

ಅಥಣಿ ತಾಲೂಕಿನ ತೆಲಸಂಗ ರೈತ ಸಂಪರ್ಕ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿ ರೈತ ಸಮಸ್ಯೆಗಳ ಆಲಿಸಿದ ಅವರು ಸಾರ್ವಜನಿಕರಿಗೆ ಅಗತ್ಯ ಮಾಹಿತಿ ನೀಡಬೇಕು. ಉತಾರಗಳಿಗೆ ಆಧಾರ್ ಜೋಡಣೆ ನಿಗದಿತ ಸಮಯದಲ್ಲಿ ಪೂರ್ಣಗೊಳಿಸಬೇಕು ಎಂದರು. ಇದೇ ವೇಳೆ ರೈತರು, ದ್ರಾಕ್ಷಿ ಬೆಳೆಯಿಂದಾಗುತ್ತಿರುವ ಸಮಸ್ಯೆಗಳನ್ನು ಹಾಗೂ ಕುಡಿಯುವ ನೀರಿನ ಸಮಸ್ಯೆ ಮುಖ್ಯ ಕಾರ್ನಿರ್ವಾಹಕ ಅಧಿಕಾರಿಗಳ ಗಮನಕ್ಕೆ ತಂದರು.

ಜಿಲ್ಲಾದ್ಯಂತ ಉತ್ತಮ ಮಳೆಯಾಗಿದ್ದು, ಎಲ್ಲ ಜಲಾಶಯಗಳು ಭರ್ತಿಯಾಗಿವೆ. ಈ ಬಾರಿ ನೀರನ ಅಭಾವ ತಪ್ಪಲಿದೆ. ಜೆಜೆಎಂ ಯೋಜನೆಯಡಿ 24*7 ಕುಡಿಯುವ ನೀರಿನ ಟೆಂಡರ್ ಪ್ರಕ್ರಿಯೆ ಹಂತದಲ್ಲಿದ್ದು, ಟೆಂಡರ್ ಪ್ರಕ್ರಿಯೆ ಮುಗಿದ ಕೂಡಲೇ ಕಾಮಗಾರಿ ಆರಂಭಿಸಿ ನೀರಿನ ಅಭಾವ ತಪ್ಪಲಿದೆ ಎಂದು ತಿಳಿಸಿದರು.

*ದ್ರಾಕ್ಷಿ ಬೆಳೆ ಸಂರಕ್ಷಣೆಗಾಗಿ ಕೋಲ್ಡ್ ಸ್ಟೋರೆಜ್ :* ವಿಜಯಪುರ ಜಿಲ್ಲೆಯ ತೊರವಿ ಬಳಿ ದ್ರಾಕ್ಷಿ ಸಂರಕ್ಷಣೆಗಾಗಿ ಸರ್ಕಾರದಿಂದ 15 ಸಾವಿರ ಮೆಟ್ರಿಕ್ ಟನ್ ಕೋಲ್ಡ್ ಸ್ಟೋರೆಜ್ ಆರಂಭಿಸಲಾಗುತ್ತಿದೆ 2 ನೇ ಹಂತದ ಟೆಂಡರ್ ಪ್ರಕ್ರಿಯೆ ಹಂತದಲ್ಲಿದ್ದು, ಮುಂದಿನ ದಿನಗಳಲ್ಲಿ ದ್ರಾಕ್ಷಿ ಬೆಳಗಾರರು ಇದರ ಲಾಭ ಪಡೆಯಬೇಕು ಎಂದು ತಿಳಿಸಿದರು.

*ವೀರ ಮಹಿಳೆ ಒನಕೆ ಓಬವ್ವ ಜಯಂತೋತ್ಸವ ಆಚರಣೆ:*
ಬಳಿಕ ತೆಲಸಂಗ ಗ್ರಾಪಂ ಕಚೇರಿಗೆ ಭೇಟಿ ವೀರ ಮಹಿಳೆ ಒನಕೆ ಓಬವ್ವ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು. ಅಂಗನವಾಡಿ ಕೇಂದ್ರ, ರಸ್ತೆ, ಜೆಜೆಎಂ ಕಾಮಗಾರಿ, ಗ್ರಾಮ ಪಂಚಾಯತ ಕಟ್ಟಡಗಳ ಪರಿಶೀಲನೆ ನಡೆಸಿದರು. ಗ್ರಾಮ ಪಂಚಾಯತ ಅಧ್ಯಕ್ಷರೊಂದಿಗೆ ಸಭೆ ನಡೆಸಿ, ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸಬೇಕು. ಶಾಲಾ, ಅಂಗನವಾಡಿ ಕೇಂದ್ರಗಳಿಗೆ ಬೆಂಚ್, ಕುರ್ಚಿ ಅಗತ್ಯ ಸೌಕರ್ಯ ಕಲ್ಪಸಬೇಕು ಎಂದು ತಿಳಿಸಿದರು.

ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ಕಲ್ಲಾಪೂರ, ಕಾರ್ಯನಿರ್ವಾಹಕ ಅಭಿಯಂತರರು ವೀರಣ್ಣ ವಾಲಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಅಧಿಕಾರಿ ರವೀಂದ್ರ ಮುರಗಾಲಿ, ಸಹಾಯಕ ನಿರ್ದೇಶಕರು(ಗ್ರಾಉ) ಮೆಹೆಬೂಬ ಕೋತ್ವಾಲ್, ತೋಟಗಾರಿಕೆ ಸಹಾಯಕ ನಿರ್ದೇಶಕಿ ರೇಖಾ ಹಳ್ಳೂರ , ಕೃಷಿ ಇಲಾಖೆ ಸಹಾಯಕ ನಿರ್ದೇಶಕ ನಿಂಗಣ್ಣ ಬಿರಾದಾರ, ತಾಲ್ಲೂಕು ವೈದ್ಯಾಧಿಕಾರಿ ಡಾ. ಕಾಗೆ, ಶಿಶು ಅಭಿವೃದ್ದಿ ಅಧಿಕಾರಿ ರೇಣುಕಾ ಹೊಸಮನಿ ಇತರರಿದ್ದರು.

Share This Article

ಭಾರತದ ನೋಟಿನಲ್ಲಿರುವ ಮಹಾತ್ಮ ಗಾಂಧಿಜಿ ಅವರ ಫೋಟೋ ಕ್ಲಿಕ್ಕಿಸಿದ್ದು ಯಾವಾಗ & ಎಲ್ಲಿ?; ಇಲ್ಲಿದೆ ಸಂಪೂರ್ಣ ಮಾಹಿತಿ | Information

ಭಾರತದ ನೋಟಿನಲ್ಲಿ ಮಹಾತ್ಮ ಗಾಂಧಿ ಅವರ ಫೋಟೋವನ್ನು ನೀವು ನೋಡಿರಬಹುದು. ಆದರೆ ನೋಟಿನ ಮೇಲೆ ನಗುತ್ತಿರುವ…

ಇಬ್ಬನಿಯಿಂದ ಚಳಿಗಾಲದಲ್ಲಿ ತುಳಸಿ ಗಿಡ ಹಾಳಾಗುತ್ತಿದೆಯೇ?; ಆರೈಕೆಗಾಗಿ ಇಲ್ಲಿದೆ ಸಿಂಪಲ್​ ಟ್ರಿಕ್​​ | Health Tips

ತುಳಸಿಯು ಔಷಧೀಯ ಸಸ್ಯವಾಗಿರುವುದರ ಜತೆಗೆ ಧಾರ್ಮಿಕ ನಂಬಿಕೆಗಳನ್ನೂ ಹೊಂದಿದೆ. ಈ ಸಸ್ಯವನ್ನು ಹಿಂದೂ ಧರ್ಮದಲ್ಲಿ ಅತ್ಯಂತ…

ಬಿಪಿ ಹೆಚ್ಚಾಗಲು ಈ ಆಹಾರ ಪದಾರ್ಥಗಳು ಕಾರಣವೇ; ತಜ್ಞರು ಹೇಳಿದ್ದೇನು? | Health Tips

ನೂಡಲ್ಸ್, ಪಾಪಡ್, ಉಪ್ಪಿನಕಾಯಿ, ಸಾಸ್ ಮತ್ತು ನಮ್ಕೀನ್ ಬಹುತೇಕ ಈ ಎಲ್ಲಾ ಆಹಾರ ಪದಾರ್ಥಗಳು ಪ್ರತಿಯೊಬ್ಬರ…