More

    ಲೋಕಸಭಾ ಚುನಾವಣೆ ಬಳಿಕ ಸಿದ್ದರಾಮಯ್ಯ ರಾಜೀನಾಮೆ ಖಚಿತ: ಭವಿಷ್ಯ ನುಡಿದ ಜಗದೀಶ್​ ಶೆಟ್ಟರ್​

    ಹುಬ್ಬಳ್ಳಿ: ಇಂದು ಹುಬ್ಬಳ್ಳಿಯಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಜಗದೀಶ್​ ಶೆಟ್ಟರ್​, ಲೋಕಸಭಾ ಚುನಾವಣೆ ನಂತರ ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ಖಚಿತ ಎಂದು ಭವಿಷ್ಯ‌ ನುಡಿದಿದ್ದಾರೆ.

    ಇದನ್ನೂ ಓದಿ: ಆ ಒಂದು ಕೆಲಸಕ್ಕೆ ಮಾಡಿದ್ದಕ್ಕೆ ನನ್ನ ವೇಶ್ಯೆ ಅಂತ ಕರೆದರು ಎಂದ್ರು ಅಪ್ಪು ಜತೆ  ‘ರಣವಿಕ್ರಮ’ದಲ್ಲಿ ನಟಿಸಿದ್ದ ಆದಾ ಶರ್ಮಾ

    “ನಾವು ಯಾವ ಆಪರೇಷನ್ ಮಾಡುವ ಅವಶ್ಯಕತೆ ಇಲ್ಲ. ಕಾಂಗ್ರೆಸ್‌ನಲ್ಲಿನ ಗುಂಪುಗಾರಿಕೆಯಿಂದ ಸರ್ಕಾರ ಪತನವಾಗುತ್ತದೆ. ಅದಕ್ಕೆ ಗುಬ್ಬಿ ಶಾಸಕರ ಬಹಿರಂಗ ಹೇಳಿಕೆಯೇ ಸಾಕ್ಷಿ! ಕಾಂಗ್ರೆಸ್‌‌ನಲ್ಲಿ ಗುಂಪುಗಳಿವೆ, ಈ ಗುಂಪುಗಳಿಂದ ಸರ್ಕಾರ ಬಿದ್ದು ಹೋಗಲಿದೆ. ಅಧಿಕಾರಕ್ಕಾಗಿ ಅವರಲ್ಲಿಯೇ ಕಿತ್ತಾಟ ನಡೆದಿದೆ. ಕೆಲವು ದಿನಗಳ ಹಿಂದಷ್ಟೇ ದಲಿತ ಸಿಎಂ ಕೂಗು ಕೇಳಿಬಂದಿತ್ತು, ಅನಂತರ ನಾಲ್ಕು ಡಿಸಿಎಂ ಮಾಡಬೇಕೆಂಬುದು ಮುನ್ನಲೆಗೆ ಬಂದಿತ್ತು” ಎಂದರು.

    “ಈಗ ಸಿಎಂ ಬದಲಾವಣೆ ವಿಚಾರ ಭಾರೀ ಚರ್ಚೆಯಾಗುತ್ತಿದೆ. 2014 ರಲ್ಲಿಯೂ ಸಿದ್ದರಾಮಯ್ಯ ಮುಖ್ಯಮಂತ್ರಿ ಅಧಿಕಾರದಲ್ಲಿದ್ದಾಗ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ಆಗ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟಿದ್ರಾ? ಈಗಿನ ಎಲ್ಲಾ ಬೆಳವಣಿಗೆ ನೋಡಿದಾಗ ಲೋಕಸಭಾ ಚುನಾವಣೆ ನಂತರ ಸರ್ಕಾರ ಪತನವಾಗುವುದು ಖಚಿತ. ವಿನಾಕಾರಣ ಬಿಜೆಪಿಯ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ” ಎಂದು ಹೇಳಿದರು.

    ಇದನ್ನೂ ಓದಿ: ಕಳ್ಳಬಟ್ಟಿ ಸೇವಿಸಿ 21 ಬಲಿ: 40 ಮಂದಿ ಅಸ್ವಸ್ಥ! ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ ಸಾಧ್ಯತೆ!

    “ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂಪಾಯಿ ಆಮಿಷ ಹಸಿ ಸುಳ್ಳು. ಇದನ್ನು ಶಾಮನೂರು ಶಿವಶಂಕರಪ್ಪ ಅವರೇ ಸ್ಪಷ್ಟಪಡಿಸಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಬೀಳಿಸಲು ಕಾಂಗ್ರೆಸ್‌ನಲ್ಲಿಯೇ ಒಳತಂತ್ರ ರೂಪಿಸಲಾಗುತ್ತಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಹಸಿಸುಳ್ಳುಗಳನ್ನು ಹೇಳುತ್ತಿದ್ದಾರೆ” ಎಂದು ರಾಜ್ಯ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದರು.

    ನನಗೆ ಸಾಕಾಗಿದೆ, 1 ಗಂಟೆಗೆ 5 ಲಕ್ಷ ರೂ. ಕೊಡಿ, ಬನ್ನಿ… ವೈರಲ್ ಆಗ್ತಿದೆ ಈ ನಿರ್ದೇಶಕನ ಹೇಳಿಕೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts