ಮಗುವಿನ ನಿರೀಕ್ಷೆಯಲ್ಲಿ ತವರಿಗೆ ಮರಳಿದ ವಿರಾಟ್ ಕೊಹ್ಲಿ

ಅಡಿಲೇಡ್: ಆಸ್ಟ್ರೇಲಿಯಾ ಪ್ರವಾಸದ ಮೊದಲ ಟೆಸ್ಟ್ ಪಂದ್ಯದ ಬಳಿಕ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಿರೀಕ್ಷೆಯಂತೆಯೇ ಪಿತೃತ್ವದ ರಜೆಯ ಮೇರೆಗೆ ಮಂಗಳವಾರ ತವರಿಗೆ ಪ್ರಯಾಣ ಬೆಳೆಸಿದ್ದಾರೆ. ತಂಡದ ನಾಯಕತ್ವವನ್ನು ಉಪನಾಯಕ ಅಜಿಂಕ್ಯ ರಹಾನೆ ಅವರಿಗೆ ಒಪ್ಪಿಸುವ ಮುನ್ನ ಕೊಹ್ಲಿ ಸಹ-ಆಟಗಾರರೊಂದಿಗೆ ಸ್ಫೂರ್ತಿದಾಯಕ ಮಾತುಕತೆ ನಡೆಸಿದ್ದಾರೆ. ಅಡಿಲೇಡ್‌ನಲ್ಲಿ ಕೇವಲ 36 ರನ್‌ಗೆ ಆಲೌಟ್ ಆಗಿ ಹೀನಾಯ ಸೋಲು ಕಂಡ ಬಳಿಕ ಭಾರತ ತಂಡದ ಆಟಗಾರರು ಮಾನಸಿಕವಾಗಿ ಸಾಕಷ್ಟು ಕುಗ್ಗಿದ್ದಾರೆ. ಹೀಗಾಗಿ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಆತಿಥೇಯ ಆಸೀಸ್‌ಗೆ … Continue reading ಮಗುವಿನ ನಿರೀಕ್ಷೆಯಲ್ಲಿ ತವರಿಗೆ ಮರಳಿದ ವಿರಾಟ್ ಕೊಹ್ಲಿ